ಇಮ್ರಾನ್‌ ಖಾನ್‌ ಹೊಸ ಇನ್ನಿಂಗ್ಸ್‌ ಶುರು

Team Udayavani, Aug 19, 2018, 6:00 AM IST

z-16.jpg

ಇಸ್ಲಾಮಾಬಾದ್‌: “ಕಪ್ತಾನ’ ಇಮ್ರಾನ್‌ ಖಾನ್‌ ಅವರು ಪಾಕಿಸ್ಥಾನದ ಪ್ರಧಾನಿಯಾಗಿ ಹೊಸ ಇನ್ನಿಂಗ್ಸ್‌ ಶುರುಮಾಡಿದ್ದಾರೆ. ಗಂಭೀರ ಆರ್ಥಿಕ ಬಿಕ್ಕಟ್ಟು, ನೆರೆರಾಷ್ಟ್ರಗಳೊಂದಿಗಿನ ಮನಸ್ತಾಪ, ಉಗ್ರ ನಿಗ್ರಹ ನಿರ್ಲಕ್ಷ್ಯದ ಪರಿಣಾಮವಾಗಿ ಅಂತಾರಾಷ್ಟ್ರೀಯ ನಿರ್ಬಂಧ ಭೀತಿ ಎದುರಿಸುತ್ತಿರುವ ಪಾಕಿಸ್ಥಾನದ ನೂತನ ಪ್ರಧಾನಮಂತ್ರಿಯಾಗಿ ಶನಿವಾರ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಅಧ್ಯಕ್ಷರ ಭವನ ಐವಾನ್‌-ಎ-ಸದರ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಮಮೂ°ನ್‌ ಹುಸೇನ್‌ ಅವರು ಪಾಕ್‌ನ ಖಾನ್‌ಗೆ ಪ್ರಮಾಣವಚನ ಬೋಧಿಸಿದರು. ಭಾರತೀಯ ಮಾಜಿ ಕ್ರಿಕೆಟಿಗ, ಪಂಜಾಬ್‌ ಸಚಿವ ನವಜೋತ್‌ ಸಿಂಗ್‌ ಸಿಧು, ಪಾಕ್‌ ಸೇನಾ ಮುಖ್ಯಸ್ಥ ಜ.ಖಮರ್‌ ಜಾವೇದ್‌ ಬಜ್ವಾ, ರಾಜ ತಾಂತ್ರಿಕರು,ಇತರೆ ವಿಶೇಷ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿ ಯಾಗಿದ್ದರು. ಪ್ರಮಾಣ ಸ್ವೀಕಾರದ ವೇಳೆ ಖಾನ್‌ ಅವರು ಕೆಲವು ಉರ್ದು ಪದಗಳನ್ನು ತಪ್ಪಾಗಿ ಉಚ್ಚರಿಸಿದ್ದೂ ಕಂಡುಬಂತು. ಈ ನಡುವೆ, ಪಾಕ್‌ ಅಧ್ಯಕ್ಷ ಹುದ್ದೆಗೆ ಪಕ್ಷದ ಹಿರಿಯ ನಾಯಕ ಡಾ.ಆರಿಫ್ ಅಲ್ವಿ ಅವರನ್ನು ನಾಮನಿರ್ದೇಶನ ಮಾಡಿರುವುದಾಗಿ ಇಮ್ರಾನ್‌ ಘೋಷಿಸಿದ್ದಾರೆ.

ಪಿಒಕೆ ಅಧ್ಯಕ್ಷ ಪಕ್ಕದ ಆಸನ ವಿವಾದ: ಪ್ರಮಾಣ ಸ್ವೀಕಾರ ಸಮಾರಂಭದಲ್ಲಿನ ಆಸನ ವ್ಯವಸ್ಥೆಯು ಇದೀಗ ವಿವಾದಕ್ಕೀಡಾಗಿದೆ. ಭಾರತದಿಂದ ತೆರಳಿದ್ದ ನವಜೋತ್‌ ಸಿಧು ಅವರಿಗೆ ಪಾಕ್‌ ಆಕ್ರಮಿತ ಕಾಶ್ಮೀರದ ಅಧ್ಯಕ್ಷರ ಪಕ್ಕದ ಆಸನವನ್ನು ಮೀಸಲಿಟ್ಟಿದ್ದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು-ಕಾಶ್ಮೀರ ಕಾಂಗ್ರೆಸ್‌ ಅಧ್ಯಕ್ಷ ಗುಲಾಂ ಅಹ್ಮದ್‌ ಮಿರ್‌, “ಸಿಧು ಜವಾಬ್ದಾರಿಯುತ ವ್ಯಕ್ತಿ. ಈ ವಿವಾದ ಕುರಿತು ಅವರೇ ಉತ್ತರಿಸಬೇಕು. ಪಿಒಕೆ ಅಧ್ಯಕ್ಷರ ಪಕ್ಕದಲ್ಲಿ ಅವರು ಕುಳಿತುಕೊಳ್ಳಬಾರ ದಿತ್ತು’ ಎಂದಿದ್ದಾರೆ. ಇದೇ ವೇಳೆ, ಹರ್ಯಾಣ ಸಚಿವ ಅನಿಲ್‌ ವಿಜ್‌, “ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸಿಧು ಅವರು ಭಾರತಕ್ಕೆೆ ತೋರಿದ ಅವಿಧೇಯತೆ’ ಎಂದಿದ್ದಾರೆ. ಇದಕ್ಕೂ ಮೊದಲು ಸಿಧು ಪಾಕ್‌ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿಕೊಂಡ ಫೋಟೋ ಕೂಡ ಹರಿದಾಡಿತ್ತು. ಈ ವೇಳೆ ಮಾತನಾಡಿದ್ದ ಸಿಧು, “ಗೆಳೆಯ ಇಮ್ರಾನ್‌ ಖಾನ್‌ ಅವರು ಪ್ರಧಾನಿ ಹುದ್ದೆಗೇರಿರುವುದು ಭಾರತ-ಪಾಕ್‌ ನಡುವಿನ ಶಾಂತಿ ಪ್ರಕ್ರಿಯೆ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ’ ಎಂದಿದ್ದರು. 

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.