ಉಳ್ಳಾಲ : ಖಾಸಗಿ ಬಸ್ಗೆ ಸರಕಾರಿ ಬಸ್ ಡಿಕ್ಕಿ-15 ಮಂದಿಗೆ ಗಾಯ
Team Udayavani, Aug 11, 2018, 12:28 PM IST
ಉಳ್ಳಾಲ : ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೋಮೇಶ್ವರ ಅಡ್ಕ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೊಣಾಜೆಯಿಂದ ಮಾಡೂರು ಮಾರ್ಗವಾಗಿ ಮಂಗಳೂರಿನ ಕೊಟ್ಟಾರಕ್ಕೆ ಸಂಚರಿಸುವ ಬಸ್ಸು ಅಡ್ಕ ಬಳಿ ಜನರನ್ನು ಇಳಿಸಲು ನಿಂತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡಿ ಬಂದ ಕಾಸರಗೋಡು ನಿಂದ ಮಂಗಳೂರಿಗೆ ಸಂಚರಿಸುವ ಸರಕಾರಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಎರಡೂ ಬಸ್ಸುಗಳು ನಜ್ಜುಗುಜ್ಜಾಗಿವೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