ಜಿಲ್ಲಾ ಘಟಕ ಶೀಘ್ರ ಪುನಾರಚನೆ

Team Udayavani, Aug 6, 2018, 6:30 AM IST

hd-devegowda-8000-05.jpg

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನವೇ ಜೆಡಿಎಸ್‌ ಜಿಲ್ಲಾ ಘಟಕಗಳನ್ನು ಪುನಾರಚಿಸಲು ತೀರ್ಮಾನಿಸಲಾಗಿದೆ. ಅದರಂತೆ ನಾನೂ ಸೇರಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಪ್ರಮುಖರು ಆ.11ರಿಂದ 14ರವರೆಗೆ ನಾಲ್ಕು ದಿನಗಳ ಕಾಲ ಸ್ಥಳೀಯ ಘಟಕಗಳು ಸ್ಥಗಿತಗೊಂಡಿರುವ ಅಥವಾ ಕ್ರಿಯಾಶೀಲವಾಗದೇ ಇರುವ ಜಿಲ್ಲೆಗಳಿಗೆ ಭೇಟಿ ನೀಡಿ ಅವುಗಳನ್ನು ಪುನಾರಚನೆ ಮಾಡಲಿದ್ದೇವೆ. ಆ. 15ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲಿದ್ದೇವೆಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬೇರೆ ಜವಾಬ್ದಾರಿ ಇರುವುದರಿಂದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲು ಕಷ್ಟವಾಗುತ್ತದೆ. ಹೀಗಾಗಿ ಈ ಜವಾಬ್ದಾರಿಯನ್ನು ನಾನು ಮತ್ತು ನೂತನ ರಾಜ್ಯಾಧ್ಯಕ್ಷರು ತೆಗೆದುಕೊಳ್ಳುತ್ತೇವೆ’ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗಿನ ಮೈತ್ರಿ ಕುರಿತಂತೆ ಪ್ರತಿಕ್ರಿಯಿಸಿದ ದೇವೇಗೌಡರು, ಎರಡೂ ಪಕ್ಷಗಳು ತಮ್ಮ ಶಕ್ತಿಯನ್ನು ಅರ್ಥ ಮಾಡಿಕೊಂಡು ಮತ್ತು ಆ ಭಾಗದಲ್ಲಿ ಹಿಂದೆ ಏನಾಗಿದೆ ಎಂಬುದನ್ನು ತಿಳಿದುಕೊಂಡು ರಾಷ್ಟ್ರಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ವೇಳೆ ರಾಜ್ಯ ಮುಖಂಡರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.

ಜೆಡಿಎಸ್‌ ಮತ್ತು ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ, ಅದರಲ್ಲೂ ಮುಖ್ಯವಾಗಿ ಜೆಡಿಎಸ್‌ ಆ ಭಾಗಕ್ಕೆ ಏನೆಲ್ಲ ಕೆಲಸ ಮಾಡಿದೆ ಎಂಬುದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕಿರು ಹೊತ್ತಿಗೆ ಹೊರ ತರಲಾಗುವುದು. ನಗರ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಇದನ್ನು ಉತ್ತರ ಕರ್ನಾಟಕ ಭಾಗದಲ್ಲಿ ಮನೆ, ಮನೆಗೆ ತಲುಪಿಸಲು ತೀರ್ಮಾನಿಸಲಾಗಿದೆ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಂಡಿಸಿದ ಬಜೆಟ್‌ ಮತ್ತು ಕುಮಾರಸ್ವಾಮಿ ಮಂಡಿಸಿದ ಬಜೆಟ್‌ ಸೇರಿದಂತೆ ಸರ್ಕಾರ, ಉತ್ತರ ಕರ್ನಾಟಕ ಭಾಗಕ್ಕೆ ಏನು ಕೊಟ್ಟಿದೆ ಮತ್ತು ಜೆಡಿಎಸ್‌ ಇದುವರೆಗೆ ಆ ಭಾಗಕ್ಕೆ ಏನು ಮಾಡಿದೆ ಎಂಬುದನ್ನು ಆ ಭಾಗದ ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಕಿರುಹೊತ್ತಿಗೆ ಪ್ರಕಟಿಸಲಾಗುವುದು ಎಂದು ಹೇಳಿದರು.

ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಆ.10ರೊಳಗೆ ಕಿರು ಹೊತ್ತಿಗೆಗೆ ಬೇಕಾದ ಸರಕುಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ನಂತರ, ಅದನ್ನು ಪ್ರಕಟಿಸಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದ ವೇಳೆ ಕಾರ್ಯಕರ್ತರು ಅದನ್ನು ಮನೆ ಮನೆಗೆ ಹಂಚಲಿದ್ದಾರೆ. ಸಾಲ ಮನ್ನಾ ವಿಚಾರದ ಬಗ್ಗೆ ರಾಷ್ಟ್ರೀಯ ಪಕ್ಷವೊಂದು ಅಪಪ್ರಚಾರ ಮಾಡುತ್ತಿದೆ. ಉತ್ತರ ಕರ್ನಾಟಕಕ್ಕೆ ಸಮ್ಮಿಶ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದೆಲ್ಲ ಆರೋಪಿಸುತ್ತಿದೆ. ಇದೆಲ್ಲಕ್ಕೂ ಕಿರುಹೊತ್ತಿಗೆ ಮೂಲಕ ಉತ್ತರ ನೀಡುತ್ತಿದ್ದೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಜೆಡಿಎಸ್‌
ರಾಷ್ಟ್ರೀಯ ಕಾರ್ಯಕಾರಿಣಿ

ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಈ ವರ್ಷ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿದ್ದು, ಸೆಪ್ಟೆಂಬರ್‌ ಕೊನೆಯ ವಾರ ಅಥವಾ ಅಕ್ಟೋಬರ್‌ ಮೊದಲ ವಾರದಲ್ಲಿ ನಡೆಯಲಿದೆ ಎಂದು ದೇವೇಗೌಡ ಹೇಳಿದರು. ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ, ರಾಜ್ಯ ಘಟಕ ಪುನಾರಚನೆ ಸೇರಿ ಪಕ್ಷದ ಅನೇಕ ತೀರ್ಮಾನಗಳಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಅನುಮೋದನೆ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ, ಈ ಬಾರಿ ಬೆಂಗಳೂರಿನಲ್ಲೇ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕಾರಿಣಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಅಸ್ತಿತ್ವದಲ್ಲಿರುವ ವಿವಿಧ ರಾಜ್ಯಗಳಲ್ಲಿ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಜತೆಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಮೈತ್ರಿಕೂಟ ರಚನೆ ಕುರಿತಂತೆಯೂ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.