ಖಾನಾವಳಿಯಲ್ಲಿ ಊಟ ಮಾಡಿದ್ದರು

Team Udayavani, Aug 17, 2018, 11:40 AM IST

bij-1.jpg

ಬೀದರ: ದೇಶ ಕಂಡ ಮಹಾನ್‌ ಮುತ್ಸದ್ಧಿ, ಪ್ರಚಂಡ ವಾಗ್ಮಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ 1983ರಿಂದ 1996ರ ವರೆಗೆ ಬೀದರ ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದರು. 1983ರಲ್ಲಿ ಪ್ರಥಮ ಬಾರಿಗೆ ಬೀದರ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಬಿಜೆಪಿ ಸಂಘಟನೆಗೆ ಒತ್ತು ನೀಡಿ, ಈ ಭಾಗದಲ್ಲಿ ಬಿಜೆಪಿ ಬೇರೂರಲು ಕಾರಣಿಕರ್ತರಾಗಿದ್ದರು. ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೈಕಲ್‌ ಮೂಲಕ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದನ್ನು ಇಲ್ಲಿನ ಹಳೆ ಕಾರ್ಯಕರ್ತರು ಸ್ಮರಿಸಿದರು.

1996ರಲ್ಲಿ ಸುಭಾಷ ಕಲ್ಲೂರ ಅವರು ಬೀದರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ನಡೆದಿತ್ತು. ಈ ವೇಳೆ ಬಿಜೆಪಿಯಿಂದ ಸ್ಪರ್ಧಿಸಿದ್ದ ದಿ| ರಾಮಚಂದ್ರ ವೀರಪ್ಪ ಆರ್ಯ ಅವರ ಗೆಲುವಿಗಾಗಿ ಬೀದರ- ಹುಮನಾಬಾದ ಪಟ್ಟಣಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದರು. ವಿಶೇಷ ಹೆಲಿಕಾಪ್ಟರ್‌ ಮೂಲಕ ಬೀದರ ನಗರಕ್ಕೆ ಆಗಮಿಸಿದ ವಾಜಪೇಯಿ ಬಿಜೆಪಿ ಪರ ಪ್ರಚಾರ ನಡೆಸಿ ರಾಮಚಂದ್ರ ವೀರಪ್ಪ ಆರ್ಯ ಅವರ ಗೆಲುವಿಗೆ ಕಾರಣವಾಗಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಸುಬ್ಬಯ್ನಾ ಅವಧಿಯಲ್ಲಿ ಬೀದರ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಅಟಲ್‌ ಗೌರವ ನಿಧಿ ಸಂಗ್ರಹಕ್ಕೆ ಚಾಲನೆ ನೀಡಲಾಗಿತ್ತು. ಬೀದರ ಜಿಲ್ಲೆಗೆ 55 ರೂ. ಸಂಗ್ರಹದ ಗುರಿ ಇತ್ತು. ಆದರೆ, ಬೀದರ ನಗರದ ಜನರು ಸ್ಪಂದಿಸದ ಹಿನ್ನೆಲೆಯಲ್ಲಿ ಹುಮನಾಬಾದ ಪಟ್ಟಣದಲ್ಲಿ ನಿಧಿ ಸಂಗ್ರಹ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಹುಮನಾಬಾದ ಪಟ್ಟಣಕ್ಕೆ ವಾಜಪೇಯಿ ಅವರು ಆಗಮಿಸಿ ಪಕ್ಷ ಸಂಘಟನೆ ಕುರಿತು ಭಾಷಣ ಮಾಡಿದ್ದರು. ಅಲ್ಲದೇ ಪಟ್ಟಣದ ಗುರುದಾಸ ಖಾನಾವಳಿಯಲ್ಲಿ ಮಧ್ಯಾಹ್ನದ ಊಟ ಸವಿದಿದ್ದರು. ಅತಿ ಸರಳ ಸ್ವಭಾವದ ವಾಜಪೇಯಿ ಅವರ ಮಾತುಗಳನ್ನು ಕೇಳಿದ ಪ್ರತಿಯೊಬ್ಬರೂ ಹುಮ್ಮಸಿನಿಂದ ಪಕ್ಷದ ಕಾರ್ಯಕ್ಕೆ ಮುಂದಾಗುತ್ತಿದರು ಎಂದು ಆರ್ಯ ಸಮಾಜದ ಮುಖಂಡ ಸುಭಾಷ ಅಷ್ಟಿಕರ್‌ ಸ್ಮರಿಸಿದರು.

