ಕೇಂದ್ರ ವಿಶೇಷ ಪ್ಯಾಕೇಜ್‌ ಘೋಷಿಸಲಿ

Team Udayavani, Aug 26, 2018, 11:42 AM IST

m2-kendra.jpg

ಮೈಸೂರು: ಅತಿವೃಷ್ಟಿಯಿಂದ ಭಾರೀ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಗೆ ಕೇಂದ್ರಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿ ಬಂದಿದ್ದೇನೆ. ಸ್ವಾತಂತ್ರಾéನಂತರ ಕೊಡಗು ಜಿಲ್ಲೆಯಲ್ಲಿ ಬಹು ದೊಡ್ಡ ಅನಾಹುತ ಸಂಭವಿಸಿದೆ. ರಸ್ತೆ,ಮನೆಗಳೆಲ್ಲಾ ಹಾನೀಗೀಡಾಗಿದ್ದು, ಮಕ್ಕಳು ಶಾಲೆಗೆ ಹೋಗಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದರು.

ಕೇರಳ ರಾಜ್ಯಕ್ಕೆ ಇನ್ನೂ ಹೆಚ್ಚಿನ ಪರಿಹಾರ ಘೋಷಣೆ ಮಾಡಬೇಕಿತ್ತು ಎಂದ ಅವರು, ಹಾಗೆ ನೋಡಿದರೆ ಕೊಡಗಿಗೆ ಇವತ್ತಿನವರೆಗೆ ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಕೊಡಗಿಗೆ ಪರಿಹಾರ ಘೋಷಣೆ ಮಾಡದೆ ಬೇಜವಾಬ್ದಾರಿತನ ತೋರುತ್ತಿದೆ. ಸ್ವತಃ ಪ್ರಧಾನಿಮಂತ್ರಿಯವರೇ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಬೇಕಿತ್ತು.

ಆದರೆ, ಅವರ ಪರವಾಗಿ ಬಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಇಲ್ಲಿಗೆ ಬರುವ ಮುನ್ನವೇ ಪ್ರಧಾನಮಂತ್ರಿಗಳ ಜೊತೆ ಚರ್ಚಿಸಿ ಬಂದು ಪರಿಹಾರ ಘೋಷಣೆ ಮಾಡಬೇಕಿತ್ತು. ಸ್ಥಳೀಯ ಸಂಸದರು ಏನು ಮಾಡುತ್ತಿದ್ದರು, ಬರೀ ಭಾಷಣ ಮಾಡೋಕಾ ಅವರು ಇರೋದು ಎಂದು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಗರಂ ಆದರು. ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಕೊಡಗಿನ ಜನತೆಗೆ ತಮ್ಮ ಕೈಲಾದ ಸಹಾಯ ಮಾಡುತ್ತಿರುವ ಸಾರ್ವಜನಿಕರಿಗೆ ಸಿದ್ದರಾಮಯ್ಯ ಧನ್ಯವಾದ ಹೇಳಿದರು.

ಸಿದ್ದು ಯುರೋಪ್‌ ಪ್ರವಾಸ: ತಮ್ಮ ಮಗ ಡಾ.ಯತೀಂದ್ರ ಜೊತೆಗೆ ಸೆ. 3ರಿಂದ ಯುರೋಪ್‌ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲಂಡನ್‌ನಲ್ಲಿರುವ ನನ್ನ ಸ್ನೇಹಿತ ಬಹಳ ವರ್ಷಗಳಿಂದ ಅಲ್ಲಿಗೆ ಬರುವಂತೆ ಕರೆಯುತ್ತಿದ್ದಾನೆ. ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸ ಹೋಗಲು ಆಗಿರಲಿಲ್ಲ. ಹೀಗಾಗಿ ಈಗ ಪ್ರವಾಸಕ್ಕೆ ಹೋಗುತ್ತಿದ್ದು, ನನ್ನ ಜೊತೆಗೆ ಸಚಿವರಾದ ಆರ್‌.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್‌, ವಿಧಾನಪರಿಷತ್‌ ಸದಸ್ಯ ಕೆ.ಗೋವಿಂದರಾಜು ಕೂಡ ಬರಲಿದ್ದಾರೆ ಎಂದರು.

ಮತ್ತೂಮ್ಮೆ ಸಿಎಂ-ಏನಾದ್ರು ಅರ್ಥ ಕಲ್ಪಿಸಿಕೊಳ್ಳಿ: ಹೊಳೆನರಸೀಪುರ ತಾಲೂಕಿನ ಹಾಡ್ಯದಲ್ಲಿ ಶನಿವಾರ ನಾನು ಇನ್ನೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ನೀಡಿದ ಹೇಳಿಕೆ ಬಗ್ಗೆ ಯಾರು ಏನಾದರೂ ಅರ್ಥ ಕಲ್ಪಿಸಿಕೊಳ್ಳಲಿ, ಜನರ ಆಶೀರ್ವಾದ ಇದ್ದರೆ ಇನ್ನೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಪುನರುತ್ಛರಿಸಿದರು.

ಹಾಡ್ಯ ಗ್ರಾಮದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಸ್ಥಳೀಯರು ಹಲವಾರು ಬೇಡಿಕೆಗಳನ್ನಿಟ್ಟರು, ಅದನ್ನೆಲ್ಲಾ ಈಡೇರಿಸಬೇಕಾದರೆ ನಮ್ಮ ಸರ್ಕಾರ ಬರಬೇಕು ಎಂಬ ಅರ್ಥದಲ್ಲಿ ರಾಜ್ಯದಲ್ಲಿ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ, ಆಗ ನೀವು ಹೇಳಿದ ಕೆಲಸಗಳನ್ನೆಲ್ಲಾ ಮಾಡಿಕೊಡೋಣ ಎಂದಿದ್ದೇನೆ ಅದರಲ್ಲಿ ತಪ್ಪೇನು? ಜನ ಕೇಳಿದಾಗ ನಮ್ಮ ಪಕ್ಷ ಅಧಿಕಾರಕ್ಕೆ ಬರಲ್ಲಾ ಅನ್ನುವುದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರ ಐದು ವರ್ಷ ಪೂರೈಸಲಿ ಮುಂದೆ ನೋಡೋಣ ಎಂದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.