ಕಂಪ್ಲಿ-ಕೋಟೆಯ ಸೇತುವೆ ಜಲಾವೃತ

Team Udayavani, Aug 16, 2018, 4:24 PM IST

bell-2.jpg

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷ 48 ಸಾವಿರ ಕ್ಯುಸೆಕ್‌ ನೀರು ಬಿಟ್ಟಿರುವುದರಿಂದ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಂಪರ್ಕದ ಕೊಂಡಿಯಾದ ಕಂಪ್ಲಿ-ಕೋಟೆಯ ಸೇತುವೆ ಜಲಾವೃತಗೊಂಡಿದ್ದು, ಸಂಚಾರ ಕಡಿತಗೊಂಡಿದೆ.

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಿದಂತೆ ಹೊರ ಹರಿವು ಹೆಚ್ಚಾಗತೊಡಗಿದೆ. ಕಂಪ್ಲಿ-ಕೋಟೆಯ ಸೇತುವೆ ಮುಳುಗಡೆಯಾಗಿದ್ದು ನದಿ ಪಾತ್ರದ ಬಹುತೇಕ ಜಮೀನುಗಳು ಜಲಾವೃತಗೊಂಡಿವೆ.

2014ರಲ್ಲಿ ಕೊನೆಯ ಬಾರಿಗೆ ಜಲಾಶಯ ಭರ್ತಿಯಾಗಿದ್ದು ಬಿಟ್ಟರೆ ಇದೀಗ ನಾಲ್ಕು ವರ್ಷಗಳ ನಂತರ ಜಲಾಶಯ ಭರ್ತಿಯಾಗಿದೆ. ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ. ಕಂಪ್ಲಿ-ಕೋಟೆ ಬಳಿಯ ದೇವಸ್ಥಾನಗಳು ಹಾಗೂ ಮನೆಗಳಿಗೆ ನೀರು ನುಗ್ಗಿವೆ. ಕಂಪ್ಲಿ-ಕೋಟೆ ಬಳಿಯ ಭತ್ತ ಹಾಗೂ ಬಾಳೆ ತೋಟಗಳಿಗೆ ನೀರು ನುಗ್ಗಿದೆ.
 
ಕೋಟೆಯ ಪ್ರಸನ್ನ ವೆಂಕಟರಮಣ ದೇವಸ್ಥಾನ, ಹೊಳೆ ಆಂಜನೇಯಸ್ವಾಮಿ ದೇವಸ್ಥಾನ, ಐತಿಹಾಸಿಕ ಕೋಟೆ ಜಲಾವೃತಗೊಂಡಿದ್ದು, ಕೋಟೆ ಪ್ರದೇಶದ ಬಹುತೇಕ ಮಾರ್ಗಗಳ ಸಂಚಾರ ಕಡಿತಗೊಂಡಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿರುವುದರಿಂದ ನದಿ ಪಾತ್ರದ ಜನರು ಮುಂಜಾಗ್ರತೆ ವಹಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದೆ.

ಕಂಪ್ಲಿ-ಕೋಟೆಯ ಸೇತುವೆ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಕಂಪ್ಲಿಯಿಂದ ಗಂಗಾವತಿಗೆ ತೆರಳುವ ಸೇತುವೆ ಮೇಲಿನ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಂಪ್ಲಿಯಲ್ಲಿ ಬಸ್‌, ಲಾರಿ ಸೇರಿದಂತೆ ಇತರೆ ವಾಹನಗಳನ್ನು ಹೊಸಪೇಟೆ ಮಾರ್ಗವಾಗಿ ತೆರಳುವಂತೆ ಸೂಚಿಸಲಾಗಿದೆ. ವಾಹನಗಳು ಬುಕ್ಕಸಾಗರದ ನೂತನ ಸೇತುವೆ ಮೇಲೆ ಸಂಚರಿಸುತ್ತಿವೆ.
 
ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕೋಟೆಯ ದಂಡೆಯಲ್ಲಿನ ಸುಮಾರು 6ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಈ ಆರು ಮೀನುಗಾರ ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಕೋಟೆಯ ಸರ್ಕಾರಿ ಶಾಲೆಯಲ್ಲಿ ವಸತಿ ಕಲ್ಪಿಸಲಾಗಿದೆ.

ಸೇತುವೆ ಜಲಾವೃತಗೊಂಡ ಹಿನ್ನೆಲೆಯಲ್ಲಿ ಬುಧವಾರ ತಹಶೀಲ್ದಾರ್‌ ಎಂ. ರೇಣುಕ, ಉಪತಹಶೀಲ್ದಾರ್‌ ಬಿ. ರವೀಂದ್ರಕುಮಾರ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ, ಅಧ್ಯಕ್ಷರಾದ ಎಂ. ಸುಧೀರ್‌, ಪಿಎಸ್‌ಐ ಬಿ. ನಿರಂಜನ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ತಹಶೀಲ್ದಾರ್‌ ಎಂ.ರೇಣುಕ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬೆಳಗೊಡುಹಾಳು, ಇಟಗಿ, ಸಣಾಪುರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದರು. 

ಕೋಟೆಯ ಬಹುತೇಕ ದೇವಸ್ಥಾನಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ನಾಗರ ಪಂಚಮಿ ಹಬ್ಬದ ನಿಮಿತ್ತ ಹಾಲೆರೆಯಲು ಸಾರ್ವಜನಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಹರಿಗೋಲು ಮಾಲೀಕ ಹಸೇನಪ್ಪ ದೇವಸ್ಥಾನಕ್ಕೆ ತೆರಳುವ
ಎಲ್ಲ ಭಕ್ತರನ್ನು ಉಚಿತವಾಗಿ ತಮ್ಮ ಹರಿಗೋಲಿನಲ್ಲಿ ದೇವಸ್ಥಾನಗಳಿಗೆ ಕರೆದುಕೊಂಡು ಹೋಗುವ ಮೂಲಕ ಸಹಕರಿಸಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.