ಏಷ್ಯಾಡ್ ಶೂಟಿಂಗ್ ನಲ್ಲಿ 15ರ ಹರೆಯದ ವಿಹಾನ್ ಮುಡಿಗೆ ಬೆಳ್ಳಿ ಪದಕ
Team Udayavani, Aug 23, 2018, 3:50 PM IST
ಪಾಲೆಂಬಾಗ್ : 18 ನೇ ಏಶ್ಯನ್ ಗೇಮ್ಸ್ ನಲ್ಲಿ ಗುರುವಾರ ಭಾರತಕ್ಕೆ ಎರಡನೇ ಪದಕ ದಕ್ಕಿದೆ. ಪುರುಷರ ಡಬಲ್ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ಭಾರತದ 15ರ ಹರೆಯದ ಶಾರ್ದೂಲ್ ವಿಹಾನ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಉತ್ತರ ಪ್ರದೇಶ ಮೂಲದ ವಿಹಾನ್ 73 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊರಿಯಾದ ಶಿನ್ ಹುನ್ವೊ 74 ಅಂಕಗಳೊಂದಿಗೆ ಬಂಗಾರ ಪದಕ ಪಡೆದರು.
ವಿಹಾನ್ ಶಾರ್ದೂಲ್ ಕಳೆದ ವರ್ಷ ನಡೆದಿದ್ದ ಶೂಟ್ ಗನ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ 4 ಬಂಗಾರ ಗೆದ್ದಿದ್ದರು. ಏಶ್ಯನ್ ಗೇಮ್ಸ್ನಲ್ಲಿ ಎರಡು ಪದಕ ಗೆದ್ದಿದ್ದ ಶೂಟರ್ ಅನ್ವರ್ ಸುಲ್ತಾನ್ ಅವರ ಬಳಿ ವಿಹಾನ್ ತರಬೇತಿ ಪಡೆಯುತ್ತಿದ್ದಾರೆ.
ವಿಹಾನ್ ಶಾರ್ದೂಲ್ ಸಾಧನೆಗೆ ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್, ಒಲಿಂಪಿಕ್ಸ್ ಪದಕ ವಿಜೇತ ಅಭಿನವ್ ಬಿಂದ್ರಾ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