ಸಂತ್ರಸ್ತರಿಗೆ ಸಾಂತ್ವನ: ಪ್ರತಿ ನಿರಾಶ್ರಿತ ಕುಟುಂಬಕ್ಕೆ ವಸತಿ ಸೌಲಭ್ಯ

Team Udayavani, Oct 2, 2018, 6:40 AM IST

z-minister-2.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡು ಸಂತ್ರಸ್ತರಾದ ಪ್ರತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಮನೆ ನಿರ್ಮಿಸಿ ಕೊಡಲಿದೆ ಎಂದು ರಾಜ್ಯ ವಸತಿ ಸಚಿವ ಯು.ಟಿ.ಖಾದರ್‌ ಸ್ಪಷ್ಟ ಪಡಿಸಿದ್ದಾರೆ.

ಪ್ರಕೃತಿ ವಿಕೋಪದಿಂದ ತತ್ತರಿಸಿದ ಜೋಡುಪಾಲ, ಅರೆಕಲ್ಲು, ಮೊಣ್ಣಂಗೇರಿ ಗ್ರಾಮಗಳಿಗೆ ಭೇಟಿ ನೀಡಿದ ವಸತಿ ಸಚಿವ ಯು.ಟಿ.ಖಾದರ್‌, ಸ್ಥಳೀಯ ನಿವಾಸಿಗಳು ಮತ್ತು ಪ್ರಕೃತಿ ವಿಕೋಪದಿಂದ ಸಂತ್ರಸ್ತರ‌ ಅಹವಾಲು ಆಲಿಸಿದರು. ಸರಕಾರದ ಪರಿಹಾರ ಕಾರ್ಯವನ್ನು ಶೀಘ್ರವೇ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿದ ಸಂತ್ರಸ್ಥರು, ಭೂಕುಸಿತ ಪ್ರವಾಹದಿಂದ ಗ್ರಾಮಗಳಲ್ಲಿ ಉಂಟಾದ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಕೊಡಬೇಕು, ವಾಸದ ಮನೆಗಳಿಗೆ ಹಾನಿ ಸಂಭವಿಸಿದ್ದು ಮನೆಗಳ ದುರಸ್ಥಿಗೂ ಆರ್ಥಿಕ ಸಹಾಯ ಒದಗಿಸಬೇಕು. ನಿರಾ]ತರ ಕೇಂದ್ರದಲ್ಲಿ ಉಳಿದುಕೊಂಡು ಗುರುತಿನ ಚೀಟಿ ಹೊಂದಿರುವ ಕುಟುಂಬಗಳಿಗೂ ಬದುಕು ಕಟ್ಟಿಕೊಳ್ಳಲು ತಲಾ50 ಸಾವಿರ ರೂ. ಅನುದಾನ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. 

ಪ್ರತಿಕ್ರಿಯಿಸಿದ ಸಚಿವರು ಪ್ರಕೃತಿ ವಕೋಪಕ್ಕೆ ಸಂಭಂದಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತ್ಯೇಕ ಮಾನದಂಡಗಳಿವೆ. ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪವನ್ನು ರಾಜ್ಯ ವಿಪತ್ತು ಎಂದು ಪರಿಗಣಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರವೇ ಮಾನವೀಯತೆ ನೆಲೆಯಲ್ಲಿ ಸಂತ್ರಸ್ಥರಿಗೆ ನೆರವು ನೀಡಲಿದೆ. 

ಸಂಪೂರ್ಣ ನಾಶ ಮತ್ತು ಬಹುತೇಕ ನಾಶವಾದ ಮನೆಗಳಿಗೂ ಒಂದೇ ನಿಯಮದ ಅಡಿಯಲ್ಲಿ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಮಳೆಹಾನಿಯಿಂದ ಸಂತ್ರಸ್ಥರಾದವರಿಗೆ ಬದುಕು ಕಟ್ಟಿಕೊಳ್ಳಲು ಹಂತ-ಹಂತವಾಗಿ ನೆರವು ನೀಡಲಾಗುತ್ತದೆ ಎಂದು ಗ್ರಾಮಸ್ಥರಿಗೆ ವಿವರಿಸಿದರು.

ಬಳಿಕ ಮಾತನಾಡಿದ ಖಾದರ್‌ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ  ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ರಾಜ್ಯ ಸರ್ಕಾರವೇ ಮುಂದಾಗಿದೆ. ಈಗಾಗಲೇ ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದ್ದು ಕೊಡಗು ಜಿಲ್ಲಾಡಳಿತ ಮತ್ತು ಸಂತ್ರಸ್ಥರ ಅಭಿಪ್ರಾಯ ಪಡೆದು ಅಂತಿವಾಗಿ ಅಂತಹ ಮನೆಗಳನ್ನು ನಿರ್ಮಿಸಿ ಕೊಡಲಾಗುವುದೆಂದು ತಿಳಿಸಿದರು. 

