ಬೆಟಗೇರಿಯಲ್ಲಿ ದುರ್ಗಾದೇವಿಗೆ ಗಂಗಾಪೂಜೆ

Team Udayavani, Aug 27, 2018, 5:32 PM IST

27-agust-21.jpg

ಕೊಪ್ಪಳ: ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿಯ ಮೂರ್ತಿಗೆ ನೂಲು ಹುಣ್ಣಿಮೆ ಪ್ರಯುಕ್ತ ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಗಂಗಾಸ್ನಾನ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಲಾಯಿತು. ನದಿ ತಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅನ್ನ ಸಂತರ್ಪಣೆ ನೆರವೇರಿತು.

ಪ್ರತಿ ವರ್ಷದಂತೆ ಈ ಗ್ರಾಮದಿಂದ ಮದುವೆಯಾಗಿ ಪತಿಯ ಮನೆಗೆ ತೆರಳಿರುವ ಸಾವಿರಾರು ಮಹಿಳೆಯರು ನೂಲು ಹುಣ್ಣಿಮೆಯ ದಿನದಂದು ತವರು ಮನೆಗೆ ಬಂದು ತಮ್ಮ ಸಹೋದರರಿಗೆ ರಕ್ಷಾ ಬಂಧನ ಕಟ್ಟುವ ಮೂಲಕ ಹಬ್ಬದಲ್ಲಿ ಪಾಲ್ಗೊಳ್ಳುವ ಪದ್ಧತಿ ಈ ಗ್ರಾಮದಲ್ಲಿ ನೂರಾರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ರವಿವಾರವೂ ಸಹಿತ ಸಾವಿರಾರು ಮಹಿಳೆಯರು ತವರು ಮನೆಗೆ ವಾಪಸ್ಸಾಗಿ ಅಣ್ಣ, ತಮ್ಮಂದಿರಿಗೆ ರಕ್ಷಾ ಬಂಧನ ಕಟ್ಟುವ ಮೂಲಕ ಸಹೋದರ ಬಾಂಧವ್ಯ ತೋರಿದರು. ಇದೇ ಹುಣ್ಣಿಮೆಯಂದು ಗ್ರಾಮದ ದುರ್ಗಾದೇವಿ ಮೂರ್ತಿಯೂ ತುಂಗಭದ್ರಾ ಹಿನ್ನೀರು ಪ್ರದೇಶಕ್ಕೆ ಮೆರವಣಿಗೆ ಹೊರಡಲಿದೆ. ಅದರಂತೆ ರವಿವಾರ ಗ್ರಾಮದಲ್ಲಿ ಪಾಯಸ, ಅನ್ನ, ಸಾಂಬಾರು ಸೇರಿದಂತೆ ಪ್ರಸಾದ ವ್ಯವಸ್ಥೆ ಸಿದ್ದಪಡಿಸಿಕೊಂಡು ಪಲ್ಲಕ್ಕಿಯಲ್ಲಿ ದುರ್ಗಾದೇವಿ ಮೂರ್ತಿಯನ್ನಿಟ್ಟು ಮೆರವಣಿಗೆ ಮಾಡುತ್ತಾ ಎಂಟು ಎತ್ತಿನ ಹಳಿ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು. ಮತ್ತೂರು ಗ್ರಾಮದ ಮಾರ್ಗವಾಗಿ ತುಂಗಭದ್ರಾ ಹಿನ್ನೀರು ಪ್ರದೇಶಕ್ಕೆ ತೆರಳಿ ನದಿಯಲ್ಲಿ ಬೆಳ್ಳಿ ಮೂರ್ತಿಗೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಮಾಡಲಾಯಿತು.

ಜೊತೆಗೆ ಸುತ್ತಲಿನ ಸಾವಿರಾರು ಜನರು ಎತ್ತಿನ ಬಂಡಿ, ಟ್ರ್ಯಾಕ್ಟರ್‌, ಟಂಟಂ ಸೇರಿದಂತೆ ದ್ವಿಚಕ್ರ ವಾಹನಗಳಲ್ಲಿ ಕುಟುಂಬ ಸಮೇತ ನದಿ ತಟಕ್ಕೆ ಆಗಮಿಸಿ ಮನೆಯಿಂದ ತಂದಿದ್ದ ವಿವಿಧ ಭಕ್ಷ್ಯಭೋಜನ ಸವಿದು ಸಂಭ್ರಮಿಸಿದರು. ಈ ವರ್ಷ ತುಂಗಭದ್ರಾ ಹಿನ್ನೀರು ಪ್ರದೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ರೈತರ ಮೊಗದಲ್ಲಿ ಹರ್ಷ ಕಂಡು ಬಂದಿತು. ದುರ್ಗಾದೇವಿ ಮೂರ್ತಿಯ ಪಲ್ಲಕ್ಕಿ ಮತ್ತೂರು ಗ್ರಾಮಕ್ಕೆ ಆಗಮಿಸಿ ರಾತ್ರಿಯವರೆಗೂ ಅದ್ಧೂರಿಯಿಂದ ಮೆರವಣಿಗೆ ಮಾಡಲಾಯಿತು. ವಿಶೇಷವೆಂಬಂತೆ, ದುರ್ಗಾದೇವಿ ಮೂರ್ತಿ ಬೆಟಗೇರಿ ಗ್ರಾಮದ್ದಾಗಿದ್ದರೂ, ಮತ್ತೂರು ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡುವುದು ಇಲ್ಲಿನ ವಿಶೇಷವಾಗಿದೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.