ಮುಚ್ಚಿತು ದೇಗುಲದ ಬಾಗಿಲು


Team Udayavani, Oct 23, 2018, 6:00 AM IST

37.jpg

ಪಂಪಾ/ಹೊಸದಿಲ್ಲಿ: ಐದು ದಿನಗಳ ಕಾಲ ತೆರೆದಿದ್ದ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲದ ಬಾಗಿಲನ್ನು ಸೋಮವಾರ ರಾತ್ರಿಯ ಪೂಜೆಯ ಬಳಿಕ ಮುಚ್ಚಲಾಗಿದೆ. ಬೆಳಗ್ಗೆ ದೇಗುಲ ಪ್ರವೇಶ ಮಾಡಲು ಮುಂದಾ ಗಿದ್ದ ಇಬ್ಬರು ಮಹಿಳೆಯರ ಪ್ರಯತ್ನ  ವಿಫ‌ಲಗೊಳಿಸಲಾಗಿದೆ. ಇದೇ ವೇಳೆ ಸೆ.28ರಂದು ನೀಡಿದ್ದ ತೀರ್ಪಿನ ಪುನರ್‌ ಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ 19 ಅರ್ಜಿಗಳನ್ನು ಮಂಗಳವಾರ ಪರಿಶೀಲಿಸಿ, ವಿಚಾರಣೆ ದಿನಾಂಕ ನಿಗದಿ ಪಡಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. 

5 ದಿನಗಳ ಪೂಜೆಯ ಬಳಿಕ ಸೋಮವಾರ ರಾತ್ರಿ 10 ಗಂಟೆಗೆ ದೇಗುಲ ಬಾಗಿಲು ಹಾಕಿದೆ. ನವೆಂಬರ್‌ 14ರಂದು ಮತ್ತೆ ಬಾಗಿಲು ತೆರೆಯಲಾಗುತ್ತದೆ. ಬೆಳಗ್ಗೆ ನಡೆದಿದ್ದ ಬೆಳವಣಿಗೆಯಲ್ಲಿ ಪಂಪಾ ತೀರಕ್ಕೆ ತೆರಳುವ ವೆಟ್ಟುಪ್ಪಾರ ಎಂಬಲ್ಲಿ ಅಯ್ಯಪ್ಪ ದೇಗುಲಕ್ಕೆ ತೆರಳಲು ಉದ್ದೇಶಿಸಿದ್ದ ಕೇರಳದ ಮಹಿಳೆಯನ್ನು ಭಕ್ತರು ತಡೆದಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ಕೊಟ್ಟಾಯಂನ ದಲಿತ ಹೋರಾಟಗಾರ್ತಿ ಬಿಂದು ಎಂಬುವರು ಸುಪ್ರೀಂಕೋರ್ಟ್‌ ಆದೇಶದ ಪ್ರತಿ ಜತೆಗೆ ದೇಗುಲ ಪ್ರವೇಶಕ್ಕೆ ತೆರಳುತ್ತಿದ್ದೇನೆ. ರಕ್ಷಣೆ ನೀಡಬೇಕು ಎಂದು ಪೊಲೀಸರ ಬಳಿ ಮನವಿ ಮಾಡಿಕೊಂಡಿ ದ್ದರು. ಅವರು ಬಸ್‌ನಲ್ಲಿ ಪ್ರಯಾಣ ಆರಂಭಿಸಬೇಕು ಎನ್ನುವಷ್ಟರಲ್ಲಿ ಬಿಜೆಪಿ ಕಾರ್ಯಕರ್ತರು ತಡೆದರು. ಬಳಿಕ ಪೊಲೀಸ್‌ ರಕ್ಷಣೆಯಲ್ಲಿ ಅವರನ್ನು ಮುಂಡಕಾಯಂ ಠಾಣೆಗೆ ಕರೆದೊಯ್ಯ ಲಾಯಿತು. ಅಲ್ಲಿಯೂ ಬಿಜೆಪಿ ಕಾರ್ಯಕರ್ತರು ಮತ್ತು ಭಕ್ತರು ಪ್ರತಿಭಟನೆ ನಡೆಸಿದರು. ಕೊಟ್ಟಾಯಂನಲ್ಲಿರುವ ಬಿಂದು ಅವರ ಮನೆ ಎದುರೂ ನೂರಾರು ಮಂದಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲಿಗೆ ತೆರಳಿದ ಪೊಲೀಸರು ಬಂದೋಬಸ್ತ್ ಮಾಡಿದರು. ಅದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.  ಭಾನುವಾರ ಒಂದೇ ದಿನ ಆರು ಮಂದಿ ಮಹಿಳೆಯರು ದೇಗುಲ ಪ್ರವೇಶಕ್ಕೆ ಮುಂದಾಗಿದ್ದರು. ಸೆ.28ರಂದು ಎಲ್ಲಾ ವಯೋಮಿತಿಯ ಮಹಿಳೆಯರು ದೇಗುಲ ಪ್ರವೇಶ ಮಾಡ ಬಹುದು ಎಂದು ತೀರ್ಪು ನೀಡಿದ ಬಳಿಕ ಅ.17ರಂದು ದೇಗುಲ ಬಾಗಿಲು ತೆರೆದಿತ್ತು.

