ಕೈ ಕತ್ತರಿಸಲು ಲೇಡಿ ಕಾನ್‌ಸ್ಟೆಬಲ್‌ ಸುಪಾರಿ


Team Udayavani, Sep 16, 2018, 12:03 PM IST

kai-katt.jpg

ಬೆಂಗಳೂರು: ಇತ್ತೀಚೆಗೆ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಯುವಕನೊಬ್ಬನ ಕೈ ಕತ್ತರಿಸಿದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಈ ಕೃತ್ಯಕ್ಕೆ ನಗರದ ಸಂಚಾರ ಠಾಣೆಯ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರು ಸುಪಾರಿ ಕೊಟ್ಟಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ರವೀಶ್‌ ಎಂಬಾತನ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ನಿವಾಸಿ ಶರವಣ ಕುಮಾರ್‌ ಅಲಿಯಾಸ್‌ ಮೆಂಟಲ್‌ ವಿಜಿ, ಈತನ ಸಂಬಂಧಿ ಕುಮಾರ್‌ ಹಾಗೂ ಕುಮಾರ್‌ನ ಪುತ್ರ ಆನಂದ್‌ನನ್ನು ಬಂಧಿಸಲಾಗಿತ್ತು. ಇದೇ ವೇಳೆ ಕೈ ಕತ್ತರಿಸಲು ಸುಪಾರಿ ಕೊಟ್ಟಿದ್ದ ವಿ.ವಿ.ಪುರ ಸಂಚಾರ ಠಾಣೆ ಮಹಿಳಾ ಕಾನ್‌ಸ್ಟೆಬಲ್‌ ಜಯಲಕ್ಷ್ಮಿ ಎಂಬಾಕೆಯನ್ನು ಸೆ.14ರಂದು ಪೊಲೀಸರು ಬಂಧಿಸಿದ್ದರು.

ಈ ಮಧ್ಯೆ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆದೊಯ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಶರವಣ ಕುಮಾರ್‌ನ ಎಡಗಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮೂವರು ಆರೋಪಿಗಳನ್ನೂ ಮಹಜರು ಮಾಡಲು ಕೃತ್ಯ ನಡೆದ ಬನ್ನೇರುಘಟ್ಟ ಅರಣ್ಯಪ್ರದೇಶದ ಕಗ್ಗಲೀಪುರ ಸಮೀಪದ ಕಾಡಿಗೆ ಕರೆದೊಯ್ಯಲಾಗಿತ್ತು. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರವನ್ನು ತೋರಿಸುವಂತೆ ತಿಳಿಸಿದಾಗ, ಆರೋಪಿ ಶರವಣ ಕುಮಾರ್‌ ತನ್ನ ಪಕ್ಕದಲ್ಲಿದ್ದ ಬನ್ನೇರುಘಟ್ಟ ಠಾಣೆ ಪೇದೆ ಸಿದ್ದಲಿಂಗಸ್ವಾಮಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ವನ್ನು ಹಿಡಿದೆಳೆದು ಕತ್ತು ಹಿಸುಕಿ,

ಪರಾರಿಯಾಗಲು ಯತ್ನಿಸಿದ್ದ. ಆ ವೇಳೆ ಸಬ್‌ ಇನ್‌ಸ್ಪೆಕ್ಟರ್‌ ಮಾಲತೇಶ್‌ ಕುತ್ತಿಗೆಯಿಂದ ಕೈ ತೆಗೆಯುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ  ಪಿಎಸ್‌ಐ ಮಾಲತೇಶ್‌ ತಮ್ಮ ಪಿಸ್ತೂಲ್‌ನಿಂದ ಶರವಣಕುಮಾರ್‌ ಎಡಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಪ್ರಕರಣ?: ವಿ.ವಿ.ಪುರ ಸಂಚಾರ ಠಾಣೆ ಮಹಿಳಾ ಕಾನ್‌ಸ್ಟೆಬರ್‌ ಜಯಲಕ್ಷ್ಮಿ ಹಾಗೂ ಹಲ್ಲೆಗೊಳಗಾದ ರವೀಶ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅನ್ಯ ಜಾತಿ ಎಂಬ ಕಾರಣಕ್ಕೆ ರವೀಶ್‌ ಜಯಲಕ್ಷ್ಮಿಯನ್ನು ಮದುವೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಯಲಕ್ಷ್ಮಿಗೆ ಮನೆಯವರು ಬೇರೆ ವಿವಾಹ ಮಾಡಿದ್ದರು. ಆದರೆ, ರವೀಶ್‌ ಜಯಲಕ್ಷ್ಮಿ ಪತಿಗೆ ತಮ್ಮಿಬ್ಬರ ಸಂಬಂಧದ ಬಗ್ಗೆ ಹೇಳಿದ್ದ.

