ಹ್ಯಾಟ್ರಿಕ್‌ ರಾಜು

Team Udayavani, Aug 31, 2018, 6:00 AM IST

30.jpg

ಕೆಲವು ಸಿನಿಮಾಗಳು ಹಿಟ್‌ ಆದರೆ ಅಥವಾ ಪಾತ್ರಗಳು ಕ್ಲಿಕ್‌ ಆದರೆ, ನಂತರ ಆ ಚಿತ್ರದಲ್ಲಿ ನಟಿಸಿದ ಕಲಾವಿದರ ಹೆಸರಿನ ಮುಂದೆ ಚಿತ್ರದ ಅಥವಾ ಪಾತ್ರದ ಹೆಸರು ಅಂಟಿಕೊಂಡ ಬಿಡುತ್ತದೆ. ಜನ ಅದೇ ಹೆಸರಿನಲ್ಲಿ ಗುರುತಿಸುತ್ತಾರೆ ಕೂಡಾ. ಸಿನಿಮಾ, ಪಾತ್ರದ ಹೆಸರಿನಿಂದ ಗುರುತಿಸಿಕೊಳ್ಳುವ ಅನೇಕ ನಟ-ನಟಿಯರು ಕನ್ನಡ ಚಿತ್ರರಂಗದಲ್ಲಿ ಸಿಗುತ್ತಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಗುರುನಂದನ್‌. “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರ ಹಿಟ್‌ ಆಗುತ್ತಿದ್ದಂತೆ ಗುರುನಂದನ್‌ ಆ ಪಾತ್ರದ ಹೆಸರಿಗೆ ಬ್ರಾಂಡ್‌ ಆಗಿಬಿಟ್ಟಂತಿದೆ. ಈಗಾಗಲೇ ಅವರು ನಾಯಕರಾಗಿರುವ “ರಾಜು ಕನ್ನಡ ಮೀಡಿಯಂ’ ಬಂದಿರುವ ವಿಚಾರ ನಿಮಗೆ ಗೊತ್ತಿದೆ. ಈಗ “ರಾಜು’ ಸೀರೀಸ್‌ಗೆ ಹೊಸ ಸೇರ್ಪಡೆ “ರಾಜು ಜೇಮ್ಸ್‌ ಬಾಂಡ್‌’. ಇದು ಗುರುನಂದನ್‌ ನಾಯಕರಾಗಿರುವ ಹೊಸ ಸಿನಿಮಾ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆಯಿತು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಕ್ಲಾéಪ್‌ ಮಾಡಿ ಶುಭಕೋರಿದರು. ಸಚಿವ ಜಿ.ಟಿ.ದೇವೇಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ  ಚಿನ್ನೇಗೌಡ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊಸ ತಂಡವನ್ನು ಹರಸಿದರು. 

