ಜನಪದ ಮರೆಯಾದ್ದರಿಂದ ಕೋಮು ಗಲಭೆ

Team Udayavani, Aug 20, 2018, 12:41 PM IST

janapada.jpg

ಬೆಂಗಳೂರು: ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ ಕಾರಣದಿಂದಲೇ ದೇಶದಲ್ಲಿ ಕೊಮು ಗಲಭೆ ಮತ್ತು ಅಶಾಂತಿ ಉಂಟಾಗುತ್ತಿದೆ ಎಂದು ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅಭಿಪ್ರಾಯಪಟ್ಟಿದ್ದಾರೆ. ಡಾ.ವೇಮಗಲ್‌ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಷ್ಠಾನದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಪೂರ್ವಿಕರ ಆಚಾರ, ವಿಚಾರ ಮತ್ತು ಜೀವನಶೈಲಿ ಬಿಂಬಿಸುವ ಕೆಲಸಗಳನ್ನು ಜನಪದ ಕಲೆಗಳು ಮಾಡುತ್ತಿದ್ದವು. ಅಕ್ಷರ ಜ್ಞಾನ ಇಲ್ಲದ ಕಾಲದಲ್ಲಿ ಜನಸಾಮಾನ್ಯರು ಕಟ್ಟಿ ಬೆಳೆಸಿದ ಶ್ರೀಮಂತ ಸಂಸ್ಕೃತಿಯೇ ಈ ಜನಪದ. ಅಂತಹ ಕಲಾ ಸಂಸ್ಕೃತಿ ಆಧುನಿಕ ಯುಗದಲ್ಲಿ ಕಳೆದುಹೋಗುತ್ತಿರುವ ಕಾರಣದಿಂದಲೇ ದೇಶದೊಳಗೆ ಕೋಮು ಗಲಭೆ, ಅಶಾಂತಿ ಉಂಟಾಗಿದೆ ಎಂದು ಹೇಳಿದರು.

ಪದ್ಮಶ್ರೀ ದೊರೆಯಲಿ: ಗಾಯಕಿ ಬಿ.ಕೆ.ಸುಮಿತ್ರಾ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಆದರೆ, ಅದಕ್ಕಿಂತಲೂ ಉತ್ಕೃಷ್ಟವಾದ ಪ್ರಶಸ್ತಿಗೆ ಅವರು ಅರ್ಹರಾಗಿದ್ದಾರೆ. ಒಂದು ವೇಳೆ ನಾನೇದರೂ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಇದ್ದಿದ್ದರೆ ಗ್ರಾಮೀಣ ಪ್ರತಿಭೆಗಳಿಗೆ ಉನ್ನತ ಮಟ್ಟದ ಪ್ರಶಸ್ತಿಗಳನ್ನು ನೀಡುತ್ತಿದ್ದೆ. ಗಾಯಕರಾದ ಬಿ.ಕೆ.ಸುಮಿತ್ರಾ ಹಾಗೂ ಹಂಸಲೇಖ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹೆಸರುಗಳಿಸಿರುವ ಗಾನ ಕೋಗಿಲೆ ಗಂಗಮ್ಮ ಅವರು ಪ್ರದ್ಮಶ್ರೀ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಆದಷ್ಟು ಶೀಘ್ರವಾಗಿ ಅವರಿಗೆ ಈ ಪ್ರಶಸ್ತಿ ದೊರೆಯಬೇಕು ಎಂದು ಆಶಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರು ಮಾತನಾಡಿ, ಜನಪದ ಸಾಹಿತ್ಯ ಸಂದರ್ಭಕ್ಕಾನುಸಾರವಾಗಿ ರಚಿತವಾಗಿರುವುದು. ಒಬ್ಬರ ಬಾಯಿಯಿಂದ ಮತ್ತೂಬ್ಬರ ಬಾಯಿಗೆ ಹರಿದು ಬಂದ ಜನಪದ ಸಾಹಿತ್ಯ ಇಲ್ಲಿಯವರೆಗೂ ಬದುಕಿದೆ. ಅದನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಇಂದಿನ ಪೀಳಿಗೆ ಮಾಡಬೇಕಿದೆ ಎಂದರು.

ಜಾನಪದ ಕಲೆಗಳು ಗ್ರಾಮೀಣ ಕಲಾಪ್ರಕಾರಗಳ ಜೀವಂತಿಕೆಯ ದ್ಯೊತಕ. ಇಂತಹ ಕಲೆಗಳ ಬಗ್ಗೆ ಯುವ ಜನತೆಯಲ್ಲಿ ಆಸಕ್ತಿ ಬೆಳೆಯಬೇಕು. ಯುವ ತಲೆಮಾರಿಗೆ ಅದರಲ್ಲೂ ದೊಡ್ಡ ನಗರಗಳಲ್ಲಿ ವಾಸಿಸುವವರಿಗೆ ಜನಪದ ಕಲೆಗಳ ಪರಿಚಯವೇ ಇರುವುದಿಲ್ಲ. ಅವರಿಗೆ ಜನಪದ ಕಲೆಗಳನ್ನು ತಲುಪಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಗೀತ ಸಂಯೋಜಕ ಹಂಸಲೇಖ ಹಾಗೂ ಗಾಯಕಿ ಬಿ.ಕೆ.ಸುಮಿತ್ರ ಅವರಿಗೆ ಡಾ.ವೇಮಗಲ್‌ ನಾರಾಯಣಾÌಮಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಪ್ರತಿಷ್ಠಾನದ ಅಧ್ಯಕ್ಷ ಡಾ.ವೇಮಗಲ್‌ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.