3 ತಾಲೂಕು ಬಯಲು ಬಹಿರ್ದೆಸೆ ಮುಕ್ತ

Team Udayavani, Aug 30, 2018, 5:08 PM IST

gul-1.jpg

ಕಲಬುರಗಿ: ಜಿಲ್ಲೆಯನ್ನು ಅ.2ರೊಳಗಾಗಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಹಮ್ಮಿಕೊಂಡಿರುವ ಗುರಿಗೆ ಅನುಗುಣವಾಗಿ ಈಗಾಗಲೇ ಚಿತ್ತಾಪುರ, ಅಫಜಲಪುರ ಹಾಗೂ ಕಲಬುರಗಿ ತಾಲೂಕುಗಳನ್ನು ಬಯಲು ಬಹಿರ್ದೆಸೆ
ಮುಕ್ತ ಎಂದು ಘೋಷಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲ್ಪಟ್ಟ ಚಿತ್ತಾಪುರ ತಾಲೂಕಿನ ಸ್ವತ್ಛ ಭಾರತ ಮಿಷನ್‌ ಅಧಿಕಾರಿಗಳೊಂದಿಗೆ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದ ಅವರು, 2012ರ ಬೇಸ್‌ ಲೈನ್‌ ಸಮೀಕ್ಷೆಯ
ಪ್ರಕಾರ ಚಿತ್ತಾಪುರ ತಾಲೂಕಿನಲ್ಲಿ 31,488 ಕುಟುಂಬಗಳು ಶೌಚಾಲಯ ಹೊಂದಿರುವುದಿಲ್ಲ. ಚಿತ್ತಾಪುರ ತಾಲೂಕಿನಲ್ಲಿ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ 31,490 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿಸಲಾಗಿದೆ ಎಂದರು.

ಅಫಜಲಪುರ ತಾಲೂಕಿನ 19,325 ಹಾಗೂ ಕಲಬುರಗಿ ತಾಲೂಕಿನ 35,635 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಈ ತಾಲೂಕುಗಳನ್ನು ಸಹ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. ಸೇಡಂ
ತಾಲೂಕಿನ 22,346 ಶೌಚಾಲಯ ನಿರ್ಮಿಸುವ ಗುರಿಯ ಪೈಕಿ ಈಗಾಗಲೇ 20,285 ಶೌಚಾಲಯ ನಿರ್ಮಿಸಲಾಗಿದ್ದು, 26 ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. 

ಈಗಾಗಲೇ 23 ಗ್ರಾಪಂಗಳಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಿಸುವ ಕಾರ್ಯ ಪೂರ್ಣಗೊಂಡಿದ್ದು, ಈ ಗ್ರಾಮಗಳನ್ನು ಸಹ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಬೇಕಾಗಿದೆ. ಸೇಡಂ ತಾಲೂಕಿನಾದ್ಯಂತ ಶೇ.91.22ರಷ್ಟು ಶೌಚಾಲಯ ನಿರ್ಮಿಸಲಾಗಿದೆ. ಇನ್ನುಳಿದ 1961 ಶೌಚಾಲಯಗಳನ್ನು ಆದಷ್ಟು ಬೇಗ ನಿರ್ಮಿಸುವ ಮೂಲಕ ಸೇಡಂ ತಾಲೂಕನ್ನು ಸಹ ಬಯಲು ಬಹಿರ್ದೆಸೆ ಮುಕ್ತಗೊಳಿಸಬೇಕೆಂದು ತಿಳಿಸಿದರು.

ಚಿಂಚೋಳಿ ತಾಲೂಕಿನಲ್ಲಿ 29,522 ಶೌಚಾಲಯಗಳನ್ನು ನಿರ್ಮಿಸುವ ಗುರಿಯಿದ್ದು, ಈಗಾಗಲೇ 25,729 ಶೌಚಾಲಯ ನಿರ್ಮಿಸಲಾಗಿದೆ. ತಾಲೂಕಿನಲ್ಲಿ 32 ಗ್ರಾಪಂಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. ಆರು ಗ್ರಾಮ ಪಂಚಾಯಿತಿಗಳಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲಾಗಿದೆ. 

ಜೇವರ್ಗಿ ತಾಲೂಕಿನಲ್ಲಿ 35,055 ಶೌಚಾಲಯಗಳನ್ನು ನಿರ್ಮಿಸುವ ಗುರಿ ಇದ್ದು, ಈ ಪೈಕಿ 29,318 ಶೌಚಾಲಯ ನಿರ್ಮಿಸಲಾಗಿದೆ. ತಾಲೂಕಿನಲ್ಲಿ 23 ಗ್ರಾಪಂಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ. 4 ಗ್ರಾಮ ಪಂಚಾಯಿತಿಗಳಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಾಣ ಪೂರ್ಣಗೊಂಡಿದೆ. ಆಳಂದ ತಾಲೂಕಿನಲ್ಲಿ 41,009 ಶೌಚಾಲಯ ನಿರ್ಮಿಸುವ ಗುರಿಯಿದ್ದು, 33,456 ಶೌಚಾಲಯ ನಿರ್ಮಿಸಲಾಗಿದೆ. ಆಳಂದ ತಾಲೂಕಿನ ಎಲ್ಲ ಅಧಿಕಾರಿಗಳು ಜನಪ್ರತಿನಿಧಿ ಗಳ ಸಹಕಾರದೊಂದಿಗೆ ತಾಲೂಕಿನಲ್ಲಿ ಉಳಿದ 7553 ಶೌಚಾಲಯಗಳನ್ನು ಸೆ.15ರೊಳಗಾಗಿ ನಿರ್ಮಿಸಲು ಪ್ರಯತ್ನಿಸಬೇಕು ಎಂದರು.

ಚಿತ್ತಾಪುರ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿಸಲು ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಿದ ಯಾಗಾಪುರ ಗ್ರಾಪಂ ಪಿಡಿಒ ಬಸವರಾಜ ಪೂಜಾರಿ ಹಾಗೂ ಇನ್ನಿತರ ಎಲ್ಲ ಅಧಿಕಾರಿಗಳಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸ್ವತ್ಛ ಭಾರತ ಮಿಷನ್‌ನ ಜಿಲ್ಲಾ ಸಂಯೋಜಕಿ ಗುರುಬಾಯಿ ಎಸ್‌. ಪಾಟೀಲ, ಪಿಡಿಒಗಳು ಹಾಗೂ ಡಾಟಾ ಎಂಟ್ರಿ ಆಪರೇಟರಗಳು ಇದ್ದರು 

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.