ಆಸ್ಪತ್ರೆಯಲಿ ಸ್ಲಚ್ಛತೆಗೆ ಮೊದಲ ಆದ್ಯತೆ ನೀಡಿ


Team Udayavani, Aug 18, 2018, 11:59 AM IST

bid-4.jpg

ಬೀದರ: ಆ.21ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿದ್ದು, ಬ್ರಿಮ್ಸ್‌ ಆಸ್ಪತ್ರೆ ಅಧಿಕಾರಿಗಳು ಸ್ವತ್ಛತೆಗೆ ಪ್ರಥಮ ಆದ್ಯತೆ ನೀಡಿ ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಿಮ್ಸ್‌ ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ ಬಳಿಕ ಮೆಡಿಕಲ್‌ ಕಾಲೇಜಿನ ಸಭಾಂಗಣದಲ್ಲಿ ಬ್ರಿಮ್ಸ್‌ ಆಸ್ಪತ್ರೆಯ ನಿರ್ದೇಶಕರು ಹಾಗೂ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು. ಆಸ್ಪತ್ರೆಯ ಎಲ್ಲ ಮಹಡಿಗಳನ್ನು ಸುತ್ತಿದಾಗ ಎಲ್ಲ ಕಡೆಗಳಲ್ಲೂ ಕಣ್ಣಿಗೆ ಅಶುಚಿತ್ವವೇ ಕಂಡುಬರುತ್ತಿದೆ. ಅಲ್ಲಲ್ಲಿ ಕೆಲವು ವಾರ್ಡ್‌ಗಳು ಖಾಲಿ ಬಿದ್ದಿವೆ. ಹೀಗಾದರೆ ಹೇಗೆ. ಈ ಬಗ್ಗೆ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ವೈದ್ಯಾಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬರುವ ಆರು ತಿಂಗಳೊಳಗೆ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸೇರಿ ಬೀದರ ಜನರಿಗೆ ಒಳ್ಳೆಯದನ್ನು ಮಾಡಬೇಕಿದೆ ಎಂದು ತಿಳಿಸಿದರು.

ಕುಂಟು ನೆಪಗಳನ್ನು ಹೇಳಿ, ಈ ಆಸ್ಪತ್ರೆಗೆ ಬರುವ ರೋಗಿಗಳು ಬೇರೆ ಕಡೆಗೆ ಹೋಗದಿರುವಂತೆ ವ್ಯವಸ್ಥೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಆಸ್ಪತ್ರೆ ಆರಂಭವಾಗಿ ವರ್ಷವಾದರೂ, ನಿಮಗೆ ಕೆಲವು ಕನಿಷ್ಟ ಸೌಕರ್ಯಗಳನ್ನು ಕಲ್ಪಿಸಲು ಆಗಿಲ್ಲ. ಒಂದು ಸಣ್ಣ ಖಾಸಗಿ ಆಸ್ಪತ್ರೆ ಸರಿಯಾಗಿ ನಡೆಯುತ್ತದೆ ಎಂದಾದರೆ ಇಷ್ಟು ದೊಡ್ಡ ಸರ್ಕಾರಿ ಆಸ್ಪತ್ರೆ ಏಕೆ ಸರಿಯಾಗಿ ನಡೆಸಲಾಗುತ್ತಿಲ್ಲ ಎಂದು ವೈದ್ಯಾಧಿಕಾರಿಗಳನ್ನು ಪ್ರಶ್ನಿಸಿದರು.

ನಿಮಗೆ ಏನು ಬೇಕು ಅದನ್ನು ಕೇಳಿ, ಅದಕ್ಕೆ ಬೇಕಾದ ಅನುದಾನ ಹಾಗೂ ಸೌಕರ್ಯಗಳನ್ನು ಕೊಡಿಸುತ್ತೇನೆ. ಎಚ್‌
ಕೆಆರ್‌ಡಿಬಿ ಯೋಜನೆಯಲ್ಲಿ ಅನುದಾನ ಮೀಸಲಿದ್ದು, ಕ್ರಿಯಾ ಯೋಜನೆ ತಯಾರಿಸಿ ಕೆಲಸ ಮಾಡಿ ಎಂದರು.

