ಗ್ರಾಮೀಣ ಭಾಗದ ಸಮಸ್ಯೆಗಳತ್ತ  ಗಮನಹರಿಸಿ: ರಾಯ್ಕರ

Team Udayavani, Sep 16, 2018, 4:22 PM IST

16-sepctember-22.jpg

ಹಾವೇರಿ: ಇಂಜಿನಿಯರ್‌ಗಳು ಗ್ರಾಮೀಣ ಭಾಗದ ಸಮಸ್ಯೆಗಳತ್ತ ಗಮನಹರಿಸಬೇಕು. ಅಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ನಿವೃತ್ತ ಕಾರ್ಯಪಾಲಕ ಇಂಜಿನೀಯರ್‌ ವಿ.ಜೆ. ರಾಯ್ಕರ ಹೇಳಿದರು. ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಭಾರತ ರತ್ನ ಸರ್‌. ಎಂ. ವಿಶ್ವೇಶ್ವರಯ್ಯನವರ ಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಇಂಜಿನಿಯರ್ ದಿನಾಚರಣೆ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಇಂಜಿನಿಯರ್‌ಗಳ ಪಾತ್ರ ಮುಖ್ಯವಾಗಿದ್ದು, ಈ ಕ್ಷೇತ್ರದಲ್ಲಿರುವವರು ಅರ್ಪಣಾ ಭಾವದ ಸೇವೆ ಸಲ್ಲಿಸುವ ಮೂಲಕ ಹೊಸ ದೇಶ ಕಟ್ಟುವುದಕ್ಕೆ ತಮ್ಮ ಕಾಣಿಕೆ ನೀಡಬೇಕು ಎಂದರು. ವಿಶ್ವೇಶ್ವರಯ್ಯನವರು ತತ್ವಬದ್ಧರಾಗಿ ಹಾಗೂ ನೈತಿಕ ತಳಹದಿಯ ಮೇಲೆ ಕರ್ತವ್ಯ ನಿರ್ವಹಿಸಿದರು. ಕೆಆರ್‌ಎಸ್‌ ಡ್ಯಾಂ ನಿರ್ಮಾತೃ ಆಗಿ ಮೈಸೂರು ಭಾಗವನ್ನೇ ಹಸಿರು ಪ್ರದೇಶವನ್ನಾಗಿ ಪರಿವರ್ತಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿದರು. ತುಂಗಭದ್ರಾ ಡ್ಯಾಂ ನಿರ್ಮಿಸುವ ಮೂಲಕ ನೀರಾವರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದರು. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ ಅವರ ಮೌಲ್ಯಯುತ ಸೇವೆ ಇಂದಿಗೂ ಉಪಯೋಗವಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕಾರ್ಯನಿರ್ವಾಹಕ ಇಂಜಿನಿಯರ್‌ ಜಗದೀಶ ಜೋಶಿ ಮಾತನಾಡಿ, ಕರ್ತವ್ಯ ನಿಷ್ಠೆ ಹಾಗೂ ಆತ್ಮಗೌರವಕ್ಕೆ ಧಕ್ಕೆ ಬಂದಾಗ, ಪ್ರತಿಭಟನೆ ಮಾಡಿದ್ದು ವಿಶ್ವೇಶ್ವರಯ್ಯ ಜೀವನದ ವಿಶೇಷತೆಗಳು. ಈ ಎರಡೂ ಗುಣಗಳನ್ನು ಇಂದಿನ ಇಂಜಿನಿಯರ್‌ಗಳು ಅಳವಡಿಸಿಕೊಳ್ಳಬೇಕು ಎಂದರು. ನಿವೃತ್ತ ಇಂಜಿನಿಯರ್‌ ಎ.ಆರ್‌. ಕುಲಕರ್ಣಿ ಮಾತನಾಡಿ, ಕಾನೂನುಬದ್ಧ ಹಾಗೂ ಪಾರದರ್ಶಕವಾಗಿ ಕೆಲಸ ಮಾಡಿದರೆ ಯಾರೊಬ್ಬರಿಗೂ ಅಂಜುವ ಅಗತ್ಯವಿಲ್ಲ ಎಂದರು.

ಇನ್ನೋರ್ವ ನಿವೃತ್ತ ಇಂಜಿನಿಯರ್‌ ವಿಶ್ವಬ್ರಾಹ್ಮಣ ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಗಳು ನಡೆಯುತ್ತಿವೆ. ಈ ಬಗ್ಗೆ ಅರಿವು ಮೂಡಿಸಿಕೊಳ್ಳಲು ಕಾರ್ಯಾಗಾರಗಳು ನಡೆಯಬೇಕು ಎಂದು ಆಶಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಂಚಾಯತರಾಜ್‌ ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಕೆ.ವಿ. ಹಂಚಿನಮನಿ, ಇಂಜಿನಿಯರ್‌ಗಳು ಕೆಲಸ ನಿರ್ವಹಣೆಯಲ್ಲಿ ತಾಳ್ಮೆ ಕಳೆದುಕೊಳ್ಳಬಾರದು. ಜನರ ಸಮಸ್ಯೆಗೆ ಸ್ಪಂದಿಸಿ ಅವರ ಜೀವನದಲ್ಲಿ ಬದಲಾವಣೆ ತರಲು ಯತ್ನಿಸಬೇಕು ಎಂದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್‌ ಭಾವನ್‌ಮೂರ್ತಿ ಹಾಗೂ ಶಾಂತಣ್ಣ ಹಳ್ಳಿಕೇರಿ ಮಾತನಾಡಿದರು. ಇಂಜಿನಿಯರ್‌ ಬಾಳಪ್ಪಗೌಡ ಸ್ವಾಗತಿಸಿದರು. ಕಾರ್ಯಪಾಲಕ ಅಭಿಯಂತರ ವಿನಾಯಕ ಹುಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ವಿ. ಮಠ ವಂದಿಸಿದರು.

ಮೂರ್ತಿ ಅನಾವರಣ
ಕಾರ್ಯಾಲಯದ ಆವರಣದಲ್ಲಿ ಸರ್‌. ಎಂ. ವಿಶ್ವೇಶ್ವರಯ್ಯನವರ ಕಂಚಿನಮೂರ್ತಿಯನ್ನು ಅನಾವರಣಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಎ.ಆರ್‌. ಮುದ್ರಿ ಹಾಗೂ ಗುತ್ತಿಗೆದಾರ ಮಾರುತಿ ಮುಂತಾದವರನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.