ತೈಲೋತ್ಪನ್ನವನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೂ ಬೆಲೆ ನಿಯಂತ್ರಣ ಕಷ್ಟ

Team Udayavani, Sep 23, 2018, 6:00 AM IST

22bnp-21.jpg

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೂ ದರ ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ಹಾಗೂ ಜಿಎಸ್‌ಟಿ ಸಚಿವರ ತಂಡದ ಅಧ್ಯಕ್ಷ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ.

ಜಿಎಸ್‌ಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೂ ಜಿಎಸ್‌ಟಿ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇರಲಿದೆ ಎಂದು ತಿಳಿಸಿದರು.

ಹಿಂದಿನ ಯುಪಿಎ ಸರ್ಕಾರದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜೆಎಸ್‌ಟಿ ವ್ಯಾಪ್ತಿಗೆ ಒಳಪಡಿಸಿ ಸಂಸತ್ತಿನಲ್ಲಿ ಅನುಮೋದನೆ ಪಡೆಯಲಾಗಿದೆ. ಈಗ ಪೆಟ್ರೋಲಿಯಂ ಉತ್ಪನ್ನಗಳಿಗೆ ಜಿಎಸ್‌ಟಿ ವಿಧಿಸುವ ಅಧಿಕಾರ ಜಿಎಸ್‌ಟಿ ಮಂಡಳಿಗೆ ಇದೆ. ಸೆಪ್ಟಂಬರ್‌ 28 ರಂದು ಜಿಎಸ್‌ಟಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಸದ್ಯ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಹಾಗೂ ರಾಜ್ಯದ ತೆರಿಗೆ ಸೇರಿ ಶೇ. 40 ರಿಂದ 50 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಜಿಎಸ್‌ ಟಿ ವ್ಯವಸ್ಥೆ ಸ್ಥಿರವಾದ ಬಳಿಕ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಉತ್ತಮ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಗೆ ಬಂದ ನಂತರ 50.60 ಲಕ್ಷ ಜನ ಹೊಸ ತೆರಿಗೆದಾರರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ತೆರಿಗೆ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ  ಶೇ. 13 ರಷ್ಟು  ಆದಾಯ ಕೊರತೆಯಾಗಿದೆ.  ಪ್ರತಿ ತಿಂಗಳು 1 ಲಕ್ಷ 3 ಸಾವಿರ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಆದರೆ, ಜುಲೈ ತಿಂಗಳಿನಲ್ಲಿ 93,960 ಕೋಟಿ ರೂ. ಸಂಗ್ರಹಿಸಲಾಗಿದೆ. ಜೂನ್‌ ತಿಂಗಳಿನಲ್ಲಿ 96,480 ಕೋಟಿ ರೂ.  ಸಂಗ್ರಹಿಸಲಾಗಿತ್ತು. ಆಗಸ್ಟ್‌ ತಿಂಗಳಿನಲ್ಲಿಯೂ ತೆರಿಗೆ ಸಂಗ್ರಹ ಕಡಿಮೆಯಾಗುವ ಸಾಧ್ಯತೆ ಇದ್ದು, ಜುಲೈ ಆಗಸ್ಟ್‌ ತಿಂಗಳಲ್ಲಿ ಮಳೆಗಾಲ ಇರುವುದರಿಂದ ಮದುವೆಯಂತಹ ಕಾರ್ಯಕ್ರಮಗಳು ನಡೆಯದಿರುವುದರಿಂದ ವ್ಯಾಪಾರ ವಹಿವಾಟು ಕಡಿಮೆಯಾಗುತ್ತದೆ . ನಿರೀಕ್ಷಿತ ಮಟ್ಟದಲ್ಲಿ ಜಿಎಸ್‌ಟಿ ಸಂಗ್ರಹವಾದರೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೊರತೆಯಾಗುವ ತೆರಿಗೆಯನ್ನು ತುಂಬಿಕೊಡುವ ಪ್ರಮೇಯ ಬರುವುದಿಲ್ಲ ಎಂದು ಹೇಳಿದರು.

