ಕೇರಳ ಉದ್ಯೋಗಿ ವಜಾ
Team Udayavani, Oct 18, 2018, 10:49 AM IST
ದುಬಾೖ: ಮಹಿಳೆಯ ಬಗ್ಗೆ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಕೇರಳ ಮೂಲದ ಉದ್ಯೊಗಿಯನ್ನು ಸೌದಿ ಅರೇಬಿಯಾದಲ್ಲಿ ಕೆಲಸದಿಂದ ವಜಾಗೊಳಿಸಲಾಗಿದೆ. ಈತ ರಿಯಾದ್ನ ಲುಲು ಹೈಪರ್ಮಾರ್ಕೆಟ್ನಲ್ಲಿ ಕೆಲಸ ಮಾಡುತ್ತಿದ್ದ. ಈತ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಕೆಲವೇ ದಿನಗಳ ಹಿಂದೆ ಇದೇ ರೀತಿ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಕೇರಳದ ವ್ಯಕ್ತಿಯನ್ನು ಸೌದಿ ಅರೇಬಿಯಾದಲ್ಲಿ ವಜಾಗೊಳಿಸಲಾಗಿತ್ತು.