ಅಭಿಷೇಕ್‌ ಜೊತೆ ನಿರೂಪ್‌ ಭಂಡಾರಿ

Team Udayavani, Sep 3, 2018, 11:23 AM IST

abishek.jpg

ಅನೂಪ್‌ ಭಂಡಾರಿ ನಿರ್ದೇಶನದ “ರಾಜರಥ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರೂಪ್‌ ಭಂಡಾರಿ, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಇನ್ನು ಮೂರ್‍ನಾಲ್ಕು ದಿನಗಳ ಚಿತ್ರೀಕರಣ ನಡೆದರೆ, ಆ ಚಿತ್ರ ಪೂರ್ಣಗೊಳ್ಳಲಿದೆ. ಈಗ ನಿರೂಪ್‌ ಭಂಡಾರಿ ಸದ್ದಿಲ್ಲದೆಯೇ ಮತ್ತೂಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದೊಂದು ಅತಿಥಿ ಪಾತ್ರ.

ಹೌದು, ಅಂಬರೀಷ್‌ ಪುತ್ರ ಅಭಿಷೇಕ್‌ ಅಭಿನಯದ ಚೊಚ್ಚಲ ಚಿತ್ರ “ಅಮರ್‌’ ಚಿತ್ರದಲ್ಲಿ ನಿರೂಪ್‌ ಭಂಡಾರಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ನಿರೂಪ್‌ ಭಂಡಾರಿ ಅವರೇ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ. “ಅಮರ್‌’ ಚಿತ್ರದಲ್ಲಿ ನಟಿಸುವ ಬಗ್ಗೆ ಹೇಳಿಕೊಳ್ಳುವ ನಿರೂಪ್‌ ಭಂಡಾರಿ, “ನಿರ್ದೇಶಕ ನಾಗಶೇಖರ್‌ ಅವರು ಒಮ್ಮೆ ಫೋನ್‌ ಮಾಡಿ, “ಅಮರ್‌’ ಚಿತ್ರದಲ್ಲೊಂದು ವಿಶೇಷ ಪಾತ್ರವಿದೆ.

ಮಾಡಿ ಅಂತ ಕೇಳಿದರು. ಅವರು ಕಥೆ ಹಾಗು ಪಾತ್ರದ ಬಗ್ಗೆ ವಿವರಿಸಿದರು. ತಕ್ಷಣವೇ ಒಪ್ಪಿಕೊಂಡೆ. ಆ ಚಿತ್ರದಲ್ಲಿ ನಾನು ಅತಿಥಿ ಕಲಾವಿದನಾಗಿ ನಟಿಸಲು ಮುಖ್ಯವಾಗಿ ಎರಡು ಕಾರಣ. ಅದೊಂದು ಒಳ್ಳೆಯ ಪಾತ್ರ ಅನ್ನುವುದು ಮತ್ತು ಅಂಬರೀಷ್‌, ಸುಮಲತಾ ಅವರ ಪುತ್ರ ಅಭಿಷೇಕ್‌ ಅವರ ಮೊದಲ ಚಿತ್ರ ಎಂಬುದು. ಆ ಕಾರಣಕ್ಕೆ ನಾನು “ಅಮರ್‌’ ಚಿತ್ರದಲ್ಲಿ ನಟಿಸಲು ಒಪ್ಪಿದ್ದೇನೆ.

ಕಥೆಗೊಂದು ಮುಖ್ಯವಾದ ತಿರುವು ಕೊಡುವಂತಹ ಪಾತ್ರ ನನ್ನದು. ನಾನು ಇದುವರೆಗೂ ಅಭಿಷೇಕ್‌ ಅವರನ್ನು ಭೇಟಿ ಮಾಡಿಲ್ಲ. ಆದರೆ, ಅವರ ವೀಡಿಯೋ ನೋಡಿದ್ದೇನೆ. ಅವರ ಮಾತುಗಳನ್ನು ಕೇಳಿದ್ದೇನೆ. ಎಲ್ಲೋ ಒಂದು ಕಡೆ ಅವರನ್ನು ನೋಡುವಾಗ, ಅಂಬರೀಷ್‌ ಸರ್‌ ನೆನಪಾಗುತ್ತಾರೆ. ಅವರ ವಾಯ್ಸ ಕೂಡ ಸಖತ್‌ ಆಗಿದೆ. “ಅಮರ್‌’ ಬಗ್ಗೆ ಎಲ್ಲೆಡೆ ನಿರೀಕ್ಷೆ ಇದೆ. ನನಗೂ ದೊಡ್ಡ ನಿರೀಕ್ಷೆ ಇದೆ. ಅಂತಹ ಚಿತ್ರದಲ್ಲಿ ನಾನು ನಟಿಸುತ್ತಿದ್ದೇನೆ ಎಂಬುದೇ ಹೆಮ್ಮೆ’ ಎಂಬುದು ನಿರೂಪ್‌ ಭಂಡಾರಿ ಮಾತು.

ಅಂದಹಾಗೆ, ಮೈಸೂರಿನಲ್ಲಿ ಸೆಪ್ಟೆಂಬರ್‌ 4 ರಿಂದ ನಿರೂಪ್‌ ಭಂಡಾರಿ ಅವರ ಭಾಗದ ಚಿತ್ರೀಕರಣ ಶುರುವಾಗಲಿದೆ. ಸುಮಾರು ಐದು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಸದ್ಯಕ್ಕೆ ನಿರೂಪ್‌ ಭಂಡಾರಿ ಅವರು ಒಂದಷ್ಟು ಕಥೆಗಳನ್ನು ಕೇಳುತ್ತಿದ್ದಾರೆ. ಆದರೆ, ಯಾವ ಕಥೆಯನ್ನೂ ಒಪ್ಪಿಕೊಂಡಿಲ್ಲ. ಹೊಸತನದ ಕಥೆ, ಪಾತ್ರಕ್ಕಾಗಿ ಎದುರು ನೋಡುತ್ತಿದ್ದಾರೆ. ಇನ್ನು, ಅವರ ಸಹೋದರ ಅನೂಪ್‌ ಭಂಡಾರಿ ಸ್ಕ್ರಿಪ್ಟ್ ಮಾಡುತ್ತಿದ್ದು, ಅವರೊಂದಿಗೆ ಇನ್ನೊಂದು ಸಿನಿಮಾ ಮಾಡುವ ಯೋಚನೆಯೂ ಅವರಿಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.