ಇದರಿಂದ ಬೇಸರಗೊಂಡ ಮಹಿಳಾ ಕಾನ್‌ಸ್ಟೆಬಲ್‌ ಪತಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ. ಆದರೂ ರವೀಶ್‌ ಪ್ರತಿ ಹಂತದಲ್ಲೂ ಜಯಲಕ್ಷ್ಮಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ. ಮದುವೆಗೂ ಒಪ್ಪುವುದಿಲ್ಲ ಇತ್ತ ಬೇರೆಯವರ ಜತೆ ಜೀವನ ನಡೆಸಲು ಬಿಡುತ್ತಿಲ್ಲ ಎಂದು ಕೋಪಗೊಂಡ ಜಯಲಕ್ಷ್ಮಿ, ಕಲಾಸಿಪಾಳ್ಯದಲ್ಲಿ ಕೂಲಿ ಕೆಲಸ ಮಾಡುವ ಕುಮಾರ್‌, ಶರವಣನಿಗೆ ರವೀಶ್‌ ಮೇಲೆ ಹಲ್ಲೆ ನಡೆಸಲು 1 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.

ಕಲಾಸಿಪಾಳ್ಯದಲ್ಲಿ ಪರಿಚಯ: ಕಲಾಸಿಪಾಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮೂವರು ಆರೋಪಿಗಳ ವಿರುದ್ಧ ಹಲ್ಲೆ ಆರೋಪಗಳಿವೆ. ಆದರೆ, ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಇದೇ ವೇಳೆ ಕಾನ್‌ಸ್ಟೆಬಲ್‌ ಜಯಲಕ್ಷ್ಮಿ ಆರೋಪಿಗಳನ್ನು ಪರಿಚಯಿಸಿಕೊಂಡಿದ್ದರು. ಈ ವೇಳೆ ತನಗೆ ನಿತ್ಯ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ರವೀಶ್‌ ಮೇಲೆ ದಾಳಿ ನಡೆಸಲು ಸುಪಾರಿ ಕೊಟ್ಟಿದ್ದರು. ಅದರಂತೆ ಆರೋಪಿಗಳು ನಾಲ್ಕೈದು ಬಾರಿ ರವೀಶ್‌ ಮೇಲೆ ದಾಳಿ ನಡೆಸಲು ವಿಫ‌ಲ ಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಯಲಕ್ಷ್ಮಿಯೇ ಸ್ಥಳ ನಿಗದಿ ಮಾಡಿ ಮಾಜಿ ಪ್ರಿಯಕರನ್ನು ಕರೆದೊಯ್ದು ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಭೇಟಿಯಾಗುತ್ತಿದ್ದ ಜಾಗದಲ್ಲೇ ಕೈ ಕಟ್‌: ಕಾನ್‌ಸ್ಟೆಬಲ್‌ ಜಯಲಕ್ಷ್ಮಿ ಹಾಗೂ ರವೀಶ್‌ ಈ ಮೊದಲು ಪ್ರೀತಿಸುತ್ತಿದ್ದಾಗ ಬನ್ನೇರುಘಟ್ಟದ ಚಂಪಕಧಾಮ ದೇವಾಲಯದ ನಿರ್ಜನ ಪ್ರದೇಶದಲ್ಲಿ ಭೇಟಿಯಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೆ.11ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ರವೀಶ್‌ಗೆ ಕರೆ ಮಾಡಿ ಇದೇ ಸ್ಥಳಕ್ಕೆ  ಕರೆಸಿಕೊಂಡಿದ್ದಾರೆ.

ಬಳಿಕ ಸಂಜೆ 5 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದ ಮೂವರು ಆರೋಪಿಗಳು ದರೋಡೆ ನೆಪದಲ್ಲಿ ರವೀಶ್‌ನ ಕೈ ಕತ್ತರಿಸಿಕೊಂಡು ಕೈ ಸಮೇತ ಪರಾರಿಯಾಗಿದ್ದರು. ಮತ್ತೂಂದೆಡೆ ತನ್ನ ಮೇಲೆ ಅನುಮಾನ ಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಿದ್ದ ಕಾನ್‌ಸ್ಟೆಬಲ್‌ ಜಯಲಕ್ಷ್ಮಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದರು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬನ್ನೇರುಘಟ್ಟ ಪೊಲೀಸರು ಅನುಮಾನದ ಮೇರೆಗೆ ಜಯಲಕ್ಷ್ಮಿಯನ್ನು ವಿಚಾರಣೆ ನಡೆಸಿದಾಗ ಆಕೆ ಗೊಂದಲದ ಹೇಳಿಕೆ ನೀಡಿದ್ದರು. ಆ ವೇಳೆ ಈಕೆಯೇ ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಈಕೆಯನ್ನು ತೀವ್ರ ವಿಚಾರಣೆ ನಡೆಸಿದಾಗ ಕೃತ್ಯದ ಹಿಂದಿನ ಅಸಲಿ ಬೆಳಕಿಗೆ ಬಂದಿದೆ.  ಈಕೆ ನೀಡಿದ ಮಾಹಿತಿ ಮೇರೆಗೆ ಸೆ.14ರಂದು ಕಲಾಸಿಪಾಳ್ಯದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.