ಶಶಿಕಲಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Team Udayavani, Aug 31, 2018, 12:09 PM IST
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರಕಾರಾಗೃಹದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.
ಶಶಿಕಲಾ ಅವರು ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಜೈಲು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಶಿಕಲಾ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆರು ತಿಂಗಳ ಹಿಂದೆ ಕೂಡ ಶಶಿಕಲಾ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಚಿಕಿತ್ಸೆ ಪಡೆದು ಶಶಿಕಲಾ ಗುಣಮುಖರಾಗಿದ್ದರು. ಈ ಮಧ್ಯೆ ಇವರ ಪತಿ ನಟರಾಜನ್ ಇತ್ತೀಚೆಗಷ್ಟೇ ನಿಧನರಾಗಿದ್ದರು. ಇದರಿಂದ ಮಾನಸಿಕವಾಗಿ ಕುಗ್ಗಿದ್ದರು. ಇದೀಗ ಪುನಃ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್