ಜಲಚರ, ಅರಣ್ಯ ಸಂಪತ್ತಿನ ಮಾರಣ ಹೋಮ..!


Team Udayavani, Aug 27, 2018, 11:55 AM IST

27-agust-7.jpg

ಸುಳ್ಯ : ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಸಂಪಾಜೆ, ಊರುಬೈಲು ಬಳಿ ನದಿ, ತೋಡುಗಳಲ್ಲಿ ಜಲಚರಗಳು ಸತ್ತು ಬಿದ್ದಿವೆ ಹಾಗೂ ಕಡಮಕಲ್ಲು ಅರಣ್ಯ ಭಾಗದಲ್ಲಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

ಪ್ರಕೃತಿ ಮುನಿಸು ಮಾನವನ ವಾಸ ಸ್ಥಾನದ ಜತೆಗೆ ನದಿ, ತೋಡಿನ ಜಲಚರಗಳ ಮೇಲೂ ವಕ್ಕರಿಸಿದೆ. ಅದಕ್ಕೆ ಅಲ್ಲಲ್ಲಿ ಸತ್ತು ಬಿದ್ದಿರುವ ಮೀನು, ನದಿ ನೀರಲ್ಲಿ ಕೊಚ್ಚಿಕೊಂಡು ಬಂದಿರುವ ಅಪಾರ ಪ್ರಮಾಣದ ಮರಮುಟ್ಟುಗಳು ಉದಾಹರಣೆ. ಇವಲ್ಲದೆ ಹಾವು, ಹಕ್ಕಿ, ಇತರೆ ಕಾಡು ಪ್ರಾಣಿಗಳ ಆವಾಸಗಳಿಗೂ ಕಂಟಕವಾಗಿ ಪರಿಣಮಿಸಿತ್ತು.

ಆಮ್ಲಜನಕದ ಕೊರತೆ
ಕೆಸರು ಮಿಶ್ರಿತ ಮಣ್ಣು ನೀರಿನೊಂದಿಗೆ ಸೇರಿದ ಕಾರಣ ಮೀನು, ಆಮೆ ಮೊದಲಾದ ಜಲಚರಗಳಿಗೆ ಆಮ್ಲಜನಕದ ಕೊರತೆ ಉಂಟಾಗಿ ಅವು ಅಸುನೀಗಿರಬಹುದು. ಮೀನುಗಳ ಸಂತಾನೋತ್ಪತ್ತಿ ಕಾಲಘಟ್ಟ ಇದಾಗಿರುವ ಕಾರಣ ಅಪಾಯ ಹೆಚ್ಚು. ಅವುಗಳ ನಾಶಗೊಂಡು ಸಂಖ್ಯೆ ಇಳಿಮುಖಗೊಳ್ಳುವ ಸಾಧ್ಯತೆ ಇದೆ. 

ಊರುಬೈಲು, ಸಂಪಾಜೆ, ಕಲ್ಲುಗುಂಡಿ ಪರಿಸರದಲ್ಲಿ ಹರಿಯುವ ತೋಡು, ನದಿಗಳು ಕೆಸರು ನೀರನ್ನು ಹೊತ್ತುಕೊಂಡು ಹರಿಯುತ್ತಿವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಪ್ರಮಾಣ ಕೊಂಚ ತಗ್ಗಿದೆ. ನೀರು ಪೂರ್ತಿ ತಿಳಿಯಾದಲ್ಲಿ ಮಾತ್ರ ಜಲಚರ ಸಾವು ನಿಯಂತ್ರಣಕ್ಕೆ ಬರಬಹುದು. 

ಅರಣ್ಯ ಸಂಪತ್ತು ನಾಶ
ಕಡಮಕಲ್ಲು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿ ಬೆಳೆಬಾಳುವ ಮರಗಳು ನದಿ ನೀರಲ್ಲಿ ಕೊಚ್ಚಿಕೊಂಡು ಬಂದಿವೆ. ಅವುಗಳ ಮೌಲ್ಯವೇ ಕೋಟ್ಯಂತರ ರೂ. ದಾಟಬಹುದು. ಅರಣ್ಯ ಇಲಾಖೆಗೆ ಇದನ್ನು ಅಂದಾಜಿಸಲು ಸಾಧ್ಯವಾಗಿಲ್ಲ. ಸೇತುವೆ, ಕಿಂಡಿ ಅಣೆಕಟ್ಟಿನ ಪಿಲ್ಲರ್‌ಗಳ ಬಳಿ ಬೃಹತ್‌ ಗಾತ್ರದ ಮರಗಳು ತುಂಬಿದ್ದು, ನಾಶದ ಪ್ರಮಾಣಕ್ಕೆ ಸಾಕ್ಷಿಯಂತಿವೆ.

ಪಾಲಿ ಜಾತಿಗೆ ಸೇರಿದ ಮರ ಹಾಗೂ ವಿರಳವಾಗಿ ಕಾಣಸಿಗುವ ಅರಣ್ಯ ಜಾತಿಯ ಗಿಡ, ಮರಗಳು ಕೂಡ ಧರಾಶಾಯಿ ಆಗಿವೆ. ಆನೆ ಸೀಳಿದಂತೆ ಇರುವ ಮರಗಳು ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿವೆ. ಜೋಡುಪಾಲ, ಕಲ್ಮಕಾರು, ಕೊಯನಾಡು, ಕಲ್ಲುಗುಂಡಿ ಬಳಿಯ ನದಿ, ತೋಡುಗಳಲ್ಲಿ ಈಗಲೂ ಮರದ ರಾಶಿಗಳು ತುಂಬಿವೆ. ನಾಲ್ಕೈದು ದಿವಸಗಳ ಹಿಂದಿನವರೆಗೂ ನೀರಿನ ಜತೆ ಮರದ ದಿಮ್ಮಿಗಳು ಕೊಚ್ಚಿಕೊಂಡು ಬರುತ್ತಿದ್ದವು ಅನ್ನುತ್ತಾರೆ ಕೊಯನಾಡು ಬಳಿ ಸಿಕ್ಕ ಅಪ್ಪಯ್ಯ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.