ಅನ್ಯಭಾಷಾ ನಾಮಫ‌ಲಕಗಳ ವಿರುದ್ಧ ಕ್ರಮವಿಲ್ಲ

Team Udayavani, Aug 13, 2018, 12:40 PM IST

anyabhasha.jpg

ಬೆಂಗಳೂರು: ಅನ್ಯಭಾಷಾ ನಾಮಫ‌ಲಕಗಳ ವಿರುದ್ಧ ಕ್ರಮಕೈಗೊಂಡು ಮಳಿಗೆಗಳ ಪರವಾನಗಿ ರದ್ದುಪಡಿಸುವಂತೆ ಕೌನ್ಸಿಲ್‌ ಸಭೆಯಲ್ಲಿ ನಿರ್ಣಯಕೈಗೊಂಡರೂ ಕ್ರಮಕ್ಕೆ ಮುಂದಾಗದ ಅಧಿಕಾರಿಗಳನ್ನು ಮೇಯರ್‌ ಸಂಪತ್‌ರಾಜ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ನಗರದಲ್ಲಿ ಭಿತ್ತಪತ್ರ ಹಾಗೂ ಗೋಡೆ ಬರಹ ಅಳಿಸಿ ಹಾಕುವ ಅಭಿಯಾನಕ್ಕೆ ಶನಿವಾರದಿಂದ ಚಾಲನೆ ನೀಡಿದ್ದ ಮೇಯರ್‌ ಸಂಪತ್‌ರಾಜ್‌ ಭಾನುವಾರವೂ ನಗರದ ಹಲವು ಭಾಗಗಳಲ್ಲಿ ಭಿತ್ತಿಪತ್ರ ತೆರವುಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಭಾನುವಾರ ಹಲಸೂರು ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌, ಭಿತ್ತಿಪತ್ರ ತೆರವುಗೊಳಿಸಿದ ಕಾರ್ಯಾಚರಣೆ ನಡೆಸುವ ವೇಳೆ ಅಂಗಡಿಗಳ ಮುಂಭಾಗದ ನಾಮಫ‌ಲಕದಲ್ಲಿ ನಿಯಮಾನುಸಾರ ಕನ್ನಡ ಭಾಷೆ ಬಳಸದಿರುವುದು ಕಂಡು ಕೋಪಗೊಂಡ ಮೇಯರ್‌, ಅಧಿಕಾರಿಗಳ ವಿರುದ್ಧ ಗರಂ ಆದರು.

ಜೀವನ್‌ಭೀಮಾನಗರ ವಾರ್ಡ್‌ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಸನ್ನ ಅವರನ್ನು ತರಾಟೆಗೆ ತೆಗೆದುಕೊಂಡ ಮೇಯರ್‌, ಎಲ್ಲ ರೀತಿಯ ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಶೇ.40 ಇತರೆ ಭಾಷೆ ಬಳಸಬೇಕು ಎಂದು ಸೂಚಿಸಿದರೂ, ನಿಯಮ ಪಾಲಿಸದವರ ವಿರುದ್ಧ ಏಕೆ ಕ್ರಮಕೈಗೊಂಡಿಲ್ಲ. ಇನ್ನೆಷ್ಟು ಬಾರಿ ನಿಮಗೆ ಸೂಚನೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕನ್ನಡ ಬಳಸದಂತಹ ಮಳಿಗೆಗಳಿಗೆ ನೋಟಿಸ್‌ ಸರಿಪಡಿಸದಿದ್ದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. 

ವೈದ್ಯಾಧಿಕಾರಿಗಳ ಜತೆ ಸಭೆ: ಅಂಗಡಿ-ಮುಂಗಟ್ಟುಗಳ ಮುಂದಿನ ನಾಮಫ‌ಲಕಗಳಲ್ಲಿ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡುವ ಕುರಿತಂತೆ ವೈದ್ಯಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಲಾಗುವುದು ಎಂದು ಮೇಯರ್‌ ಆರ್‌.ಸಂಪತ್‌ ರಾಜ್‌ ತಿಳಿಸಿದರು.

ನಾಮಫ‌ಲಕದಲ್ಲಿ ಕನ್ನಡಭಾಷೆ ಬಳಕೆ ವಿಚಾರವಾಗಿ ಅಂಗಡಿ ಮಾಲಿಕರ ಬಳಿ ಕೇಳಿದರೆ, ನಾವು ನಾಮಫ‌ಲಕ ಮತ್ತೆ ಅಳವಡಿಸಬೇಕಾದರೆ 4 ರಿಂದ 5 ಸಾವಿರ ರು. ಬೇಕಾಗುತ್ತದೆ. ತಿಂಗಳೆಲ್ಲಾ ದುಡಿದರೂ 8 ಸಾವಿರ ಬರುವುದಿಲ್ಲ. ನಾವೇಗೆ ಅಳವಡಿಸಬೇಕು ಎಂದು ಪ್ರಶ್ನೆ ಮಾಡುತ್ತಾರೆ. ಕೆಲ ಖಾಸಗಿ ಸಂಸ್ಥೆಗಳು ಅಂಗಡಿಗಳಿಗೆ ನಾಮಫ‌ಲಕಗಳನ್ನು ಅಳವಡಿಸಿದ್ದು, ಈ ಕುರಿತು ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.