ಹೋರಾಟದ ಪಯಣ ಈ ಆರೋಹಣ

Team Udayavani, Aug 28, 2018, 12:08 PM IST

arohana.jpg

ಮಾನವ ಸಂಬಂಧ ಮತ್ತು ಬದುಕಿನ ಮೌಲ್ಯ ಕುರಿತು ಅನೇಕ ಚಿತ್ರಗಳು ಬಂದಿವೆ. ಆ ಸಾಲಿಗೆ “ಆರೋಹಣ’ ಚಿತ್ರವೂ ಒಂದು. ಇಲ್ಲಿ ಬದುಕಿನ ಹೆಜ್ಜೆ ಗುರುತನ್ನು ದಾಖಲಿಸುವ ಪ್ರಯತ್ನವಿದೆ. ಮನುಷ್ಯ ದಿನ ನಿತ್ಯವೂ ಬದುಕಿನ ಜೊತೆ ಯುದ್ಧ ಮಾಡುತ್ತಲೇ ಇರುತ್ತಾನೆ. ಅಂತಹ ಜೀವನದಲ್ಲಿ ಎದುರಾಗುವ ಯುದ್ಧದಲ್ಲಿ ಹೇಗೆ ಗೆದ್ದು ಹೊರಗೆ ಬರುತ್ತಾನೆ ಅನ್ನೋದೇ “ಆರೋಹಣ’ದ ಕಥೆ.

ಇದು ಸಂಪೂರ್ಣ ಹೊಸಬರೇ ಸೇರಿ ಮಾಡಿರುವ ಚಿತ್ರ. ಎಲ್ಲರಿಗೂ ಇದು ಮೊದಲ ಅನುಭವ. ಈ ಚಿತ್ರದ ಮೂಲಕ ಸುಶೀಲ್‌ ನಾಯಕರಾದರೆ, ಪ್ರೀತಿ ಯಶ್‌ ನಾಯಕಿ. ಶ್ರೀಧರ್‌ ಶೆಟ್ಟಿಗೂ ಇದು ಮೊದಲ ನಿರ್ದೇಶನದ ಚಿತ್ರ. ಛಾಯಾಗ್ರಾಹಕ ಶಿವಪುತ್ರ ಮತ್ತು ಸಂಗೀತ ನಿರ್ದೇಶಕ ಉತ್ತಮ್‌ರಾಜ್‌ ಅವರಿಗೂ ಮೊದಲ ಸಿನಿಮಾ. ಹಾಗಾಗಿ, ಎಲ್ಲರಿಗೂ ಸಿನಿಮಾ ಯುದ್ಧದಲ್ಲಿ ಗೆಲ್ಲುವ ಅತೀವ ನಂಬಿಕೆ.

ಅಂದಹಾಗೆ, “ಆರೋಹಣ’ ಆ.31 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪಕ್ಕಾ ಹಳ್ಳಿ ಸೊಗಡಿನ ಕಥೆ. ಅದರಲ್ಲೂ ಅಪ್ಪ ಮತ್ತು ಮಗನ ನಡುವಿನ ಚಿತ್ರಣ ಇಲ್ಲಿದೆ. ಸಾಕಷ್ಟು ಅಪ್ಪ, ಮಗನ ಕುರಿತ ಚಿತ್ರಗಳು ಬಂದಿವೆ. ಆದರೆ, ಇಲ್ಲಿರುವ ಅಪ್ಪ, ಮಗನ ಬಾಂಧವ್ಯ ಹೊಸದಾಗಿರಲಿದೆ ಎಂಬುದು ಚಿತ್ರತಂಡದ ಮಾತು. ಸೆಂಟಿಮೆಮಟ್‌, ಪ್ರೀತಿ, ಗೆಳೆತನ ಇದು “ಆರೋಹಣ’ದ ಹೈಲೆಟ್‌.

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಒಂದೊಂದು ಸಮಸ್ಯೆ ಎದುರಿಸುತ್ತಲೇ ಇರುತ್ತಾರೆ. ಅಂತಹವರಿಗೆ ಆ ಸಮಸ್ಯೆಯಿಂದ ಹೇಗೆ ಹೊರಬರಬೇಕು ಎಂಬ ಪರಿಹಾರ ಇಲ್ಲಿ ಸಿಗಲಿದೆ. ಕೇವಲ ಇದು ಪರಿಹಾರ ಸೂಚಿಸುವ ಚಿತ್ರವಲ್ಲ ಎನ್ನುವ ನಾಯಕ ಸುಶೀಲ್‌, ಇಲ್ಲೊಂದು ಸಂದೇಶವೂ ಇದೆ. ಅದು ಬದುಕಿಗೆ ಸಂಬಂಧಿಸಿದ್ದು. ಅದನ್ನು ಅರಿತರೆ, ಬದುಕಲ್ಲಿ ಒಂದಷ್ಟು ಸಮಸ್ಯೆಗಳನ್ನು ದೂರ ಇಡಲು ಸಾಧ್ಯವಾಗುತ್ತೆ ಎನ್ನುತ್ತಾರೆ.

ಚಿತ್ರಕ್ಕೆ ಕೆ.ಕಲ್ಯಾಣ್‌ ಮೂರು ಗೀತೆಗಳನ್ನು ರಚಿಸಿದ್ದಾರೆ. ಜಗ್ಗಿ ಮಾಸ್ಟರ್‌ ನೃತ್ಯ ಸಂಯೋಜಿಸಿದ್ದಾರೆ. ಇನ್ನು, ಎರಡು ಭರ್ಜರಿ ಫೈಟ್‌ಗಳೂ ಇಲ್ಲಿವೆ. ವಿಶೇಷವೆಂದರೆ, ರವಿಶಂಕರ್‌ಗೌಡ ಅವರು ಚಿತ್ರದ ಹಾಡಿಗೆ ಧ್ವನಿಯಾಗಿದ್ದಾರೆ. “ಆರೋಹಣ’ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಈ ಹಿಂದೆಯೇ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ, ಒಂದಷ್ಟು ಸಮಸ್ಯೆಗಳನ್ನು ಪರಿಹರಿಸಿಕೊಂಡು ಬರುವ ಹೊತ್ತಿಗೆ ಇಷ್ಟು ತಡವಾಗಿದೆ. ಬೆಂಗಳೂರು, ಸಕಲೇಶಪುರ, ರಾಮನಗರ ಮತ್ತು ಬಿಡದಿ ಸೇರಿದಂತೆ ಇತರೆಡೆ ಚಿತ್ರೀಕರಣವಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.