ಲೋಕಸಭಾ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಇನ್ನಿಲ್ಲ


Team Udayavani, Aug 13, 2018, 10:08 AM IST

somanath.jpg

ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ (89ವರ್ಷ) ಅವರು ಸೋಮವಾರ ಬೆಳಗ್ಗೆ ಕೋಲ್ಕತಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಅನಾರೋಗ್ಯದಿಂದ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೋಮನಾಥ್ ಚಟರ್ಜಿ ಅವರಿಗೆ ಇಂದು ಬೆಳಗ್ಗೆ ಮತ್ತೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

89 ವರ್ಷದ ಸೋಮನಾಥ್ ಚಟರ್ಜಿ ಅವರು ಕಿಡ್ನಿ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯಗೊಂಡಿದ್ದ ಚಟರ್ಜಿಯವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸೀಸ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಅವರಿಗೆ ಲಘು ಹೃದಯಾಘಾತವಾಗಿತ್ತು.

ಐಸಿಯುನಲ್ಲಿ ಚಟರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿರುವುದಾಗಿ ಪಿಟಿಐ ನಿನ್ನೆ ವರದಿ ಮಾಡಿತ್ತು. ಕಳೆದ 40 ದಿನಗಳಿಂದ ಚಟರ್ಜಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳ ಹಿಂದಷ್ಟೇ ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು.

ಸಿಪಿಐ(ಎಂ)ನ ಹಿರಿಯ ಮುಖಂಡರಾಗಿರುವ ಸೋಮನಾಥ್ ಚಟರ್ಜಿ ಅವರು 10 ಬಾರಿ ಲೋಕಸಭಾ ಸಂಸದರಾಗಿದ್ದರು, 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಯುಪಿಯ(1) ಸರ್ಕಾರಕ್ಕೆ ಸಿಪಿಐ(ಎಂ) ನೀಡಿದ್ದ ಬೆಂಬಲ ವಾಪಸ್ ಪಡೆದ ನಂತರ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಚಟರ್ಜಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಐ(ಎಂ) ಸೋಮನಾಥ್ ಚಟರ್ಜಿ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.