ವೇತನಕ್ಕೆ ಆಗ್ರಹಿಸಿ 23 ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ 

Team Udayavani, Sep 5, 2018, 12:01 PM IST

5-september-9.jpg

ಬೆಳ್ತಂಗಡಿ: ತಮ್ಮ ಮೇಲಧಿಕಾರಿಗಳು ಮಾಡಿದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ (ಆರ್‌ಎಂಎಸ್‌ಎ)ದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 23 ಮಂದಿ ಶಿಕ್ಷಕರು ಕಳೆದ 7 ತಿಂಗಳಿನಿಂದ ವೇತನವಿಲ್ಲದೆ ಪರದಾಡುತ್ತಿದ್ದು, ಹೀಗಾಗಿ ವೇತನಕ್ಕೆ ಆಗ್ರಹಿಸಿ ಮಂಗಳವಾರದಿಂದ ಶಿಕ್ಷಕರು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ತಾ|ನ 5 ಶಾಲೆಗಳಲ್ಲಿ ಒಟ್ಟು 23 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ವಾರ್ಷಿಕವಾಗಿ ಅವರ ವೇತನಕ್ಕಾಗಿ ಒಟ್ಟು 77.37 ಲಕ್ಷ ರೂ. ಬಿಡುಗಡೆಯಾಗಬೇಕಿತ್ತು. ಆದರೆ ಆರ್‌ಎಂಎಸ್‌ಎ ಕೇಂದ್ರ ಕಚೇರಿಯಿಂದ 2 ಕಂತುಗಳಲ್ಲಿ ನೀಡಿದ 47 ಲಕ್ಷ ರೂ. ಮೊತ್ತ ಬಂಟ್ವಾಳ ತಾ.ಪಂ.ಗೆ ಹೋಗಿದ್ದು, ಅಲ್ಲಿ ಆರ್‌ ಎಂಎಸ್‌ಎ ಶಿಕ್ಷಕರೇ ಇಲ್ಲ. ತಮ್ಮ ಸಮಸ್ಯೆ ಬಗೆಹರಿಸುವಂತೆ ಶಿಕ್ಷಕರು ಸಚಿವರು, ಶಾಸಕರು, ವಿ.ಪ. ಸದಸ್ಯರು, ಜಿಲ್ಲಾಧಿಕಾರಿಯಲ್ಲಿ ವಿನಂತಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಪ್ರತಿಭಟನ ಸ್ಥಳಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಭೇಟಿ ನೀಡಿ, ಶಿಕ್ಷಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಜತೆಗೆ ಡಿಡಿಪಿಐ ವೈ. ಶಿವರಾಮಯ್ಯ ಅವರೂ ಸ್ಥಳಕ್ಕೆ ಆಗಮಿಸಿ ಶಿಕ್ಷಕರ ಜತೆ ಮಾತುಕತೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ. 

ಕಚೇರಿಯಲಿರಲಿಲ್ಲ 
ಶಿಕ್ಷಕರ ಪ್ರತಿಭಟನೆಯ ವಿಚಾರ ತಿಳಿದು ಡಿಡಿಪಿಐ ಅವರು ಸ್ವತಃ ಮಂಗಳೂರಿನಿಂದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಆದರೆ ಆಗ ಕಚೇರಿಯಲ್ಲಿರಬೇಕಾದ ಬಿಇಒ ಅಲ್ಲಿರಲಿಲ್ಲ. ಸಭೆಯಲ್ಲಿ ಭಾಗವಹಿಸುವುದಕ್ಕೆ ತೆರಳಿದ್ದರು ಎಂದು ಕಚೇರಿಯ ಸಿಬಂದಿ ತಿಳಿಸಿದರು.

ಪ್ರಯತ್ನದಲ್ಲಿದ್ದೇನೆ
ತಾನು ಬೆಂಗಳೂರಿನಲ್ಲಿದ್ದು, ಇದೇ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಪ್ರಿನ್ಸಿಪಲ್‌ ಸೆಕ್ರೆಟರಿ ಜತೆ ಮಾತುಕತೆ ನಡೆಸಿದ್ದು, ಹಣಕಾಸು ವಿಭಾಗದೊಂದಿಗೆ ಮಾತನಾಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸೆ. 5ರೊಳಗೆ ಅವರ ವೇತನ ಸಿಗುವಂತೆ ಮಾಡುವ ಪ್ರಯತ್ನದಲ್ಲಿದ್ದು, ಅದು ಈಡೇರುವ ಭರವಸೆ ಇದೆ.  
– ಹರೀಶ್‌ ಪೂಂಜ
ಶಾಸಕರು, ಬೆಳ್ತಂಗಡಿ

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.