ಭರವಸೆ ಈಡೇರದಿದ್ದರೆ ಬಂದ್‌: ಲಾರಿ ಮಾಲಕರ ಎಚ್ಚರಿಕೆ


Team Udayavani, Oct 24, 2018, 10:11 AM IST

sand.jpg

ಉಡುಪಿ: ಉಡುಪಿ ಜಿಲ್ಲೆಯ ಸಿಆರ್‌ಝಡ್‌ ಮತ್ತು ನಾನ್‌ ಸಿಆರ್‌ಝಡ್‌ನ‌ ಹೆಚ್ಚಿನ ದಿಬ್ಬಗಳಲ್ಲಿ ಏಕಕಾಲದಲ್ಲಿ ಮರಳುಗಾರಿಕೆ ಆರಂಭಿಸುವುದಾಗಿ ಜಿಲ್ಲಾಧಿಕಾರಿಯವರು ಭರವಸೆ ನೀಡಿದ್ದಾರೆ. ಈಡೇರಿಸದಿದ್ದರೆ ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘ ಎಚ್ಚರಿಕೆ ನೀಡಿದೆ.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪ್ರವೀಣ್‌ ಸುವರ್ಣ, ಸೋಮ ವಾರದ ಪ್ರತಿಭಟನೆಯ ವೇಳೆ ಮರಳುಗಾರಿಕೆ ಆರಂಭಿಸಲು ಜಿಲ್ಲಾಧಿಕಾರಿಯವರಿಗೆ 21 ದಿನಗಳ ಕಾಲಾವಕಾಶ ನೀಡಿದ್ದು, ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಸರಕಾರಿ ರಜೆಗಳು ಬರುವುದರಿಂದ ಇದನ್ನು ಒಟ್ಟು 30 ದಿನಗಳಿಗೆ ವಿಸ್ತರಿಸುತ್ತೇವೆ. ಅದರಂತೆ ನ. 21 ಕೊನೆಯ ದಿನವಾಗುತ್ತದೆ. ಆಗ ಮರಳುಗಾರಿಕೆ ಆರಂಭವಾಗದಿದ್ದರೆ ನ. 22ರಂದು ಉಡುಪಿ ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದರು. ಕಾರ್ಕಳ ಲಾರಿ ಮಾಲಕರ ಸಂಘದ ಅಧ್ಯಕ್ಷ ಉದಯ ಕುಮಾರ್‌, ಪೆರ್ಡೂರು ಸಂಘದ ಅಧ್ಯಕ್ಷ ರಾಜೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಕೂಡಲೇ ಆರಂಭಿಸಿ: ಐವನ್‌ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ಕೂಡಲೇ ಆರಂಭಿಸಿ ಜನರಿಗೆ 3,000 ರೂ.ಗಳಿಗೆ ಒಂದು ಲೋಡಿನಂತೆ ಒದಗಿಸುವ ವ್ಯವಸ್ಥೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿಯವರನ್ನು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಆಗ್ರಹಿಸಿದ್ದಾರೆ. ಅ. 15ರೊಳಗೆ ಮರಳುಗಾರಿಕೆ ಆರಂಭಿಸುವುದಾಗಿ ಜಿಲ್ಲಾಧಿಕಾರಿ ಈ ಹಿಂದೆ ನೀಡಿದ್ದ ಭರವಸೆ ಈಡೇರಿಲ್ಲ ಎಂದವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. 

