ತ್ರಿಕೋನ ಪ್ರೇಮ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಸಜೀವ ದಹನ

Team Udayavani, Oct 1, 2018, 12:37 PM IST

fire-accident-700.jpg

ಹೈದರಾಬಾದ್‌ : ಒಂದೇ ಹುಡುಗಿಯನ್ನು ಪ್ರೀತಿಸಿದ ಹತ್ತನೇ ತರಗತಿಯ ಇಬ್ಬರು ಹುಡುಗರು ಕ್ರೋಧದ ಆವೇಶದಲ್ಲಿ , ಮದ್ಯ ಸೇವಿಸಿ, ಪರಸ್ಪರ ಬೆಂಕಿ ಹಚ್ಚಿಕೊಂಡು ಸಜೀವ ದಹನಗೊಂಡ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಒಂದೇ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ ಇಬ್ಬರು ಹದಿನಾರರ ಹರೆಯದ ವಿದ್ಯಾರ್ಥಿಗಳು ಪರಸ್ಪರರನ್ನು ಜೀವಂತ ಸುಟ್ಟು ಕೊಂದ ಘಟನೆ ಇಲ್ಲಿಂದ 190 ಕಿ.ಮೀ. ದೂರದ ತೆಲಂಗಾಣದ ಜಗ್‌ತಿಯಾಲ್‌ ಪಟ್ಟಣದಲ್ಲಿ ನಡೆದಿದೆ. 

ಬೆಂಕಿ ಹಚ್ಚಲ್ಪಟ್ಟವರಲ್ಲಿ ಕೆ ಮಹೇಂದರ್‌ ಎಂಬ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮಡಿದರೆ ಇನ್ನೋರ್ವ ರವಿ ತೇಜ ಎಂಬ ವಿದ್ಯಾರ್ಥಿ ಗಂಭೀರ ಸುಟ್ಟಗಾಯಗೊಂಡಿದಿಗೆ ಆಸ್ಪತ್ರೆಗೆ ದಾಖಲಾಗಿ ಅಲ್ಲಿ ಕೊನೆಯುಸಿರೆಳೆದ. 

ಮೃತಪಟ್ಟಿರುವ ಈ ಇಬ್ಬರೂ ಹುಡುಗರ ಮನೆಯವರು ಹೇಳಿರುವ ಪ್ರಕಾರ ಈ ಘಟನೆ ನಡೆದಾಗ ಸ್ಥಳದಲ್ಲಿ ಮೂರನೇ ಹುಡುಗನೊಬ್ಬ ಇದ್ದ ಎಂದು ಗೊತ್ತಾಗಿದೆ. ಹಾಗಾಗಿ ಈ ಇಡಿಯ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಪೊಲೀಸರು ಈ ಪ್ರಕರಣವನ್ನು  ಭಿನ್ನ ಕೋನದಿಂದಲೂ ತನಿಖೆ ನಡೆಸುತ್ತಿದ್ದಾರೆ. 

ಪೊಲೀಸರಿಗೆ ಘಟನೆ ನಡೆದ ಸ್ಥಳದಲ್ಲಿ ಬಿಯರ್‌ ಬಾಟಲ್‌, ಮೊಬೈಲ್‌ ಫೋನ್‌ಗಳು ಸಿಕ್ಕಿವೆ. 

ಮಿಷನರಿ ಶಾಲೆಯೊಂದರಲ್ಲಿ ಮಹೇಂದರ್‌ ಮತ್ತು ರವಿ ಸಹಪಾಠಿಗಳಾಗಿದ್ದು ಅವರು ಅದೇ ಶಾಲೆಯ ಒಬ್ಬಳೇ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದರು. ಈ ತ್ರಿಕೋನ ಪ್ರೇಮವೇ ಎರಡು ಜೀವಗಳನ್ನು ಬಲಿ ಪಡೆಯಿತು ಎಂದು ಪೊಲೀಸರು ಹೇಳಿದ್ದಾರೆ. 

ಹುಡುಗಿಗಾಗಿ ನಡೆದ ಜಟಾಪಟಿಯಲ್ಲಿ ಇಬ್ಬರೂ ಹುಡುಗರು ಪರಸ್ಪರರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಹಾಗಿದ್ದರೂ ಇದು ಕೊಲೆಯೇ ಆತ್ಮಹತ್ಯೆಯೇ ಎಂಬುದು ಖಚಿತವಾಗಿಲ್ಲ; ಹಾಗಾಗಿ ಪೊಲೀಸರು ಎರಡೂ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.