ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ಬಿಸಿಯೂಟದ್ದು


Team Udayavani, Oct 21, 2018, 1:28 PM IST

bid-2.jpg

ಬೀದರ: ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಾಗೂ ಸಂಗ್ರಹಿಸಿಟ್ಟ ಅಕ್ಕಿ ಹಾಗೂ ಇತರೆ ಆಹಾರ ದಾಸ್ತಾನುಗಳಲ್ಲಿ ಪಡಿತರ ಸೇರಿದಂತೆ ಹೆಚ್ಚು ಪ್ರಮಾಣದಲ್ಲಿ ಶಾಲೆಗಳ ಹಾಗೂ ವಸತಿ ನಿಲಯಗಳ ಬಿಸಿ ಊಟಕ್ಕೆ ಸರಬರಾಜು ಮಾಡುವ ಆಹಾರ ದಾಸ್ತಾನು ಆಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ಈ ಕುರಿತು ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಿವಿಧೆಡೆ ದಾಳಿ ನಡೆದ ಸಂದರ್ಭದಲ್ಲಿ ಪತ್ತೆಯಾದ ಅಕ್ಕಿ ಪ್ರಮಾಣದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿ ಊಟದ ಅಕ್ಕಿ ಹಾಗೂ ವಸತಿ ನಿಲಯಗಳಿಗೆ ಪೂರೈಕೆ ಆಗಬೇಕಾದ ಅಕ್ಕಿ ಇರುವ ಶಂಕೆ ವ್ಯಕ್ತವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ವಿವಿಧೆಡೆ ನಡೆದ ದಾಳಿಯಲ್ಲಿ ಸಾವಿರಕ್ಕೂ ಹೆಚ್ಚು ಕ್ವಿಂಟಲ್‌ ಅಕ್ಕಿ ಜಪ್ತಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಆಹಾರ ದಾಸ್ತಾನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಅಕ್ಕಿ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಗೆ ಕನ್ನ ಹಾಕುವ ಕೆಲಸ ರಾಜಾರೋಷವಾಗಿ ನಡೆಯುತ್ತಿದ್ದು, ಈ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಕುರಿತು ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ತನಿಖೆಯ ನಂತರ ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಇದಕ್ಕೆ ಕುಮ್ಮಕ್ಕು ನೀಡುವ ಪ್ರಭಾವಿಗಳ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ.

ಈ ಅಕ್ರಮ ದಂಧೆ ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಅನುಸರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯ ಆಹಾರ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚಿನ ಕಾರ್ಯಕ್ಕೆ ಹಿನ್ನಡೆ ಆಗುತ್ತಿದೆ ಎಂದರು. ಪಡಿತರ ಅಂಗಡಿ ಹಾಗೂ ಬಿಸಿ ಊಟಕ್ಕೆ ಸರಬರಾಜು ಆಗುತ್ತಿರುವ ಅನ್ನ ಭಾಗ್ಯಯೋಜನೆಯ ತೋಗರಿ ಬೇಳೆ ಕಳಪೆ ದೂರುಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ತೊಗರಿ ಬೇಳೆ ಕುರಿತು
ಪರಿಶೀಲನೆ ನಡೆಸಲಾಗುವುದು.

ಕಳಪೆ ತೊಗರಿ ಬೆಳೆ ವಿತರಣೆ ಆದರೆ ಗ್ರಾಹಕರು ದೂರು ಸಲ್ಲಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬುವುದನ್ನು ಪೊಲೀಸ್‌ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ನೀಡುವುದಾಗಿ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.