ಮಹಿಳಾ ಟೆಕ್ಕಿಯ ಕೊಂದ ಪ್ರಿಯಕರ

Team Udayavani, Aug 21, 2018, 12:01 PM IST

mahila.jpg

ಬೆಂಗಳೂರು: ದೆಹಲಿ ಮೂಲದ ಮಹಿಳಾ ಟೆಕ್ಕಿ ಒಬ್ಬರನ್ನು ಪ್ರಿಯಕರನೇ ಉಸಿರುಗಟ್ಟಿಸಿ ಹತ್ಯೆಗೈದು ಪರಾರಿಯಾಗಿರುವ ಘಟನೆ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯ ಕೈ ತೋಟ ಎಂಬಲ್ಲಿ ನಡೆದಿದೆ. ದೆಹಲಿ ಮೂಲದ ವಿಜಯಲಕ್ಷ್ಮಿ (28) ಕೊಲೆಯಾದ ಟೆಕ್ಕಿ. 2-3 ದಿನಗಳ ಹಿಂದೆಯೇ ಕೊಲೆಯಾಗಿದ್ದು, ಮನೆಯಿಂದ ಕೊಳೆತ ವಾಸನೆ ಬಂದಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಂಗಳ ಹಿಂದಷ್ಟೇ ದೆಹಲಿಯಿಂದ ಬೆಂಗಳೂರಿಗೆ ಬಂದು ಪ್ರತಿಷ್ಠಿತ ಸಾಫ್ಟ್ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯಲಕ್ಷ್ಮಿ, ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯ ಕೈ ತೋಟ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ವಾರಗಳಿಂದ ವಿಜಯಲಕ್ಷ್ಮಿ ಯುವಕನೊಬ್ಬನ ಜತೆ ಓಡಾಡುತ್ತಿದ್ದರು. ಆತನೇ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆ.15ರಂದು ಸ್ವಾತಂತ್ರ್ಯ ದಿನಾಚರಣೆ ದಿನ ವಿಜಯಲಕ್ಷ್ಮಿ ಮನೆಗೆ ಯುವಕ ಬಂದಿದ್ದ. ಈ ವೇಳೆ ಮನೆ ಮಾಲೀಕರಿಗೆ ವಿಜಯಲಕ್ಷ್ಮಿ ತನ್ನ ಬಾಯ್‌ಫ್ರೆಂಡ್‌ ಎಂದು ಪರಿಚಯ ಮಾಡಿಸಿದ್ದರು. ಆದರೆ, ಆ.17ರಿಂದ ವಿಜಯಲಕ್ಷ್ಮಿ ಹೊರಗಡೆ ಕಾಣಿಸಿಕೊಂಡಿಲ್ಲ. ಈ ನಡುವೆ ಆಕೆಯ ತಂದೆ ಸೋಮವಾರ ಬೆಳಗ್ಗೆ ಮನೆ ಮಾಲೀಕರಿಗೆ ಕರೆ ಮಾಡಿ ಮಗಳು ಕರೆ ಸ್ವೀಕರಿಸುತ್ತಿಲ್ಲ. ಒಮ್ಮೆ ನೋಡಿ ಎಂದು ಕೇಳಿಕೊಂಡಿದ್ದರು.

ಹೀಗಾಗಿ ಆಕೆಯ ಮನೆಗೆ ಹೋಗಿ ಪರಿಶೀಲಿಸಿದಾಗ ಮನೆಯೊಳಗಿಂದ ಕೆಟ್ಟ ವಾಸನೆ ಬರುತ್ತಿತ್ತು. ಇದರಿಂದ ಅನುಮಾನಗೊಂಡ ಮನೆ ಮಾಲೀಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ನೆಲದ ಮೇಲೆ ವಿಜಯಲಕ್ಷ್ಮಿ ಮೃತದೇಹ ಬಿದ್ದಿತ್ತು. ಮುಖ, ದೇಹ  ಊದಿಕೊಂಡಿದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು.

ಘಟನೆ ನಡೆದ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಹೀಗಾಗಿ ಆ ರಸ್ತೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಸಂಗ್ರಹಿಸಲಾಗಿದೆ. ಜತೆಗೆ ಯುವತಿಯ ಮೊಬೈಲ್‌ ಕರೆಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವೈಟ್‌ಫೀಲ್ಡ್‌ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.