ಕೇರಳ ರಾಜ್ಯದ ಲಾಟರಿ ಅಕ್ರಮ ಮಾರಾಟ : ಮೂವರ ಬಂಧನ

Team Udayavani, Oct 1, 2018, 11:25 AM IST

crime.jpg

ಮಡಿಕೇರಿ : ಕೇರಳದ ಲಾಟರಿಯನ್ನು ಅಕ್ರಮವಾಗಿ ಕೊಡಗಿನ ವಿವಿಧೆಡೆ  ಮಾರಾಟ ಮಾಡುತ್ತಿದ್ದ ಜಾಲವನ್ನು ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸುಂಟಿಕೊಪ್ಪ ಪೊಲೀಸರು ಪತ್ತೆ ಮಾಡಿ ಮೂವರನ್ನು ಬಂಧಿಸಿದ್ದಾರೆ.

ಸುಂಟಿಕೊಪ್ಪದ ನಿವಾಸಿ, ಎಳನೀರು ವ್ಯಾಪಾರಿ ಸಲೀಂ ಅಲಿಯಾಸ್‌ ತನು (44), 7ನೇ ಹೊಸಕೊಟೆಯ ಉಪ್ಪುತೋಡು ನಿವಾಸಿ ಕೂಲಿ ಕಾರ್ಮಿಕ ಮೂಸ (44) ಹಾಗೂ 7ನೇ ಹೊಸಕೊಟೆ ಕಲ್ಲುಕೋರೆ ನಿವಾಸಿ, ಆಟೋ ಚಾಲಕ ದೇವರಾಜು (53) ಬಂಧಿತರಾಗಿದ್ದು, ಇವರಿಂದ  3.17 ಲ. ರೂ. ಮುಖ ಬೆಲೆಯ 9319 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕೇರಳದ ಲಾಟರಿ ಟಿಕೆಟ್‌ ಮಾರಾಟ ಜಾಲದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ  ಮಾಹಿತಿ ಕಲೆ ಹಾಕಿ ದಾಳಿ ನಡೆಸುವಂತೆ ಜಿಲ್ಲೆಯ ಎಲ್ಲ ಪೊಲೀಸ್‌ ಅಧಿಕಾರಿಗಳಿಗೆ  ಎಸ್‌ಪಿ ಸುಮನ್‌ ಪೆನ್ನೇಕರ್‌ ನಿರ್ದೇಶನ ನೀಡಿದ್ದರು. ಅದರಂತೆ ಸೆ.30ರಂದು ಸುಂಟಿಕೊಪ್ಪ ನಗರದ 1ನೇ ಬ್ಲಾಕ್‌ನ ವಾಸಿ ಸಲೀಂ ಅಲಿಯಾಸ್‌ ತನು ಕೇರಳದ ಲಾಟರಿಯನ್ನು ಮಾರುವ ಉದ್ದೇಶದಿಂದ ಇಟ್ಟುಕೊಂಡಿರುವ ಬಗ್ಗೆ ಜಿಲ್ಲಾ ಅಪರಾಧ ಪತ್ತೆದಳದ ಇನ್ಸ್‌ಪೆಕ್ಟರ್‌ ಎಂ. ಮಹೇಶ್‌ ಹಾಗೂ ಸಿಬಂದಿಗೆ ಮಾಹಿತಿ ಸಿಕ್ಕಿತ್ತು. ಎಸ್‌ಪಿ ಮಾರ್ಗದರ್ಶನದಂತೆ ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ಸಿಬಂದಿ ಜತೆ ಸಲೀಂ ಮನೆಯ ಮೇಲೆ ದಾಳಿ ನಡೆಸಲಾಯಿತು.

ಈ ಸಂದರ್ಭ ಅಲ್ಲಿ ಮೂಸ ಹಾಗೂ ದೇವರಾಜು ಕೂಡ ಇದ್ದರು. ತಾವು ಸಲೀಂನಿಂದ  ಮಾರಾಟಕ್ಕಾಗಿ ಲಾಟರಿ ಖರೀದಿಸಲು ಬಂದಿರುವುದಾಗಿ ಅವರು ತಿಳಿಸಿದ್ದರು ಹಾಗೂ ಕೋಣೆಯಲ್ಲಿ ಲಾಟರಿ ಟಿಕೆಟ್‌ಗಳನ್ನು ಕಂಡು ಬಂದಿತ್ತು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ  ಕೇರಳದ ಇರಿಟ್ಟಿ ನಗರದಿಂದ ಸುಂಟಿಕೊಪ್ಪ ನಿವಾಸಿ ಅತೀಕ್‌ ಮೂಲಕ ಲಾಟರಿ ಟಿಕೆಟ್‌ಗಳನ್ನು ತರಿಸಿಕೊಂಡಿರುವುದಾಗಿ ಮತ್ತು ಅವುಗಳನ್ನು  ಸುಂಟಿಕೊಪ್ಪ, ಕುಶಾಲನಗರ, ಸೋಮವಾರಪೇಟೆಗಳಲ್ಲಿ ಸಂತೆ ನಡೆಯುವ ದಿನ ಮಾರಾಟ ಮಾಡಲು ಹಂಚಿಕೊಳ್ಳುತ್ತಿದ್ದುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.