ಸುಳ್ಳು ಸುದ್ದಿ ತಡೆಯಲು ವಿಫ‌ಲರಾದರೆ ಕಠಿಣ ಕ್ರಮ


Team Udayavani, Aug 30, 2018, 10:01 AM IST

whatsapp.jpg

ಹೊಸದಿಲ್ಲಿ: “ದೇಶದ ಕಾನೂನುಗಳನ್ನು ಪಾಲಿಸಿ; ಇಲ್ಲವೇ ಕಠಿನ ಕ್ರಮ ಎದುರಿಸಿ. ಅದರಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ತಡೆಯಲು ವಿಫ‌ಲರಾದರೆ ಭಾರತದಲ್ಲಿರುವ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸಲಾಗುತ್ತದೆ.’-  ಇದು ವದಂತಿಗಳನ್ನು ನಂಬಿ ಗುಂಪು ಥಳಿತ ತಡೆಯಲು ಕೇಂದ್ರ ಸರಕಾರ ರಚಿಸಿದ ಅಧಿಕಾರಿಗಳ ಸಮಿತಿ ನೀಡಿರುವ ವರದಿಯ ಪ್ರಮುಖ ಅಂಶ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್‌ ಗೌಬಾ ನೇತೃತ್ವದ ಅಧಿಕಾರಿಗಳ ಸಮಿತಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ಗೆ ವರದಿ ಸಲ್ಲಿಸಿದೆ. 

ಇದರ ಜತೆಗೆ ಸಣ್ಣ ಮಕ್ಕಳನ್ನು ಅಶ್ಲೀಲ ಸಿನೆಮಾಗಳಿಗೆ ಬಳಕೆ ಮಾಡುವುದರ ವಿರುದ್ಧವೂ ಸಮಿತಿ ಕ್ರಮಗಳನ್ನು ಸೂಚಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ವಾಟ್ಸ್‌ಆ್ಯಪ್‌ ಮತ್ತಿತರ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿ ನಂಬಿ ಥಳಿತಕ್ಕೊಳಗಾಗಿ 40 ಮಂದಿ ಅಸುನೀಗಿದ್ದರು. 

ಆಕ್ಷೇಪಾರ್ಹ, ಸುಳ್ಳು ಸುದ್ದಿ ಹಾಗೂ  ವೀಡಿಯೋ ತೆಗೆದು ಹಾಕದಿದ್ದರೆ ಭಾರತದಲ್ಲಿರುವ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾ ಗುತ್ತದೆ. ಸಚಿವ ರಾಜನಾಥ್‌ ನೇತೃತ್ವದ ಸಚಿವರ ಸಮಿತಿ ಈ ಬಗ್ಗೆ ಚರ್ಚಿಸಿ ಶೀಘ್ರವೇ ಪ್ರಧಾನಿ ಮೋದಿಯವರಿಗೆ ಅಂತಿಮ ವರದಿ ಸಲ್ಲಿಸಲಿದೆ.

ತಾಣಗಳ ದುರ್ಬಳಕೆ ಮಾಡಬೇಡಿ: ಪಿಎಂ
“ಸುಳ್ಳು, ಕೊಳಕು ಸುದ್ದಿಗಳು ಹಾಗೂ ಕಣ್ಣಿಗೆ ಕಂಡಿದ್ದನ್ನೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲು ಹೋಗಬೇಡಿ. ಆ ಮೂಲಕ ಸಮಾಜಘಾತುಕ ಚಟುವಟಿಕೆಗಳಿಗೆ ಪ್ರೇರಣೆ ನೀಡಬೇಡಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಕಾರ್ಯಕರ್ತರು ಹಾಗೂ ಯುವಜನತೆಗೆ ಕರೆ ನೀಡಿದ್ದಾರೆ. ಹಾಗಂಥ ಯಾವುದೇ ಸಿದ್ಧಾಂತದ ವಿರುದ್ಧದ ಮಾತು ಇದಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಸ್ವ ಕ್ಷೇತ್ರ ವಾರಾಣಸಿಯಲ್ಲಿನ ಕಾರ್ಯಕರ್ತರು, ಸಂಚಾಲಕರ ಜತೆ ಮಾತುಕತೆ ನಡೆಸಿದ ಮೋದಿ, “ಯಾವುದೇ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಬೇಡಿ. ಈ ವಿಚಾರದಲ್ಲಿ ನಮ್ಮನ್ನು ನಾವೇ ತಿದ್ದುಕೊಳ್ಳಬೇಕು. ಒಂದಿಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ವೇದಿಕೆಯಾಗಿಸಿಕೊಳ್ಳಿ’ ಎಂದಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಕೆಲವೊಮ್ಮೆ ಜಾಲತಾಣಗಳಲ್ಲಿ ಹರಿಬಿಡುವ ಸುಳ್ಳು ಸುದ್ದಿಗಳಿಂದ ಸಮಾಜದ ಮೇಲೆ ಏನು ಪರಿಣಾಮ ಬೀರುತ್ತದೆನ್ನುವುದರ ಬಗ್ಗೆ ಅರಿವು ಇರುವುದಿಲ್ಲ. ಅದರಿಂದ  ನಷ್ಟ ಉಂಟಾಗಬಹುದು’ ಎಂದರು.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.