“ರಾಜು ಜೇಮ್ಸ್‌ ಬಾಂಡ್‌’ ಚಿತ್ರವನ್ನು ದೀಪಕ್‌ ಮಧುವನಹಳ್ಳಿ ನಿರ್ದೇಶಿಸುತ್ತಿದ್ದಾರೆ. “ಭಾಗ್ಯರಾಜ್‌’, “ಕಳ್ಬೆಟ್ಟದ ದರೋಡೆಕೋರರು’ ಚಿತ್ರ ಮಾಡಿರುವ ದೀಪಕ್‌ಗೆ ಇದು ಮೂರನೇ ಸಿನಿಮಾ. “ರಾಜು ಜೇಮ್ಸ್‌ ಬಾಂಡ್‌’ ಒಂದು ಕಾಮಿಡಿ ಡ್ರಾಮಾ ಚಿತ್ರವಂತೆ. ಈ ಚಿತ್ರದಲ್ಲಿ ನಾಯಕ ರಾಜ್‌ಕುಮಾರ್‌ ಅವರ ಅಪ್ಪಟ ಅಭಿಮಾನಿ. “ಇದೊಂದು ಕಾಮಿಡಿ ಡ್ರಾಮಾ ಸಿನಿಮಾ. ಜೊತೆಗೆ ಥ್ರಿಲ್ಲರ್‌ ಅಂಶಗಳು ಕೂಡಾ ಇರಲಿವೆ. ಚಿತ್ರದ ನಾಯಕ ರಾಜಕುಮಾರ್‌ ಅವರ ಅಭಿಮಾನಿ. ಅವರ ಬಾಂಡ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆಯುವ ಜೊತೆಗೆ ಅದರಿಂದ ಸ್ಫೂರ್ತಿಗೊಳ್ಳುತ್ತಾನೆ. ಈ ನಡುವೆ ತನ್ನ ಸುತ್ತಲ ಸಮಸ್ಯೆಯನ್ನು ಬಾಂಡ್‌ ಶೈಲಿಯ ಜೊತೆಗೆ ರಾಜು ಶೈಲಿಯಲ್ಲಿ ಹೇಗೆ ಬಗೆಹರಿಸಿಕೊಳ್ಳುತ್ತಾನೆಂಬ ಅಂಶದೊಂದಿಗೆ ನಡೆಯುತ್ತದೆ’ ಎಂದು ವಿವರ ಕೊಟ್ಟರು ದೀಪಕ್‌. ಇದು ನೈಜ ಘಟನೆಯಾಧಾರಿತ ಚಿತ್ರ ಎಂಬ ಸುದ್ದಿಯೂ ಓಡಾಡುತ್ತಿತ್ತಂತೆ. ಈ ಬಗ್ಗೆ ಮಾತನಾಡುವ ದೀಪಕ್‌, ಇದು ಯಾವುದೋ ಬೇರೆ ರಾಜ್ಯದಲ್ಲಿ ನಡೆಯುವ ಅಥವಾ ನೈಜ ಘಟನೆಯಾಧರಿತ ಚಿತ್ರವಲ್ಲ. ಒಂದು ಸಣ್ಣ ಪಟ್ಟಣದಲ್ಲಿ ನಡೆಯುವ ಕಥೆ ಎಂದರು. 

ಚಿತ್ರವನ್ನು ಮಂಜುನಾಥ್‌ ವಿಶ್ವಕರ್ಮ ಹಾಗೂ ಕಿರಣ್‌ ವರ್ತೂರು ನಿರ್ಮಿಸುತ್ತಿದ್ದಾರೆ. ಕಿರಣ್‌ ಅವರಿಗೆ, ಗುರುನಂದನ್‌ ಫೋನ್‌ ಮಾಡಿ ಈ ತರಹ ಒಂದು ಕಥೆ ಇದೆ, ನೋಡಿ ಎಂದರಂತೆ. ತಕ್ಷಣ ಕಿರಣ್‌, ಸ್ನೇಹಿತ ಮಂಜುನಾಥ್‌ಗೆ ಹೇಳಿ ಜೊತೆಯಾಗಿ ಸಿನಿಮಾ ಮಾಡಲು ನಿರ್ಧರಿಸಿದರಂತೆ. 

ನಾಯಕ ಗುರುನಂದನ್‌ ಅವರಿಗೆ ತುಂಬಾ ಇಷ್ಟವಾದ ಕಥೆಯಂತೆ. “ನಾನಿಲ್ಲಿ ಅಣ್ಣಾವ್ರ ಚಿತ್ರ ನೋಡಿ ಬೆಳೆದುಕೊಂಡು ಬರುವ ಪಾತ್ರ. ಅವರ ಪಾತ್ರದ ಪ್ರೇರಣೆಯೊಂದಿಗೆ ಮುಂದೆ ಹಲವು ಸಾಹಸಗಳನ್ನು ಮಾಡುತ್ತೇನೆ. ಒಳ್ಳೆಯ ತಂಡ ಸಿಕ್ಕಿದೆ. ಸಂಡೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಲಿದೆ’ ಎಂದಷ್ಟೇ ಮಾತನಾಡಿದರು. ಚಿತ್ರದಲ್ಲಿ ಮೃದುಲಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಮನೋಹರ್‌ ಜೋಷಿ ಛಾಯಾಗ್ರಹಣ, ಅನೂಪ್‌ ಸೀಳೀನ್‌ ಸಂಗೀತವಿದೆ. ನಿರ್ಮಾಪಕರಿಗೆ ಒಳ್ಳೆಯ ಸಿನಿಮಾ ಮಾಡಿ ಕೊಡುತ್ತೇವೆ ಎಂದು ಭರವಸೆ ನೀಡಿದರು ಅನೂಪ್‌.

ರವಿ ರೈ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.