ಮನೆಗೆ ನುಗ್ಗಿ ತಾಯಿ-ಮಗನಕೊಂದ ದರೋಡೆಕೋರರು

Team Udayavani, Oct 26, 2018, 10:00 AM IST

gul-2.jpg

ಸೇಡಂ: ಐವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ತಾಯಿ ಮತ್ತು ಮಗನನ್ನು ಕೊಲೆ ಮಾಡಿ ನಗ-ನಾಣ್ಯ ದೋಚಿದ ಘಟನೆ ತಾಲೂಕಿನ ಮುನಕನಪಲ್ಲಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಮನೆಯ ಅಂಗಳದಲ್ಲಿ ಮಲಗಿದ್ದ ಬಸವರಾಜ ಹಾಶಪ್ಪ ತೆಲ್ಕಾಪಲ್ಲಿ (50) ಹಲ್ಲೆಗೊಳಗಾಗಿ ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ಬಸವರಾಜನ ತಾಯಿ ಬಾಲಮ್ಮ ಹಾಶಪ್ಪ (70) ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಂಬಂಧಿಕರಾದ ರವಿ ಹಣಮಂತ (16), ವೆಂಕಟೇಶ ಬಸವರಾಜ (24) ಗಾಯಗೊಂಡಿದ್ದು , ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಬಳಿಕ 30 ಗ್ರಾಂ ಚಿನ್ನ, 10 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು, ಐಜಿಪಿ ಮನೀಶ ಕರ್ಬಿಕರ್‌, ಹೆಚ್ಚುವರಿ ಎಸ್ಪಿ
ಜಯಪ್ರಕಾಶ, ಸಿಪಿಐ ಶಂಕರಗೌಡ ಪಾಟೀಲ, ಎನ್‌. ವಿರೇಂದ್ರ, ಪಿಎಸ್‌ಐ ಸುಶೀಲಕುಮಾರ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಾಯ್ತು?: ಮುನಕನಪಲ್ಲಿ ಗ್ರಾಮದ ಬಸವರಾಜ ಹಾಶಪ್ಪ ತೆಲ್ಕಾಪಲ್ಲಿ ಊಟ ಮುಗಿಸಿ ಮನೆ ಅಂಗಳದಲ್ಲಿ ಮಲಗಿದ್ದರು. ಈ ವೇಳೆ ದಿಢೀರ್‌ನೆ ಆಗಮಿಸಿದ ಐವರು ಅಪರಿಚಿತರು ಮನೆಗೆ ನುಗ್ಗಿ ಬಡಿಗೆಗಳಿಂದ ಹಿಗ್ಗಾಮುಗ್ಗಾ ಥಳಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಬಸವರಾಜನ ಸೊಸೆಯ ಕೈಲಿದ್ದ ಮಗುವನ್ನು ಕಸಿದುಕೊಂಡು ಸನ್ನೆ ಮೂಲಕ ನಗ-ನಾಣ್ಯ ನೀಡುವಂತೆ ಒತ್ತಾಯಿಸಿದ್ದಾರೆ.
 
ನಂತರ ಮಗುವನ್ನು ಬಿಸಾಕಿ ಬಾಲಮ್ಮಳ ಕೊರಳಲ್ಲಿನ ಬಂಗಾರದ ಸರಕ್ಕೆ ಕೈ ಹಾಕಿ ಎಳೆದಾಡಿದ್ದಾರೆ. ಇದಕ್ಕೂ ಮುನ್ನ ಹಲ್ಲೆಗೊಳಗಾಗಿದ್ದ ಬಸವರಾಜ ಮಂಚದ ಮೇಲೆಯೇ ಕೊನೆಯುಸಿರೆಳೆದಿದ್ದು, ಉಳಿದ ಮೂವರಿಗೆ ಗಾಯಗಳಾಗಿವೆ ಎಂದು ಗಾಯಗೊಂಡ ಯುವಕ ವೆಂಕಟೇಶ ತಿಳಿಸಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮೇಲ್ನೋಟಕ್ಕೆ ಈ ಪ್ರಕರಣ ದರೋಡೆಗೆ ಯತ್ನಿಸಿದಂತೆ ಅನುಮಾನ ವ್ಯಕ್ತವಾಗಿದೆ. ಘಟನೆಯಲ್ಲಿ ನಗದು ಮತ್ತು ಬಂಗಾರ ಆಭರಣಗಳನ್ನು ಅಪರಿಚಿತರು ದೋಚಿದ್ದಾರೆ. ತನಿಖೆ ಜಾರಿಯಲ್ಲಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. 
ಜಯಪ್ರಕಾಶ, ಹೆಚ್ಚುವರಿ ಎಸ್‌ಪಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.