ಜಿಲ್ಲಾಡಳಿತ ಮನೆ ಕಳೆದುಕೊಂಡ ಅರ್ಹನ್ನು ಗುರುತಿಸಿದೆ. ಅಂತಹ  ಕುಟುಂಬಗಳಿಗೆ ಮಾತ್ರ ಮನೆ ನೀಡಲಾಗುತ್ತದೆ. ಆಶ್ರಯ ಮನೆ ಯೋಜನೆಯನ್ನು ದುರುಪಯೋಗ ಮಾಡಲು ಹವಣಿಸಿದರೆ, ಅಂತಹ ವ್ಯಕ್ತಿಗಳ ವಿರುದ್ದ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರವೇ ಸೂಕ್ತ ಕ್ರಮಕೈಗೊಳ್ಳುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು. 

ವಾಸಕ್ಕೆ ಯೋಗ್ಯಮತ್ತು ಯೋಗ್ಯವಲ್ಲದ ಪ್ರದೇಶಗಳನ್ನು ಗುರುತಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆಯುತ್ತಿದೆ. ಅಪಾಯಕಾರಿ ಪ್ರದೇಶಗಳ ನಿವಾಸಿ ಗಳಿಗೂ ಬೇರೆ  ಕಡೆ ಮನೆ ನಿರ್ಮಿಸುವ ಕಾರ್ಯವೂ  ಆಗಲಿದೆ ಎಂದು ಸಚಿವ ಯು.ಟಿ.ಖಾದರ್‌ ತಿಳಿಸಿದರು.  

ಮಡಿಕೇರಿ – ಮಂಗಳೂರು ಹೆದ್ದಾರಿಯನ್ನು ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು  ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು  ಮತ್ತು ಲೋಕೋಪಯೋಗಿ ಸಚಿವ ರೇವಣ್ಣ ಜತೆ ಚರ್ಚಸಲಾಗಿದೆ. ಶಿರಾಡಿಘಾಟ್‌ ಮತ್ತು ಚಾರ್ಮಾಡಿ ಘಾಟ್‌ ರಸ್ತೆಯಲ್ಲೂ ಅಗತ್ಯ ಮುಂಜಾಗ್ರತ ಕ್ರಮಕೈಗೊಂಡು ಪ್ರಯಾಣಿಕರ ವಾಹನ ಸಂಚಾರಕ್ಕೆ ಅನುವು  ಮಾಡುವ ಕುರಿತು ಹಾಸನ ಮತ್ತು ಮಂಗಳೂರು ಜಿಲ್ಲಾಧಿಕಾರಿಗಳೊಂದಿಗೂ ಚರ್ಚಸಲಾಗಿದೆ ಎಂದು ಖಾದರ್‌ ಅವರು ತಿಳಿಸಿದರು. 

ಅಧಿಕಾರಿಗಳು ಗುತ್ತಿಗೆದಾರದಿಂದ ಮಾಹಿತಿ
ಬಳಿಕ ಭೂಕುಸಿತ  ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೀಡಾದ ಸ್ಥಳಗಳು ಮತ್ತು ರಸ್ತೆಗಳ ಸ್ಥಿತಿಗತಿಗಳನ್ನು ಸಚಿವ ಯು.ಟಿ.ಖಾದರ್‌ ವೀಕ್ಷಿಸಿದರು. ಮಡಿಕೇರಿ -ಜೋಡುಪಾಲ ರಸ್ತೆ ದುರಸ್ಥಿಯನ್ನು ಪರಿಶೀಲಿಸಿದ  ಸಚಿವ ಖಾದರ್‌ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಗುತ್ತಿಗೆದಾರದಿಂದ ಮಾಹಿತಿ ಪಡೆದುಕೊಂಡರು. ಮಾತ್ರವಲ್ಲದೆ ತಿರುವುಗಳು, ದುರಸ್ಥಿಪಡಿಸಿದ  ರಸ್ತೆಗಳ ಎರಡೂ ಬದಿಯಲ್ಲಿ ವೇಗದ ಮಿತಿ, ಅಪಾಯ ಸ್ಥಳಗಳ ಸೂಚನಾ ಫ‌ಲಕ ಅಳವಡಿಸಬೇಕೆಂದು ಸೂಚಿಸಿದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.