ಪುನರ್ವಸತಿಗೆ ಆಗ್ರಹಿಸಿ ಸಂತ್ರಸ್ತರ ಅನಿರ್ದಿಷ್ಟ ಧರಣಿ

Team Udayavani, Aug 31, 2018, 2:59 PM IST

vij-2.jpg

ವಿಜಯಪುರ: ಸಿಂದಗಿ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ನೆರೆ ಸಂತ್ರಸ್ತರಾದ ಜನರು ಪುನರ್ವಸತಿ ಹಕ್ಕುಪತ್ರ ವಿತರಣೆಯಲ್ಲಿ ಅಕ್ರಮ ಸರಿಪಡಿಸಲು ಆಗ್ರಹಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

2009 ರಲ್ಲಿ ಅತಿವೃಷ್ಟಿಯಿಂದಾಗಿ ಸಿಂದಗಿ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಮುಳುಗಡೆ ಆಗಿತ್ತು. ಪರಿಣಾಮ ಇಡೀ
ಗ್ರಾಮವನ್ನೇ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಪುನರ್ವಸತಿ ಕೇಂದ್ರಲ್ಲಿ ನೈಜ ಅರ್ಹ ಸಂತ್ರಸ್ತ
ಫಲಾನುಭವಿಗಳಿಗೆ ನೀಡುವ ಹಕ್ಕುಪತ್ರಗಳನ್ನು ಅಕ್ರಮವಾಗಿ ಅನ್ಯರಿಗೆ ನೀಡಲಾಗಿದೆ. ಈ ಬಗ್ಗೆ ಹಲವು ಬಾರಿ ಅಗತ್ಯ
ದಾಖಲೆ ಸಮೇತ ದೂರು ನೀಡಿದರೂ ಆಡಳಿತಗಾರರು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಕಳೆದೊಂದು ದಶಕದಿಂದ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಎಲ್ಲರಿಗೂ ಮನವಿ ಮಾಡಿಕೊಂಡು ಬಂದು ತನಿಖೆ ನಡೆಸಿ, ಅಕ್ರಮ ಎಸಗಿದವ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ. ಸಂತ್ರಸ್ತರಿಗೆ ಪರಿಹಾರ ಸೌಲಭ್ಯಗಳನ್ನೂ ನೀಡಿಲ್ಲ. ಕೂಡಲೇ ಇಡೀ ಅಕ್ರಮ ಪ್ರಕರಣದಲ್ಲಿ ಬಾಗಿಯಾಗಿರುವ ಎಲ್ಲರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಕ್ರಮವಾಗಿ ಹಂಚಿರುವ ಹಕ್ಕುಪತ್ರ ರದ್ದುಪಡಿಸಿ ಅರ್ಹರಿಗೆ ಹಕ್ಕುಪತ್ರ ವಿತರಿಸಬೇಕು.

ಅಕ್ರಮವಾಗಿ ಪುನರ್ವಸತಿ ಕೇಂದ್ರದಲ್ಲಿ ವಾಸವಿರುವ ಜನರನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಪುನರ್ವಸತಿ ಕೇಂದ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲ ಅಕ್ರಮ ಕಟ್ಟಡಗಳನ್ನು
ತೆರವುಗೊಳಿಸಬೇಕು. ಸಂತ್ರಸ್ತರಿಗೆ ಹಕ್ಕುಪತ್ರ, ವಿವಿಧ ವಸತಿ ಯೋಜನೆಗಳಲ್ಲಿ ಮನೆ ನಿರ್ಮಿಸಿಕೊಡಬೇಕು. ಅಂಗನವಾಡಿ, ಪ್ರಾಥಮಿಕ ಶಾಲೆ, ಗ್ರಂಥಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಸಲೀಂ ಅಲ್ದಿ, ರೋಹನ ಐನಾಪುರ, ಶಬ್ಬೀರ ಪಟೇಲ ಬಿರಾದಾರ, ನಜೀರಅಹ್ಮದ ಪಡೇಕನೂರ, ಅಲ್ತಾಫ್‌ ಮರ್ತೂರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಪ್ರಸನ್ನ ಅವರಿಗೆ ಮನವಿ ಸಲ್ಲಿಸಿದರು.

ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಚನ್ನಮ್ಮ ಮಲ್ಲಪ್ಪ ನಾವಿ, ಕಮಾಲಮಾ ರಜಾಕಸಾಬ ಮುಲ್ಲಾ, ಕಬೀರ ಮುರ್ತುಜಸಾಬ ಮುಜಾವರ, ಚಾಂದಸಾಬ ಮದಾರಸಾಬ ಅಲ್ದಿ, ಅಶೋಕ ಮಹಾದೇವಪ್ಪ ವಾಲೀಕಾರ, ಮೌಲಾಸಾಹೇಬ ಸಾಹೇಬಲಾಲ ಆಗಲೂರ, ರಹಿಮಾನಸಾಬ ನಬಿಸಾಬ ಮುಲ್ಲಾ, ಜೈನಾಬಿ ಹುಸೇನಸಾಬ ಮುಲ್ಲಾ, ಹುಸೇನಬಿ ಲಾಲಸಾಬ ಅವಟಿ, ಜಮಾಲಮಾ ಸುಲ್ತಾನಮಾ ನದಾಫ್‌, ರಂಜಾನಬಿ ಸಾಹೇಬಲಾಲ ಆಲಗೂರ, ಜುಬೇದಾ ದಾವಲಸಾಬ ಅವಟಿ, ದವಲತಖಾನ ಗಿರಗಾಂವ, ಕುತುಬುದ್ದೀನ್‌ ಸೈಫನಸಾಬ ಮುಲ್ಲಾ, ದೌಲ ಸಾಬ ಜೈನಾಬಿ ಮುಲ್ಲಾ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.