ಮೂವರ ಬಂಧನ: ನಿಳಕ್ಕಲ್‌ನಲ್ಲಿ ಸೆಕ್ಷನ್‌ 144 ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಪಿ.ಕೆ.ಕೃಷ್ಣದಾಸ್‌ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ. 

ರಾಹುಲ್‌ಗೆ ಜಾಮೀನು: ಶಬರಿಮಲೆ ದೇಗುಲದ ಮುಖ್ಯ ಅರ್ಚಕರ ಕುಟುಂಬ ಸದಸ್ಯ, ಧರ್ಮ ಜನ ಸೇನಾ ಸಂಘಟನೆ ಮುಖ್ಯಸ್ಥ ರಾಹುಲ್‌ ಈಶ್ವರ್‌ಗೆ ಪಟ್ಟಣಂತಿಟ್ಟ ಮುನ್ಸಿಫ್ ಕೋರ್ಟ್‌ ಸೋಮವಾರ ಜಾಮೀನು ನೀಡಿದೆ. ಅವರನ್ನು ಅ.19 ರಂದು ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಗಿತ್ತು. 

ಫಾತಿಮಾಗೆ ವರ್ಗ: ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಯತ್ನಿಸಿದ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಉದ್ಯೋಗಿ ರೆಹಾನಾ ಫಾತಿಮಾರನ್ನು ವರ್ಗಾಯಿಸ ಲಾಗಿದೆ. ಜತೆಗೆ ಅವರ ವಿರುದ್ಧ ಆಂತರಿಕ ತನಿಖೆ ನಡೆಸಲೂ ತೀರ್ಮಾನಿಸಲಾಗಿದೆ. ವರ್ಗಾ ವಣೆಗೆ ಪ್ರತಿಕ್ರಿಯೆ ನೀಡಿರುವ ರೆಹಾನಾ “ಇದು ನನಗೆ ಅಯ್ಯಪ್ಪ ಸ್ವಾಮಿಯ ಆಶೀರ್ವಾದ’ ಎಂದಿದ್ದಾರೆ. ಶಬರಿಮಲೆ ದೇಗುಲ ಪರಿಸರದ ಸ್ಥಿತಿಗತಿ ಬಗ್ಗೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡುವ ನಿರ್ಧಾರದ ಕುರಿತು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಸ್ವಾಗತಿಸಿದ್ದಾರೆ. 

ಇಂದು ತೀರ್ಮಾನ: ಸೆ.28ರಂದು ದೇಗುಲ ಪ್ರವೇಶಕ್ಕೆ ಸಂಬಂಧಿಸಿ ನೀಡಲಾಗಿ ರುವ ತೀರ್ಪಿನ ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿರುವ 19 ಅರ್ಜಿಗಳ ಬಗ್ಗೆ ಮಂಗಳ ವಾರ ಪರಿಶೀಲನೆ ನಡೆಸಿ ತೀರ್ಮಾನಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಪೀಠ “19 ಮೇಲ್ಮನವಿ ಅರ್ಜಿಗಳಿರುವುದು ನಮ್ಮ ಗಮನಕ್ಕೆ ಬಂದಿದೆ. ಅವುಗಳ ಬಗ್ಗೆ ಮಂಗಳವಾರ ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದೆ.

ಎರ್ನಾಕುಳಂನಲ್ಲಿರುವ ಬೋಟ್‌ಜೆಟ್ಟಿ ಶಾಖೆಗೆ ವರ್ಗಾವಣೆ ಬೇಕೆಂದು ಐದು ವರ್ಷಗಳ ಹಿಂದೆಯೇ ಪ್ರಯತ್ನ ಮಾಡಿದ್ದೆ. ಇದೀಗ ಸ್ವಾಮಿ ಅಯ್ಯಪ್ಪನ ದಯೆಯಿಂದ ಅದು ಆಗಿದೆ.
ರೆಹಾನಾ ಫಾತಿಮಾ, ಬಿಎಸ್‌ಎನ್‌ಎಲ್‌ ಉದ್ಯೋಗಿ

ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಂಗಳವಾರ ತೀರ್ಮಾನಿಸಲಾಗುತ್ತದೆ.
ಎ.ಪದ್ಮಕುಮಾರ್‌, ಟಿಡಿಬಿ ಅಧ್ಯಕ್ಷ

ಒಂದೆಡೆ ದೊಡ್ಡ ಭೂತವಿದೆ, ಮತ್ತೂಂದೆಡೆ ಸಮುದ್ರವಿದೆ. ಇಂಥ ಸ್ಥಿತಿಯಲ್ಲಿ ಕೇರಳ ಸರಕಾರ ಇದೆ. ಸುಪ್ರೀಂಕೋರ್ಟ್‌ ಆದೇಶ ಪಾಲನೆಗೆ ಮುಂದಾಗುತ್ತಿದ್ದರೂ, ಬಿಜೆಪಿ ತಂಟೆ ಮಾಡಿ ಪರಿಸ್ಥಿತಿ ಹದಗೆಡಿಸಲು ಮುಂದಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರು ಈ ಕೆಲಸ ಮಾಡುತ್ತಿದ್ದಾರೆ.
ಕಡಕಂಪಳ್ಳಿ ಸುರೇಂದ್ರನ್‌  ಕೇರಳ ಮುಜರಾಯಿ ಸಚಿವ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.