ಮನೆ ಗೋಡೆ ಕುಸಿದು 5 ವರ್ಷದ ಮಗು ಸಾವು

Team Udayavani, Aug 17, 2018, 3:37 PM IST

shiv-2.jpg

ತೀರ್ಥಹಳ್ಳಿ: ಮಳೆಯಿಂದ ಮನೆ ಗೋಡೆ ಕುಸಿದು ಐದು ವರ್ಷದ ಮಗುವೊಂದು ಮೃತಪಟ್ಟ ಘಟನೆ ತಾಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಕೋಣಂದೂರಿನ ಕೆಇಬಿ ರಸ್ತೆ ನಿವಾಸಿ ಕೂಲಿ ಕಾರ್ಮಿಕ ಆಯುಬ್‌ ಎಂಬುವರ ಪುತ್ರ ಮಸೂದ್‌ (5) ಮೃತಪಟ್ಟ ಮಗು. ಅಡುಗೆ ಮನೆಯಲ್ಲಿ ತಾಯಿಯೊಂದಿಗೆ ತಿಂಡಿ ತಿನ್ನುತ್ತಿರುವ ಸಂದರ್ಭದಲ್ಲಿ ಹಠಾತ್ತನೆ ಗೋಡೆ ಕುಸಿದು ಈ ದುರ್ಘ‌ಟನೆ ಸಂಭವಿಸಿದೆ. ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದರಾದರೂ ಮಗು ಮಾರ್ಗ ಮಧ್ಯೆ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಕೋಣಂದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

5 ಲಕ್ಷ ಪರಿಹಾರ ಧನ: ಕೋಣಂದೂರಿನ ಮೃತಪಟ್ಟ ಮಗುವಿನ ಮನೆಗೆ ಜಿಲ್ಲಾಧಿಕಾರಿ ದಯಾನಂದ್‌ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ಶಿಫಾರಸ್ಸಿನಂತೆ ಸರ್ಕಾರದ ವತಿಯಿಂದ ಮೃತಪಟ್ಟ ಮಗುವಿನ ತಂದೆಗೆ 5ಲಕ್ಷ ರೂ. ಪರಿಹಾರ ಧನ ಚೆಕ್‌ ವಿತರಿಸಲಾಯಿತು. ಸಾಂತ್ವನ: ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
 
ತೀರ್ಥಹಳ್ಳಿ ತಾಲೂಕಲ್ಲಿ ತಗ್ಗಿದ ಮಳೆ ಅಬ್ಬರ
ತೀರ್ಥಹಳ್ಳಿ:
ತಾಲೂಕಿನಾದ್ಯಂತ ಮಳೆಯ ಅಬ್ಬರ ತಗ್ಗಿದ್ದು, ಮಾಲತಿ ನದಿ ವ್ಯಾಪ್ತಿಯ ಆಗುಂಬೆ ಭಾಗದಲ್ಲಿ ಮಾತ್ರ ಮಳೆಯ ಪ್ರಮಾಣ ನಿರಂತರವಾಗಿದೆ. ತುಂಗಾ ನದಿಯಲ್ಲಿ ನೀರಿನ ಪ್ರಮಾಣ 83 ಅಡಿ ತಲುಪಿದೆ. ಕಳೆದ 24 ಗಂಟೆಗಳಲ್ಲಿ ತೀರ್ಥಹಳ್ಳಿಯಲ್ಲಿ
28.8 ಮಿ.ಮೀ., ಆಗುಂಬೆಯಲ್ಲಿ 245 ಮಿ.ಮೀ. ಮಳೆಯಾಗಿದೆ. ಕಳೆದ 2 ದಿನಗಳಿಂದ ಭಾರೀ ಮಳೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. 

ಇಂದು ಎಂದಿನಂತೆ ಆರಂಭಗೊಂಡಿವೆ. ತಾಲೂಕಿನ ನದಿ, ಹಳ್ಳ ಕೊಳ್ಳಗಳ ನೀರು ಗದ್ದೆ ಹಾಗೂ ತೋಟಗಳಿಗೆ ಆವರಿಸಿದೆ. ತೀರ್ಥಹಳ್ಳಿ ಉಡುಪಿ ಮುಖ್ಯ ಹೆದ್ದಾರಿಯ ಅಣ್ಣುವಳ್ಳಿ ಸೇತುವೆ ಹಾಗೂ ಕೈಮರದ ಪ್ರದೇಶಗಳಲ್ಲಿ ಬುಧವಾರ ನೀರಿನ ಪ್ರಮಾಣ ಹೆಚ್ಚಿದ ಹಿನ್ನೆಲೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಸ್‌ ಹಾಗೂ ವಾಹನ ಸಂಚಾರ ಇಂದು ಎಂದಿನಂತೆ ಮುಂದುವರಿದಿದೆ.

352.09 ಮಿಮೀ ಮಳೆ ದಾಖಲು ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 230.60 ಮಿಮೀ ಮಳೆಯಾಗಿದ್ದು, ಸರಾಸರಿ 32.94 ಮಿಮೀ ಮಳೆ ದಾಖಲಾಗಿದೆ. ಆಗಸ್ಟ್‌ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮೀ ಇದ್ದು, ಇದುವರೆಗೆ ಸರಾಸರಿ 352.09 ಮಿಮೀ ಮಳೆ ದಾಖಲಾಗಿದೆ. ಶಿವಮೊಗ್ಗ 09.20 ಮಿಮೀ, ಭದ್ರಾವತಿ 10.00 ಮಿಮೀ, ತೀರ್ಥಹಳ್ಳಿ
28.80 ಮಿಮೀ, ಸಾಗರ 47.00 ಮಿಮೀ, ಶಿಕಾರಿಪುರ 06.20 ಮಿಮೀ, ಸೊರಬ 16.00 ಮಿಮೀ ಹಾಗೂ ಹೊಸನಗರ 113.40 ಮಿಮೀ ಮಳೆಯಾಗಿದೆ. 

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.