ದಿಲ್ಲಿ ವಿವಿ ಚುನಾವಣೆ: ಎಬಿವಿಪಿಗೆ ಜಯ
Team Udayavani, Sep 15, 2018, 2:05 AM IST
ಹೊಸದಿಲ್ಲಿ: ದಿಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಯಭೇರಿ ಬಾರಿಸಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ 3ರಲ್ಲಿ ಜಯಗಳಿಸಿದರೆ. ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಎನ್ಎಸ್ಯುಐ ಕೇವಲ ಒಂದು ಸ್ಥಾನ ಗಳಿಸಿದೆ. ಎನ್ಎಸ್ಯುಐ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೇ ಕಾರಣ ಎಂದು ಕಾಂಗ್ರೆಸ್ ದೂರಿದೆ.