ಕಟ್ಟೆಚ್ಚರ ವಹಿಸಲು ಡೀಸಿಗಳಿಗೆ ಮುಖ್ಯಮಂತ್ರಿ ಸೂಚನೆ
Team Udayavani, Aug 16, 2018, 7:00 AM IST
ಬೆಂಗಳೂರು: ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸಿಎಂ ಕುಮಾರಸ್ವಾಮಿ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಭಾರೀ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕುರಿತಂತೆ ಬುಧವಾರ ಡೀಸಿಗಳಿಂದ ಮಾಹಿತಿ ಪಡೆದ ಅವರು, ಮಳೆಯಿಂದ ಸಂಭವಿಸಬಹುದಾದ ಪ್ರವಾಹ ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಸೂಚಿಸಿದ್ದಾರೆ. ಈ ಮಧ್ಯೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೂ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಜಿಲ್ಲೆಗಳಿಗೆ ಭೇಟಿ ನೀಡಿ ಮಳೆ ಹಾನಿ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ನಿಗಾ ವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೂ ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಪರಿಹಾರ ಕಾರ್ಯಗಳಿಗೆ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