3,000 ರೂ.ಗಳಿಗೆ ಒಂದು ಲೋಡು ಮರಳು ಸಿಗಬೇಕೆಂದು ಈ ಹಿಂದೆ ನಡೆದ ಮಾತುಕತೆಯಲ್ಲಿ ತಿಳಿಸಿದ್ದೆವು. ಅದು ಸಾಧ್ಯವಾಗಿಲ್ಲ. ಮರಳುಗಾರಿಕೆಗೆ ಮುಕ್ತ ಅನುಮತಿ ನೀಡುವ ಮೂಲಕ ಅಧಿಕಾರಿಗಳು ಜೈಲಿಗೆ ಹೋಗಬೇಕೆಂದು ಹೇಳು ತ್ತಿಲ್ಲ; ಆದರೆ ನಿಷೇಧಿತ ಪ್ರದೇಶಗಳನ್ನು ಹೊರತುಪಡಿಸಿ ಮರಳು ಇರುವಲ್ಲೆಲ್ಲ ತೆಗೆಯಲು ಕೂಡಲೇ ಅನುಮತಿ ನೀಡಬಹುದಲ್ಲವೇ ಎಂದರು. ನಿಯಮ ಸಡಿಲಗೊಳಿಸಿ ಹೆಚ್ಚು ಜನರು ಟೆಂಡರ್‌ನಲ್ಲಿ ಭಾಗವಹಿಸುವಂತೆ ಮಾಡಬೇಕು. ಜಿಲ್ಲಾಧಿಕಾರಿಗಳೇ ದರ ನಿಗದಿಪಡಿಸಿ ಎಲ್ಲರಿಗೂ ಸಿಗುವಂತೆ ಮಾಡಬೇಕು. ಕಾನೂನು ತೊಡಕುಗಳಿದ್ದರೆ ಪರಿಹಾರ ಕಂಡುಕೊಳ್ಳೋಣ ಎಂದು ಸಲಹೆ ನೀಡಿದರು.

ನಾಳೆಯಿಂದ ಧರಣಿ: ಭಟ್‌
ಉಡುಪಿ: ಮರಳುಗಾರಿಕೆಯನ್ನು ಆರಂಭಿಸಬೇಕೆಂದು ಆಗ್ರಹಿಸಿ ಮರಳಿಗಾಗಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಪಾಲ್ಗೊಳ್ಳುವಿಕೆಯಲ್ಲಿ ಅ. 25ರಂದು ಬೆಳಗ್ಗೆ 10ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು. ಧರಣಿ ಅಹೋರಾತ್ರಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರು ಮರಳುಗಾರಿಕೆ ಆರಂಭಿಸುವ ಭರವಸೆ ನೀಡಿರುವುದರಿಂದ ಅ.25ರ ಧರಣಿ ಸತ್ಯಾಗ್ರಹಕ್ಕೆ ಲಾರಿ ಮಾಲಕರ ಸಂಘ ಬೆಂಬಲ ನೀಡುತ್ತಿಲ್ಲ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಡಿಸಿ ಪ್ರಯತ್ನಕ್ಕೆ ಮೆಚ್ಚುಗೆ
ಸೋಮವಾರ ಇಡೀ ದಿನ ಪ್ರತಿಭಟನೆ ನಡೆಸಿ ದಾಗ ಜಿಲ್ಲಾಧಿಕಾರಿ ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೂ ಕಚೇರಿಯಲ್ಲಿದ್ದು ಅಹವಾಲು ಕೇಳಿದ್ದಾರೆ. ಸಿಎಂ ಕಚೇರಿ ಅಧಿಕಾರಿಗಳ ಜತೆಗೂ ಮಾತನಾಡಿ
ದ್ದಾರೆ. ಗರಿಷ್ಠ ದಿಬ್ಬಗಳಲ್ಲಿ ಮರಳುಗಾರಿಕೆ ಆರಂಭಿಸುವುದಾಗಿ ನೀಡಿದ ಭರವಸೆಯನ್ನು ಅವರು ಈಡೇರಿಸುತ್ತಾರೆ ಎಂಬ ನಂಬಿಕೆ ನಮ ಗಿದೆ. ನಮ್ಮ ಹೋರಾಟಕ್ಕೆ ಎಂಜಿನಿಯರ್‌ಗಳು, ಕಾರ್ಮಿಕರು, ಚಾಲಕರು ಪೂರ್ಣ ಬೆಂಬಲ ನೀಡುತ್ತಿದ್ದಾರೆ ಎಂದು ಪ್ರವೀಣ್‌ ಸುವರ್ಣ ಹೇಳಿದರು.

