ಸಿಎಂ ಕಚೇರಿಗೆ 450 ಸಿಬ್ಬಂದಿ
Team Udayavani, Oct 15, 2018, 6:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರದಲ್ಲಿನ ಆಡಳಿತ ವ್ಯವಸ್ಥೆಯಲ್ಲಿ ದುಂದು ವೆಚ್ಚಕ್ಕೆ ಕತ್ತರಿ ಹಾಕುವುದಾಗಿ ಹೇಳಿದ್ದರು. ಅದನ್ನು ತಮ್ಮ ಇಲಾಖೆಯಿಂದಲೇ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆದರೆ, ಮುಖ್ಯಮಂತ್ರಿ ಸಚಿವಾಲಯಕ್ಕೆ 450 ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಮೂಲಕ ಅನಗತ್ಯ ದುಂದುವೆಚ್ಚಕ್ಕೆ ತಾವೇ ಮುನ್ನುಡಿ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಚ್ಚರಿ ಎಂದರೆ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಸಿಎಂ ಕಚೇರಿಗೆ ಭಾರೀ ಪ್ರಮಾಣದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ.
ಆರ್ಟಿಐ ಕಾರ್ಯಕರ್ತ ಬಿ.ಎಸ್.ಗೌಡ ಅವರಿಗೆ ಸಿಎಂ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಲ್ಲಿ ಸಿಎಂ ಸಚಿವಾಲಯಕ್ಕೆ ಬಿ,ಸಿ ಮತ್ತು ಡಿ ದರ್ಜೆಯ 450 ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ಸುಮಾರು 200 ಸಿಬ್ಬಂದಿ ಸರ್ಕಾರದ ಬೇರೆ, ಬೇರೆ ಇಲಾಖೆಗಳಿಂದ ಸಿಎಂ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಉಳಿದ 250 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿ ಕಂಪನಿ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು