ಹರಿಹರ: ಸಂಗಮ ಕ್ಷೇತ್ರದಲ್ಲಿ ಇಂದು ತೀರ್ಥೋದ್ಭವ 


Team Udayavani, Oct 17, 2018, 10:50 AM IST

17-october-4.gif

ಸುಬ್ರಹ್ಮಣ್ಯ : ಐತಿಹಾಸಿಕ ಪುಣ್ಯಕ್ಷೇತ್ರ ಹರಿಹರ ಪಳ್ಳತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನವು ಪುರಾತನವಾಗಿದ್ದು, ಶನಿ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಪಕ್ಕದಲ್ಲೆ ಪುಣ್ಯ ನದಿ ಹರಿಯುತ್ತಿದ್ದು, ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ ಆಗುವ ವೇಳೆ ಇಲ್ಲಿಯೂ ತೀರ್ಥೋದ್ಭವ ಆಗುತ್ತದೆ ಎಂಬ ನಂಬಿಕೆಯಿದೆ. ತುಲಾ ಸಂಕ್ರಮಣ ದಿನವಾದ ಬುಧವಾರ (ಅ. 17) ನೂರಾರು ಭಕ್ತರು ಸಂಗಮ ಕ್ಷೇತ್ರದಲ್ಲಿ ಪುಣ್ಯಸ್ನಾನ ನೆರವೇರಿಸಲಿದ್ದಾರೆ.

ದೇವಸ್ಥಾನ ಪೂರ್ವ ದಿಕ್ಕಿನಲ್ಲಿರುವ ಸಿದ್ಧ ಪರ್ವತದಿಂದ ಕೋಟಿ ತೀರ್ಥ ಎಂದು ನದಿ ಹರಿಯುತ್ತಿದೆ. ಈ ನದಿ ದೇವಸ್ಥಾನದ ಎದುರು ಸಂಗಮಗೊಂಡು ಅಘನಾಶಿನಿಯಾಗಿ ಮುಂದೆ ಹರಿಯುತ್ತದೆ. ಅಘನಾಶಿನಿ ಎಂಬಲ್ಲಿ ತೀರ್ಥೋದ್ಭವ ಆಗುತ್ತದೆ.

ತಲಕಾವೇರಿಯ ತೀಥೋದ್ಭವ ಸಮಯದಲ್ಲಿ ಇಲ್ಲಿಯೂ ನದಿಗೆ ದೇವಸ್ಥಾನದ ಅರ್ಚಕರು ಪೂಜೆ ಸಲ್ಲಿಸುತ್ತಾರೆ. ನೂರಾರು ಭಕ್ತರು ನದಿಗೆ ಬಾಗಿನ ಅರ್ಪಿಸುತ್ತಾರೆ. ಬಳಿಕ ಸ್ನಾನ ಪೂರೈಸುತ್ತಾರೆ. ಇದರಿಂದ ದುರಿತಗಳು ದೂರವಾಗಿ, ಚರ್ಮವ್ಯಾಧಿ ಇತ್ಯಾದಿಗಳು ನಿವಾರಣೆಯಾಗುತ್ತವೆ ಎಂಬ ಪ್ರತೀತಿ ಇದೆ. ಪುಣ್ಯಸ್ನಾನದ ಬಳಿಕ ಹರಿಹರೇಶ್ವರ ದೇವಸ್ಥಾನದಲ್ಲಿ ಶನಿಪೂಜೆ ನೆರವೇರಿಸಿದರೆ ಶನಿದೋಷ ಪರಿಹಾರವಾಗಿ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ. ಈ ಪುಣ್ಯ ಕ್ಷೇತ್ರ ದಲ್ಲಿ ಪಿಂಡ ಪ್ರದಾನವೂ ನಡೆಯುತ್ತದೆ.

ಹರಿ ಹರರು ಒಂದೇ ಬಿಂಬದಲ್ಲಿ ಸಂಕಲ್ಪಗೊಂಡ ವಿಶಿಷ್ಟ ಕ್ಷೇತ್ರವಿದು. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ. ಮೂರು ಗ್ರಾಮಗಳ ಕೂಡುಗಟ್ಟಿನ ಭಕ್ತರ ಆರಾಧ್ಯ ದೈವ. ಈ ದೇಗುಲ ಸುಮಾರು 800 ವರ್ಷಗಳ ಹಿಂದೆ ಪ್ರತಿಷ್ಠಾಪನೆಗೊಂಡಿದೆ. 2003ರಲ್ಲಿ ಈ ದೇವಸ್ಥಾನದ ಅಭಿವೃದ್ಧಿ ನಡೆದು ಬ್ರಹ್ಮಕಲಶೋತ್ಸವ ನಡೆದಿದೆ. ಈಗಿನ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಮಂಡಳಿ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತಷ್ಟು ವೇಗ ಸಿಕ್ಕಿದ್ದು, ಕಲಾ ಮಂದಿರ ನಿರ್ಮಾಣಗೊಳ್ಳುತ್ತಿದೆ. ಮುಂದಿನ ಕೆಲ ತಿಂಗಳಲ್ಲಿ ದೇವಸ್ಥಾನ ಜೀರ್ಣೋದ್ಧಾರಗೊಂಡು ಅಷ್ಟಬಂಧ ಬ್ರಹ್ಮಕಲಶ ನಡೆಯಲಿದ್ದು, ಭರದ ಸಿದ್ಧತೆಗಳು ಆಗುತ್ತಿವೆ, ಕೂಡುಗಟ್ಟಿನ ಭಕ್ತರು ಸಮಿತಿಗಳನ್ನು ರಚಿಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

 ರೋಗ ನಿವಾರಣೆ
ತಲಕಾವೇರಿ ಹಾಗೂ ಇಲ್ಲಿ ಏಕಕಾಲಕ್ಕೆ ತೀರ್ಥೋದ್ಭವ ಆಗುತ್ತದೆ ಎಂಬ ನಂಬಿಕೆ ಇದೆ. ಈ ಬಾರಿ ತುಲಾ ಸಂಕ್ರಮಣದಂದು ತೀರ್ಥೋದ್ಭವ ಆಚರಣೆ ನಡೆಸುತ್ತೇವೆ. ನದಿಗೆ ಪೂಜೆ ನಡೆದು, ಬಾಗಿನ ಅರ್ಪಣೆಯ ಬಳಿಕ ಭಕ್ತರು ಪುಣ್ಯಸ್ನಾನ ನೆರವೇರಿಸುವರು. ಶನಿದೋಷ ನಿವಾರಣೆಯ ಜತೆಗೆ ರೋಗ – ರುಜಿನಗಳು ದೂರವಾಗುತ್ತವೆ. 
– ಸುಬ್ರಹ್ಮಣ್ಯ ನರಸಿಂಹ ಭಟ್‌, ಅರ್ಚಕರು

 ಪುಣ್ಯ ಸ್ನಾನ
ಪ್ರಶಾಂತ ವಾತಾವರಣದಲ್ಲಿ ನಿರ್ಮಾಣಗೊಂಡಿರುವ ಶ್ರೀ ಕ್ಷೇತ್ರವು ಶನಿಪೂಜೆಗೆ ಪ್ರಸಿದ್ಧಿ ಪಡೆದಿದೆ. ಕೂಡುಗಟ್ಟಿನ ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದೀಗ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆಯುತ್ತಿದೆ. ತಲಕಾವೇರಿಯಲ್ಲಿ ತೀರ್ಥೋದ್ಭವ ನಡೆಯುವ ಘಳಿಗೆಯಲ್ಲಿ ಇಲ್ಲಿಯೂ ತೀರ್ಥೋದ್ಭವ ಆಗುತ್ತದೆ ಎಂಬ ನಂಬಿಕೆಯಿಂದ ಭಕ್ತರು ಇಲ್ಲಿಗಾಗಮಿಸಿ ಪುಣ್ಯ ಸ್ನಾನ ಮಾಡಿ, ಕೃತಾರ್ಥರಾಗುತ್ತಾರೆ.
– ರಾಮಕೃಷ್ಣ ಕುಧ್ಕುಳಿ,
ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ

 ವಿಶೇಷ ವರದಿ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.