ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ


Team Udayavani, Aug 31, 2018, 7:00 AM IST

minister-dk-shivakumar-888.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದ್ದು ಯಾವುದೇ ಗೊಂದಲಗಳು ಅಥವಾ ಭಿನ್ನಾಭಿಪ್ರಾಯಗಳು ಯಾರಲ್ಲೂ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 100 ದಿನ ಸುರಕ್ಷಿತ ಹಾಗೂ ಯಾವುದೇ ಸಣ್ಣ ಅಹಿತಕರ ಘಟನೆ ಇಲ್ಲದಂತೆ ಆಡಳಿತ ನೀಡಿದ್ದೇವೆ. ಇದು ಮುಂದಿನ ಐದು ವರ್ಷಕ್ಕೆ ದಿಕ್ಸೂಚಿ ಎಂದು ಹೇಳಿದರು.

ಬಿಜೆಪಿಯವರು ಮೊದಲ ದಿನದಿಂದಲೇ ಸರ್ಕಾರದ ಬಗ್ಗೆ ಟೀಕೆಗಳು ಮಾಡುತ್ತಲೇ ಇದ್ದಾರೆ. ಸಾಲ ಮನ್ನಾ ಘೋಷಣೆ ಆದಾಗ ಸಾಧ್ಯವಾ ಎಂದು ಪ್ರಶ್ನಿಸಿದರು. ಆದರೆ, ಸರ್ಕಾರ ಹೇಳಿದಂತೆ ನಡೆದುಕೊಂಡಿದೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ಪೂರೈಸಿದ ಸಂದರ್ಭದಲ್ಲಿ  ಜೆಡಿಎಸ್‌ ಜಾಹೀರಾತು ನೀಡಿರುವ ಕುರಿತು ಪ್ರತಿಕ್ರಿಯಿಸಿ, ಅವರ ಪಕ್ಷದಿಂದ ಅವರು ಕೊಟ್ಟಿದ್ದಾರೆ. ನಮ್ಮ ಪಕ್ಷದಿಂದ ನಾವು ಕೊಟ್ಟಿದ್ದೇವೆ. ಇದರಲ್ಲಿ ವಿಶೇಷ ಏನೂ ಇಲ್ಲ. ಅದು ಸರ್ಕಾರದ ಜಾಹೀರಾತು ಅಲ್ಲ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್‌ ನೀಡಿರುವ ಜಾಹೀರಾತು ಎಂದು ಹೇಳಿದರು.

ಸಿದ್ದುರಿಂದ ಫೋನ್‌ ಬಂತು: ಪತ್ರಿಕಾಗೋಷ್ಠಿ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಿ.ಕೆ.ಶಿವಕುಮಾರ್‌ ಅವರಿಗೆ ವರುಣಾ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸದ ವಿಚಾರದಲ್ಲಿ ದೂರವಾಣಿ ಕರೆ ಬಂದಿತ್ತು. ಡಿ.ಕೆ.ಶಿವಕುಮಾರ್‌ ಮಾತನಾಡುವಾಗ, ಹೌದು ಒಂದು ಕಡೆಯೇ ಆಗಿದೆ ಎಂದು ಹೇಳಿದರು. ಇದಕ್ಕೆ ಮಾಧ್ಯಮದವರು, ಒಂದು ಕಡೆ ಎಂದರೆ ಜೆಡಿಎಸ್‌ ಜಾಹೀರಾತು ವಿಚಾರವೇ ಎಂದಾಗ, ಅಯ್ಯೋ ಅದಲ್ಲಾ, ಬಿಡ್ರಿ. ಸಿದ್ದರಾಮಯ್ಯ ಅವರು ಆ ಬಗ್ಗೆ ಮಾತನಾಡುವುದೇ ಇಲ್ಲ. ವಿಶ್ವವಿದ್ಯಾಲಯಗಳಿಗೆ ನಾಮನಿರ್ದೇಶನ ವಿಚಾರದಲ್ಲಿ ಮೈಸೂರು ಭಾಗಕ್ಕೆ ಮಾತ್ರ ಆಗುವುದು ಬೇಡ. ರಾಜ್ಯದ ಎಲ್ಲ ಭಾಗಗಳಿಗೂ ಅವಕಾಶ ಕೊಡಿ ಎಂದು ಹೇಳಿದ್ದು ಎಂಬ ಸಮಜಾಯಿಷಿ ನೀಡಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.