ಅಕ್ರಮಕ್ಕೆ ಬೆಂಬಲವಿಲ್ಲ
ಕಾಪು -ಕಟಪಾಡಿ ಲಾರಿ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಮಾತನಾಡಿ, ನಾವು ಅಕ್ರಮ ಮರಳುಗಾರಿಕೆ  ಬೆಂಬಲಿಸುವುದಿಲ್ಲ. ಆದರೆ ಕೇವಲ ಮರಳು ಸಾಗಾಟ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಂಚಾಯತ್‌ ಮಟ್ಟದಲ್ಲಿಯೇ ನಿಗಾ ಇರಿಸಬೇಕು. ಒಂದು ಲಾರಿಗೆ ಅದರ ಮೌಲ್ಯದ ದುಪ್ಪಟ್ಟು ದಂಡ ವಿಧಿಸುವುದನ್ನು ನಿಲ್ಲಿಸಬೇಕು. ಜಿಪಿಎಸ್‌ ಅಳವಡಿಕೆಯಲ್ಲಿಯೂ ಲಾರಿ ಮಾಲಕರನ್ನು ವಂಚಿಸಲಾಗಿದೆ. ಜಿಪಿಎಸ್‌ ಖರೀದಿಗೆ ಬಿಲ್‌ ನೀಡಿಲ್ಲ. ಮಾತ್ರವಲ್ಲದೆ ಈ ಹಿಂದೆ ಜಿಪಿಎಸ್‌ನ್ನು ಜಿಲ್ಲಾಡಳಿತವೇ ಒದಗಿಸಿದೆಯಾದರೂ ಅದರ ಗುಣಮಟ್ಟ ಸರಿಯಿಲ್ಲ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಇದರಿಂದ ನಮಗೆ ಮತ್ತಷ್ಟು ತೊಂದರೆಯಾಗಿದೆ. ಮರಳು ಬೇರೆ ಜಿಲ್ಲೆಗೆ ಹೋಗುವುದನ್ನು ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಡೆಯಬೇಕೇ ವಿನಾ ಎಲ್ಲ ವಾಹನಗಳ ಮಾಲಕರಿಗೆ ತೊಂದರೆ ನೀಡುವುದು ಸರಿಯಲ್ಲ ಎಂದರು.

ಎಂ-ಸ್ಯಾಂಡ್‌ ಸೂಕ್ತವಲ್ಲ
ಎಂ-ಸ್ಯಾಂಡ್‌ ಇಲ್ಲಿನ ಕಾಮಗಾರಿಗಳಿಗೆ ಸೂಕ್ತವಲ್ಲ. ಎಂ-ಸ್ಯಾಂಡ್‌ ಉತ್ತಮ ಗುಣಮಟ್ಟದ್ದು ಎಂದಾದರೆ ಅದನ್ನು ಎಲ್ಲ ಸರಕಾರಿ ಯೋಜನೆಗಳಿಗೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಿ ಎಂದು ಪ್ರವೀಣ್‌ ಸುವರ್ಣ ಮತ್ತು ಕುಂದಾಪುರ ಟಿಪ್ಪರ್‌ ಮಾಲಕರ ಸಂಘದ ಅಧ್ಯಕ್ಷ ಗುಣಕರ ಶೆಟ್ಟಿ ಹೇಳಿದರು. ಕುಂದಾಪುರ-ಬೈಂದೂರು ನಡುವೆ ಎಲ್ಲ ಪ್ರದೇಶ ಗಳನ್ನು ಜೈವಿಕ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿ ಅಲ್ಲಿ ಮರಳುಗಾರಿಕೆಗೆ ಅವಕಾಶ ನೀಡುತ್ತಿಲ್ಲ. ವಾಸ್ತವವಾಗಿ ಎಲ್ಲವೂ ಸೂಕ್ಷ್ಮ ವಲಯವಲ್ಲ. ಕೆಲವನ್ನು ವ್ಯಾಪ್ತಿಯಿಂದ ಹೊರಗಿಡ ಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದೇವೆ. ಈ ಬಗ್ಗೆ  ಪ್ರಯತ್ನ ನಡೆಯುತ್ತಿದೆ ಎಂದವರು ತಿಳಿಸಿದರು.