ಆಡಿಟ್‌ ತಾಂತ್ರಿಕ ತೊಂದರೆಯಿಂದ ಇ ವೇ ಬಿಲ್‌ ಸಂಗ್ರಹ ಕಡಿಮೆಯಾಗಿದೆ. ಇನ್‌ಫೋಸಿಸ್‌ಗೆ ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಲು ಸೂಚಿಸಲಾಗಿದ್ದು, ಅಕ್ಟೋಬರ್‌ನಲ್ಲಿ   ಹೊಸ ಸಾಪ್ಟವೇರ್‌ ಸಿದ್ದಗೊಳ್ಳಲಿದೆ ಎಂದು ಹೇಳಿದರು. ಅಂತಾರಾಜ್ಯ ವಸ್ತುಗಳ ಸಾಗಾಣಿಕೆ ಮೂಲಕ ಶೇ. 48 % ಹಾಗೂ ರಾಜ್ಯದಲ್ಲಿಯೇ ಸಾಗಾಣಿಕೆ ಮಾಡಿರುವ ಶೇ. 51 ರಷ್ಟು ತೆರಿಗೆ ಸಂಗ್ರಹ ವಾಗುತ್ತಿದೆ. ದೇಶದಲ್ಲಿ ಶೇಕಡಾ 99.49 ರಷ್ಟು ಉತ್ಪನ್ನಗಳು ರಸ್ತೆ ಸಾರಿಗೆ ಮೂಲಕವೇ ಸಾಗಾಣಿಕೆ ಮಾಡಲಾಗುತ್ತಿದ್ದು, ಶೇಕಡಾ 0.51 ರಷ್ಟು ಮಾತ್ರ ರೈಲುಗಳ ಮೂಲಕ ಸಾಗಾಣಿಕೆ ಮಾಡಲಾಗುತ್ತಿದೆ. ಬೇರೆ ರಾಜ್ಯಗಳಿಂದ ಉತ್ಪನ್ನಗಳು ಯಾವ ಕಾರಣಕ್ಕೆ ಎಲ್ಲಿಗೆ ಸಾಗಾಣಿಕೆ ಆಗುತ್ತಿವೆ ಎನ್ನುವ ಸಂಪೂರ್ಣ ಮಾಹಿತಿ ಇನ್ನೆರಡು ದಿನಗಳಲ್ಲಿ ಎಲ್ಲ ರಾಜ್ಯಗಳಿಗೂ ದೊರೆಯಲಿದೆ. ಇದರಿಂದ ಯಾವ ರಾಜ್ಯದಿಂದ ಎಷ್ಟು ಉತ್ಪನ್ನ ಯಾವ ರಾಜ್ಯಕ್ಕೆ ಸಾಗಾಣಿಕೆಯಾಗುತ್ತಿದೆ ಎನ್ನುವ ಸಂಪೂರ್ಣ ಮಾಹಿತಿ ದೊರೆಯಲಿದೆ. ದೇಶದಲ್ಲಿ ಎಲೆಕ್ಟ್ರಿಕಲ್‌ ಮಷಿನ್‌ಗಳು ಹಾಗೂ ಟೆಕ್‌ಸ್ಟೈಲ್‌ ಉತ್ಪನ್ನಗಳು ಹೆಚ್ಚಿನ ಪ್ರಮಾಣದಲ್ಲಿ ಅಂತರಾಜ್ಯಕ್ಕೆ ಸಾಗಾಣಿಕೆಯಾಗಿದೆ ಎಂದು ಹೇಳಿದರು.