ಬೀದರ ಜಿಲ್ಲೆಗೆ ವಾಜಪೇಯಿ ಅವರ ಕೊಡುಗೆ  ಪಾರವಾಗಿದೆ. ಬೀದರ-ಕಲಬುರಗಿ ರೈಲು ಮಾರ್ಗಕ್ಕೆ ತಂದೆಯವರು ಪ್ರಸ್ತಾವನೆ ಸಲ್ಲಿಸಿದ ಕೂಡಲೆ ಅದಕ್ಕೆ ಅಂಕಿತ ಹಾಕಿ ಯೋಜನೆಗೆ ಒಪ್ಪಿಗೆ ಸೂಚಿಸಲಾಗಿತ್ತು. ಅಲ್ಲದೇ ಮಹಾತ್ಮಾ ಗಾಂಧಿ  ಕಾರ್ಖಾನೆ ಸ್ಥಾಪನೆಗೂ ಕೂಡ ವಾಜಪೇಯಿ ಅವರ ಶ್ರಮವಿದೆ. ತಂದೆಯವರಾದ ರಾಮಚಂದ್ರ ವೀರಪ್ಪ ಆರ್ಯಾ ಅವರೊಂದಿಗೆ ಅಟಲ್‌ ಜೀ ಅವರ ನಿಕಟ ಸಂಕರ್ಪ ಇತ್ತು. ಇಬ್ಬರು ಜನಸ್ನೇಹಿಯಾಗಿ ಗುರುತಿಸಿಕೊಂಡವರು. ತಂದೆಯವರು ಯಾವುದೇ ಅಪಾಯಿಂಟ್‌ಮೆಂಟ್‌ ಇಲ್ಲದೆ ನೇರವಾಗಿ ಭೇಟಿಯಾಗಿ ಈ ಭಾಗದ ಸಮಸ್ಯೆಗಳ ಕುರಿತು ಚರ್ಚಿಸುತ್ತಿದ್ದರು. ಲೋಕ ಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸುವ ಮೂಲಕ ತಂದೆಯವರನ್ನು ಗೆಲ್ಲಿಸಲು ಅವರು ಶ್ರಮಿಸಿದ್ದಾರೆ. 
 ಬಸವರಾಜ ಆರ್ಯ 

ವಾಜಪೇಯಿ ಅವರೊಂದಿಗೆ ವಿವಿಧ ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿದ್ದು, ಆ ರ್ಯಾಲಿಗಳಲ್ಲಿ ಪಕ್ಷದ
ಮುಖಂಡರು ಮೈಕಿನ ಎದುರಿಗೆ ನಿಂತು “ದೇಶ ಕಾ ಪ್ರಧಾನಿ ಕೈಸಾ ಹೋ’ ಎಂದು ಕೂಗಿದರೆ ರ್ಯಾಲಿಯಲ್ಲಿ ಭಾಗವಹಿಸಿದ ಜನಸ್ತೋಮ “ಅಟಲ್‌ ಬಿಹಾರಿ ಜೈಸಾ ಹೋ’ ಎಂದು ಪ್ರತಿಕ್ರಿಯೆ ನೀಡುತ್ತಿದ್ದರು. ಆ ಒಂದು ಕ್ಷಣ ರೋಮಾಂಚನಗೊಳಿಸುತ್ತಿತ್ತು.

ವಾಜಪೇಯಿ ಅವರ ಭಾಷಣ ಕೇಳಲು ಸಾರ್ವನಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸುತ್ತಿದ್ದರು. ತಮ್ಮದೇ ಆದ ಶೈಲಿಯಲ್ಲಿ ಭಾಷಣ ಮಾಡುವ ಮೂಲಕ ನೆರೆದ ಜನರ ಮನ ಗೆಲ್ಲುತ್ತಿದ್ದರು. ಪ್ರಧಾನಿ ಇದ್ದರೆ ಇಂತವರು ಇರಬೇಕು ಎನ್ನುವ
ಮನೋಭಾವ ಜನರಲ್ಲಿ ಮೂಡುತ್ತಿತ್ತು. ವಾಜಪೇಯಿ ಅವರು ದೇಶದೊಡನೆ ಹೆಚ್ಚು ಪ್ರೀತಿ ಹೊಂದಿದ್ದರು. ದೇಶಕ್ಕಾಗಿ
ದುಡಿಯಬೇಕು ಎಂಬ ಮನೋಭಾವ ಅವರದ್ದಾಗಿತ್ತು. ವಿರೋಧ ಪಕ್ಷದಲ್ಲಿದ್ದವರೂ ಕೂಡ ಅವರನ್ನು ಗೌರವದಿಂದಲ್ಲೆ ನೋಡುತ್ತಿದ್ದ ಮಹಾನ್‌ ನಾಯಕರು.
  ಸುಭಾಷ ಕಲ್ಲೂರ, ಮಾಜಿ ಶಾಸಕ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.