ನಿಯಮ ತಿದ್ದುಪಡಿಗೆ ಸರಕಾರಕ್ಕೆ ಪತ್ರ: ಪ್ರಿಯಾಂಕಾ
ಉಡುಪಿ:
ಲಾರಿ ಮಾಲಕ ಸಂಘದವರು ಸೋಮವಾರ ಪ್ರತಿಭಟನೆ ನಡೆಸಿದಾಗ ಸಲ್ಲಿಸಿರುವ ಬೇಡಿಕೆ ಕಾರ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲವು ನಿಯಮಾ ವಳಿಗಳ ತಿದ್ದುಪಡಿಗೆ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ತಿಳಿಸಿದ್ದಾರೆ.

ಸಿಆರ್‌ಝಡ್‌ ಮತ್ತು ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಹೊಸದಾಗಿ ಮರಳು ದಿಬ್ಬ/ ಬ್ಲಾಕ್‌ಗಳನ್ನು ಗುರುತಿಸಿ ಅನುಮೋದನೆ ಪಡೆದು ಒಂದೇ ಬಾರಿಗೆ ಸಾರ್ವಜನಿಕರಿಗೆ ಮರಳು ದೊರೆಯುವಂತೆ ಮಾಡಲು 30 ದಿನಗಳ ಕಾಲಾವಕಾಶ ಕೇಳಲಾಗಿದೆ. ಸಂಘದ ಇನ್ನೊಂದು ಬೇಡಿಕೆಯಂತೆ ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ಮರಳು ಸಾಗಾಟ ಪರವಾನಿಗೆ ನೀಡುವ ಕುರಿತು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆಯಲಾಗಿದೆ ಎಂದವರು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ನಾನ್‌ ಸಿಆರ್‌ಝಡ್‌ ನದಿ ಪಾತ್ರಗಳಲ್ಲಿ ಮರಳು ಬ್ಲಾಕ್‌ಗಳನ್ನು ನಿಯಮಾವಳಿಯಂತೆ ಗುರುತಿಸಲು ಸಾಧ್ಯವಾಗದಿರುವುದರಿಂದ ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸುವಂತೆ ನಿಯಮ ತಿದ್ದುಪಡಿ ತರುವ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗಿದೆ. ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸಿಆರ್‌ಝಡ್‌ ಪ್ರದೇಶದ ನದಿ ಪಾತ್ರಗಳಲ್ಲಿ ಬರುವ ಜೈವಿಕ ಸೂಕ್ಷ್ಮ ಪ್ರದೇಶ ಗಳ ಮಿತಿಯನ್ನು ಕಡಿಮೆಗೊಳಿಸಿ ತಿದ್ದುಪಡಿ ತರುವ ಕುರಿತಾಗಿಯೂ ಪತ್ರದಲ್ಲಿ ಉಲ್ಲೇಖೀಸಲಾಗಿದೆ ಎಂದಿದ್ದಾರೆ.
ತಾಲೂಕು ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಟೆಂಡರ್‌ ಪ್ರಕ್ರಿಯೆ ಕೈಬಿಟ್ಟು ಸ್ಥಳೀಯ ಪಂಚಾಯತ್‌ ವ್ಯಾಪ್ತಿ ಯಲ್ಲಿಯೇ ಪರವಾನಿಗೆ ನೀಡಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಒಂದು ವೇಳೆ ಟೆಂಡರ್‌ ಮಾಡುವುದಾದರೆ 5 ವರ್ಷಗಳ ಪರವಾನಿಗೆ ಪಡೆ ದವರು ಆಯಾ ಗ್ರಾ.ಪಂ.ನಲ್ಲಿ ಇಲ್ಲದಿದ್ದಲ್ಲಿ ಅದೇ ಗ್ರಾ.ಪಂ.ನ ಹೊಸಬರಿಗೆ ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆಗೆ ಅನುಗುಣವಾಗಿ ಕೆಎಂಎಂಸಿಆರ್‌ 1994ರ ತಿದ್ದುಪಡಿ ಅಧಿನಿಯಮ 2017ರ 31ಘಆ ಅರಲ್ಲಿ ತಿದ್ದುಪಡಿ ತರುವ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.