ಅಲ್ಲದೇ ಬೋಗಸ್‌ ಇನ್‌ವೈಸ್‌ ಸೃಷ್ಠಿಸಿ ತೆರಿಗೆ ವಂಚಿಸುವವರನ್ನೂ ಪತ್ತೆ ಹಚ್ಚಲು ಅನುಕೂಲವಾಗಲಿದೆ. ಈಗಾಗಲೇ ಕರ್ನಾಟಕ ಹಾಗೂ ದೆಹಲಿಯಲ್ಲಿ  ತಪ್ಪು ಮಾಹಿತಿ ನೀಡಿ ಬೋಗಸ್‌  ಇನ್‌ವೈಸ್‌ ಸೃಷ್ಠಿಸಿದ್ದ ನಾಲ್ವರನ್ನು ಬಂಧಿಸಲಾಗಿದೆ. ಆಗಸ್ಟ್‌ನಲ್ಲಿ ಅಧಿಕಾರಿಗಳು 8 ಲಕ್ಷ 65 ಸಾವಿರ ಬಿಲ್‌ಗ‌ಳ ಪರಿಶೀಲನೆ ನಡೆಸಿದ್ದು, 3588 ವರದಿಗಳನ್ನು ನೀಡಿದ್ದಾರೆ ಎಂದು ಹೇಳಿದರು.

ಇನ್ನು ಸೇವಾ ಕ್ಷೇತ್ರದಲ್ಲಿ ತೆರಿಗೆ ಯಾವ ರಾಜ್ಯಕ್ಕೆ ಸೇರಬೇಕು ಎನ್ನುವ ಬಗ್ಗೆ ಗೊಂದಲ ಇದೆ. ರೈಲು, ಬ್ಯಾಂಕ್‌, ವಿಮಾನ ಹಾಗೂ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರು ಯಾವ ರಾಜ್ಯದಲ್ಲಿ ಸೇವೆ ಪಡೆಯುತ್ತಾರೆ ಅದೇ ರಾಜ್ಯಕ್ಕೆ ತೆರಿಗೆ ಹೋಗುವಂತಾಗಬೇಕು. ಈಗ ಗ್ರಾಹಕರು ಪ್ರವಾಸ ಮಾಡುವಾಗ ಪ್ರವಾಸ ಮಾಡುವ ರಾಜ್ಯದ ಬದಲು ಯಾವ ರಾಜ್ಯಕ್ಕೆ ಹೋಗುತ್ತಾರೆ. ಆ ರಾಜ್ಯಕ್ಕೆ ತೆರಿಗೆ ಸೇರುತ್ತಿದೆ. ಸಾಪ್ಟವೇರ್‌ನ ಸಮಸ್ಯೆ ಉಂಟಾಗಿದ್ದು, ಅದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ತೆರಿಗೆ ಪಾವತಿಸಲು ಸರಳ ಮಾರ್ಗ ಕಂಡು ಹಿಡಿಯಲಾಗಿದ್ದು, ಬಿ ಟು ಸಿ ಗೆ ಸಹಜ್‌ ಬಿ ಟು ಬಿ ಮತ್ತು ಬಿ ಟು ಸಿ ಗೆ ಸುಗಮ್‌ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. 5 ಕೋಟಿ ರೂ. ಕಡಿಮೆ ವ್ಯವಹಾರ ಮಾಡುವವರು ಶೇ. 92 ರಷ್ಟಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತೆರಿಗೆ ಪಾವತಿ ಮಾಡುತ್ತಾರೆ. ಶೇ. 20 ರಷ್ಟು ವ್ಯವಹಾರ  ಮಾಡುವವರು ತೆರಿಗೆ ವ್ಯಾಪ್ತಿಗೆ ಒಳ ಪಟ್ಟಿಲ್ಲ ಎಂದು ಹೇಳಿದರು.

ಪ್ರತಿ ವರ್ಷ ಡಿಸೆಂಬರ್‌ 31 ರೊಳಗೆ ತೆರಿಗೆ ಪಾವತಿ ಕಡ್ಡಾಯ ಮಾಡಲಾಗಿದ್ದು, ಹೊಸ ಆದಾಯ ರಿಟರ್ನ್ ಫಾರ್ಮ್ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಶೀಘ್ರವೇ ಬಿಡುಗಡೆ ಮಾಡಲಾಗುವುದು. ಕಾಮನ್‌ ಅಕೌಂಟಿಂಗ್‌ ಸಾಪ್ಟವೇರ್‌ ಡೆವಲೆಪ್‌ ಮಾಡಲು ಚಿಂತಿಸಲಾಗಿದ್ದು ಅದಕ್ಕಾಗಿ 18 ಕಂಪನಿಗಳನ್ನು ಪಟ್ಟಿ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.