ಬರೀ ಸಮಸ್ಯೆಯನ್ನು ಹೇಳಿದರೆ ಯಾವ ಪರಿಹಾರವೂ ಸಿಗುವುದಿಲ್ಲ. ಈಗಿರುವ ಸಮಸ್ಯೆಗಳಿಗೆ ಹೇಗೆ, ಏನು ಪರಿಹಾರ ಕಂಡುಕೊಳ್ಳಬೇಕು ಎಂಬುದರ ನಿಟ್ಟಿನಲ್ಲಿ ಆಲೋಚಿಸಿದಲ್ಲಿ ಎಲ್ಲದಕ್ಕೂ ಪರಿಹಾರ ಸಾಧ್ಯವಿದೆ. ವೈದ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ| ಎಚ್‌.ಆರ್‌. ಮಹಾದೇವ ಇದೆ ವೇಳೆ ತಿಳಿಸಿದರು. ಶಾಸಕ ರಹೀಂ ಖಾನ್‌, ವೈದ್ಯಾಧಿಕಾರಿ ಡಾ| ಸಿ.ಎಸ್‌. ರಗಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ಎಂ.ಎ.ಜಬ್ಟಾರ್‌ ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಚಿವರಿಂದ ಆಸ ‌ಚಿವರಿಂದ ಆಸ್ಪತ್ರೆ ವ್ಯವಸ್ಥೆಪರಿಶೀಲನೆ ಪರಿಶೀಲನೆ
ಬೀದರ:
ನಗರದ ಬ್ರಿಮ್ಸ್‌ ಆಸ್ಪತ್ರೆಗೆ ಗುರುವಾರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಖುದ್ದು ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ವೀಕ್ಷಿಸಿದರು. ಆಯಾ ವಾರ್ಡ್‌ಗಳಲ್ಲಿನ ರೋಗಿಗಳೊಂದಿಗೆ ಮಾತನಾಡಿ, ವೈದ್ಯರು ನೀಡುತ್ತಿರುವ ಚಿಕಿತ್ಸೆ ಹಾಗೂ ಸೌಕರ್ಯಗಳ ಕುರಿತು ವಿಚಾರಿಸಿದರು. ಈ ವೇಳೆ ರೋಗಿಗಳು ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ವಿವರಿಸಿದರು. ರೋಗಿಗಳ ಮಾತು
ಆಲಿಸಿದ ಸಚಿವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ತರಾಟೆ ತೆಗೆದುಕೊಂಡರು. ಸರ್ಕಾರಿ ಆಸ್ಪತ್ರೆಗಳಿಗೆ ಬಡವರು ಬರುತ್ತಾರೆ.

ಅವರ ಆರೋಗ್ಯ ಕಾಪಾಡುವುದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿದೆ. ತಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿ ಇಲ್ಲವಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಅಲ್ಲಲ್ಲಿ ಅಶುಚಿತ್ವವನ್ನು ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ
ವಿಷಯಕ್ಕೆ ಪ್ರಥಮ ಆಧ್ಯತೆ ನೀಡಿ, ಸ್ವತ್ಛತೆಗೆ ಒತ್ತು ಕೊಡಿ ಎಂದು ಬ್ರಿಮ್ಸ್‌ ನಿರ್ದೇಶಕ ಡಾ| ಚೆನ್ನಣ್ಣ ಅವರಿಗೆ ನಿರ್ದೇಶನ ನೀಡಿದರು.

ಎಲ್ಲ ವಾರ್ಡ್‌ಗಳಲ್ಲಿ ಸರಿಯಾಗಿ ಬೆಳಕು, ಗಾಳಿ ಬರುವ ಹಾಗೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಆಸ್ಪತ್ರೆಗೆ ಬರುವ
ರೋಗಿಗಳಿಗೆ ಬಹುತೇಕ ಎಲ್ಲ ಸೌಕರ್ಯ ಇಲ್ಲಿಯೇ ಸಿಗುವಂತಾಗಬೇಕು. ಈ ಹಿನ್ನೆಲೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿ ಸಿದ ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ವಾರ್ಡ್‌ಗಳಿಗೆ ಭೇಟಿ ನೀಡುವ ವೇಳೆ ಅಲ್ಲಲ್ಲಿ ಕೆಲವೊಂದು ವಾರ್ಡ್‌ಗಳು ಖಾಲಿಯಾಗಿರುವುದನ್ನು ಗಮನಿಸಿದ ಸಚಿವರು, ವಾರ್ಡ್‌ಗಳನ್ನು ಹೀಗೆ ಅನವಶ್ಯಕವಾಗಿ ಖಾಲಿ ಇರುವಂತೆ ಬಿಡಬೇಡಿ. ವೈದ್ಯಕೀಯ ಉಪಕರಣಗಳು, ಯಂತ್ರೋಪಕರಣಗಳನ್ನು ಕೂಡಲೇ ಹಾಕಿ ಆಸ್ಪತ್ರೆಯು ಅಚ್ಚುಕಟ್ಟಾಗಿರುವ ಹಾಗೆ ನೋಡಿಕೊಳ್ಳಿರಿ ಎಂದು ತಿಳಿಸಿದರು.

ಶಾಸಕ ರಹೀಂ ಖಾನ್‌, ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ, ವೈದ್ಯಾಧಿಕಾರಿಗಳಾದ ಡಾ| ಸಿ.ಎಸ್‌. ರಗಟೆ
ಸೇರಿದಂತೆ ಬ್ರಿಮ್ಸ್‌ ಆಸ್ಪತ್ರೆಯ ಇನ್ನಿತರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.  

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.