ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ಗೆ ತಂಡ: ಸಿಎಂ ಕುಮಾರಸ್ವಾಮಿ
Team Udayavani, Aug 10, 2018, 7:00 AM IST
ಬೆಂಗಳೂರು: ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿಗೊಳಿಸುವ ಬಗ್ಗೆ ಪೂರ್ವಸಿದ್ಧತೆಗಾಗಿ ತಂಡದೊಂದಿಗೆ ಇಸ್ರೇಲ್ಗೆ ಭೇಟಿ ನೀಡುವ ಬಗ್ಗೆ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಮ್ಮ ಅನುಮತಿ ಕೇಳಿದ್ದು, ಶೀಘ್ರವೇ ತಂಡವೊಂದು ಅಲ್ಲಿಗೆ ತೆರಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು, ಇಸ್ರೇಲ್ ಮಾದರಿ ಕೃಷಿ ಪದ್ಧತಿ ಮತ್ತು ಶೂನ್ಯ ಬಂಡವಾಳ ಕೃಷಿ ಪದ್ಧತಿಯನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇಸ್ರೇಲ್ಗೆ ತಂಡ ಕಳುಹಿಸುವುದರ ಜತೆಗೆ ಅಲ್ಲಿನ ತಜ್ಞರನ್ನೂ ರಾಜ್ಯಕ್ಕೆ ಕರೆಸಲಾಗುವುದು. ಅದೇ ರೀತಿ ಶೂನ್ಯ ಬಂಡವಾಳ ಕೃಷಿ ಕುರಿತಂತೆ ಈಗಾಗಲೇ ಹಲವು ಸುತ್ತಿನ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಮಂಡ್ಯದಲ್ಲಿ ಆ. 11ರಂದು ಇಸ್ರೇಲ್ ಮಾದರಿ ಕೃಷಿ ಪದ್ಧತಿಗೆ ಚಾಲನೆ ನೀಡುತ್ತಿಲ್ಲ. ಕಳೆದ ಮೂರು ವರ್ಷದಿಂದ ಮಳೆ ಇಲ್ಲದೆ ಅಲ್ಲಿನ ರೈತರು ಭತ್ತ ನಾಟಿ ಮಾಡುವುದನ್ನೇ ಮರೆತು ಹುರುಳಿ ಬೆಳೆಯುತ್ತಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಭತ್ತ ನಾಟಿ ಮಾಡಲು ರೈತರು ನಿರ್ಧರಿಸಿದ್ದಾರೆ. ತಾವೂ ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿ ಅವರೊಂದಿಗೆ ಊಟ ಮಾಡುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