ಬಿಜೆಪಿಗೆ ಸಿಗಲಿದೆ 227 ಸ್ಥಾನ?
Team Udayavani, Aug 15, 2018, 10:53 AM IST
ಹೊಸದಿಲ್ಲಿ: ದೇಶದಲ್ಲಿ ತತ್‌ಕ್ಷಣ ಚುನಾವಣೆ ನಡೆದರೆ ಬಿಜೆಪಿ 227 ಸ್ಥಾನಗಳಲ್ಲಿ ಗೆಲ್ಲಲಿದೆ. ಸದ್ಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ಗೆ 78, ಇತರರಿಗೆ 238 ಸ್ಥಾನಗಳು ಲಭಿಸಲಿವೆ. “ಟೈಮ್ಸ್ ನೌ’ ಆಂಗ್ಲ ಸುದ್ದಿವಾಹಿನಿ ನಡೆಸಿದ ಜನಾಭಿಪ್ರಾಯ ಸಂಗ್ರಹ ದಲ್ಲಿ ಈ ಅಂಶ ಗೊತ್ತಾಗಿದೆ.
2014 ಚುನಾವಣೆಯಲ್ಲಿ ಬಿಜೆಪಿಗೆ 282, ಕಾಂಗ್ರೆಸ್‌ಗೆ 44, ಇತರರಿಗೆ 217 ಸ್ಥಾನಗಳು ಲಭಿಸಿದ್ದವು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರವಿದ್ದರೂ ಬಿಜೆಪಿಗೆ 2 ಸ್ಥಾನ ಲಾಭವಾಗಲಿದೆ. ಕಳೆದ ಬಾರಿಗೆ ಬಿಜೆಪಿಗೆ 17 ಸ್ಥಾನ ಸಿಕ್ಕಿತ್ತು. ಕಾಂಗ್ರೆಸ್ 6 ಸ್ಥಾನ, ಇತರರಿಗೆ (ಜೆಡಿಎಸ್) 3 ಸ್ಥಾನ. ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‌ಗೆ 3 ಸ್ಥಾನ ನಷ್ಟವಾಗಲಿದೆ. ಜೆಡಿಎಸ್ ಹಿಂದಿನ ಚುನಾವಣೆಯಲ್ಲಿ 2 ಸ್ಥಾನ ಗೆದ್ದಿದ್ದರೆ ಹೆಚ್ಚುವರಿಯಾಗಿ 1 ಸ್ಥಾನ ಬಗಲಿಗೆ ಹಾಕಿಕೊಳ್ಳಲಿದೆ. ಕೇರಳದಲ್ಲಿ ಬಿಜೆಪಿ ಮೊದಲ ಬಾರಿಗೆ 1 ಸ್ಥಾನ ಗೆಲ್ಲಲಿದ್ದರೆ, ಕಾಂಗ್ರೆಸ್‌ಗೆ 2 ಸ್ಥಾನ ನಷ್ಟವಾಗಲಿದೆ. ಇತರರಿಗೆ 13 ಸ್ಥಾನ ಲಭ್ಯವಾಗಲಿದೆ.
ಗಮನಾರ್ಹ ಅಂಶವೆಂದರೆ ಉತ್ತರ ಪ್ರದೇಶದಲ್ಲಿ 71 ಸ್ಥಾನ ಗೆದ್ದಿದ್ದ ಬಿಜೆಪಿ 49, ಕಾಂಗ್ರೆಸ್ 3, ಇತರರು 28 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ. ಗುಜರಾತ್‌ನಲ್ಲಿ ಬಿಜೆಪಿ 18, ಕಾಂಗ್ರೆಸ್ 8 ಸ್ಥಾನಗಳಲ್ಲಿ ಜಯಸಾಧಿಸಲಿವೆ. ಆಂಧ್ರಪ್ರದೇಶದಲ್ಲಿ 7 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದಿದೆ ಜನಾಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