ಶಿರ್ವ ಪಾಂಬೂರು: ಮತ್ತೂಂದು ಚಿರತೆ ಬೋನಿಗೆ

Team Udayavani, Sep 21, 2018, 1:35 AM IST

cheetha-20-9.jpg

ಶಿರ್ವ: ಪಡುಬೆಳ್ಳೆ, ಸಡಂಬೈಲು, ಪಾಂಬೂರು,ಬಂಟಕಲ್ಲು ಪರಿಸರದಲ್ಲಿ ಆಗಾಗ ಪ್ರತ್ಯಕ್ಷಗೊಂಡು ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದ ಮತ್ತೂಂದು ಚಿರತೆ ಪಾಂಬೂರಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಗುರುವಾರ ನಸುಕಿನ ವೇಳೆ ಬಿದ್ದಿದೆ. ಕಳೆದ ತಿಂಗಳು ಇದೇ ಪರಿಸರದಲ್ಲಿ ಸುಮಾರು 8 ವರ್ಷದ ಗಂಡು ಚಿರತೆಯನ್ನು ಸೆರೆಹಿಡಿಯಲಾಗಿತ್ತು.

ಪಾಂಬೂರು ಪರಿಸರದಲ್ಲಿ ಚಿರತೆ ಅಡ್ಡಾಡುವ ದೂರು ಬಂದ ಹಿನ್ನೆಲೆಯಲ್ಲಿ ಪಡುಬೆಳ್ಳೆ ಪಾಂಬೂರು ಹಿ.ಪ್ರಾ. ಶಾಲೆಯ ಬಳಿಯ ಮೊನಿಕಾ ಮತಾಯಸ್‌ ಅವರ ಮನೆಯ ಸಮೀಪ ಅರಣ್ಯ ಇಲಾಖೆ ಸಿಬಂದಿ ಬುಧವಾರ ರಾತ್ರಿ ಬೋನು ಇರಿಸಿದ್ದರು. ಗುರುವಾರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ಸುಮಾರು 4 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
ಕಳೆದ ಕೆಲವು ಸಮಯದಿಂದ ಪಾಂಬೂರು ಪರಿಸರದಲ್ಲಿ ನಾಟಿಕೋಳಿ, ಸಾಕು ನಾಯಿಗಳು ಕೊಂದು ತಿನ್ನುತ್ತಿರುವ ಚಿರತೆ ಕಾಟದಿಂದ ಜನತೆ ಭಯಭೀತರಾಗಿದ್ದರು.ಒಂದು ಚಿರತೆ ಸೆರೆ ಹಿಡಿದರೂ ಮತ್ತೂಂದು ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿ ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿಗೆ ಬಿದ್ದರೂ ಇನ್ನು ಕೂಡಾ ಚಿರತೆ ಮರಿಗಳು ಪರಿಸರದಲ್ಲೇ ಓಡಾಡಿಕೊಂಡಿವೆ ಎಂದು ಸ್ಥಳೀಯ ನಾಗರಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಆ. 9 ರ ಉದಯವಾಣಿ ವರದಿ
ಪಾಂಬೂರು ಪರಿಸರದಲ್ಲಿ ಆ. 7 ರಂದು ದೊಡ್ಡ ಗಾತ್ರದ ಚಿರತೆ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದ್ದರೂ ಮರುದಿನ ಆದೇ ಪರಿಸರದಲ್ಲಿ ಇನ್ನೊಂದು ಚಿರತೆ ಸಂಚರಿಸಿರುವುದು ಕಂಡು ಬಂದಿತ್ತು. ಗಂಡು ಚಿರತೆ ಬಿದ್ದರೂ ಹೆಣ್ಣು ಚಿರತೆ ಮತ್ತು ಮರಿಗಳು ಇಲ್ಲೇ ಇವೆ ಎಂದು ಬೆಳ್ಳೆ ಗ್ರಾ.ಪಂ. ಉಪಾಧ್ಯಕ್ಷ ಹರೀಶ್‌ ಶೆಟ್ಟಿ ಪತ್ರಿಕೆಗೆ ಮಾಹಿತಿ ನೀಡಿದ್ದರು. ಚಿರತೆ ಹಾವಳಿಯಿಂದ ಸ್ಥಳೀಯ ಜನರು ಭಯಭೀತರಾಗಿರುವ ಬಗ್ಗೆ ಆ.9 ರಂದು ಉದಯವಾಣಿ ವರದಿ ಪ್ರಕಟಿಸಿತ್ತು.

ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್‌ ಲೋಬೋ, ಉಪ ವಲಯ ಅರಣ್ಯಾಧಿಕಾರಿ ದಯಾನಂದ ಕೆ. ಅವರ ಮಾರ್ಗದರ್ಶನದಂತೆ ಬೆಳ್ಳೆ ಗಸ್ತಿನ ಅರಣ್ಯ ರಕ್ಷಕ ಗಣಪತಿ ನಾಯಕ್‌ಮತ್ತು ಶಿರ್ವ ಗಸ್ತಿನ ಅರಣ್ಯ ರಕ್ಷಕ ಜಯರಾಮ ಶೆಟ್ಟಿ, ಅರಣ್ಯ ವೀಕ್ಷಕ ಅಶ್ವಿ‌ನ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಎಸ್‌ಕೆ ಬೋರ್ಡರ್‌ನ ವನ್ಯಜೀವಿ ವಿಭಾಗದ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.