ಸುಬ್ರಹ್ಮಣ್ಯ: ಹಲ್ಲೆ ಖಂಡಿಸಿ ಪ್ರತಿಭಟನೆ, ಸಭೆ

Team Udayavani, Oct 26, 2018, 11:09 AM IST

subrahmanya.jpg

ಸುಬ್ರಹ್ಮಣ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್‌ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಹಾಗೂ ಅವರ ಬೆಂಬಲಿಗರು ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಡೆಸಿದ ಹಲ್ಲೆಯನ್ನು ಖಂಡಿಸಿ ವರ್ತಕರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ಬಂದ್‌ ಆಚರಿಸಿ, ಪ್ರತಿಭಟನೆ ನಡೆಸಿದರು.

ನಗರದ ವರ್ತಕರು, ಆಟೋ ರಿಕ್ಷಾ, ಖಾಸಗಿ ವಾಹನಗಳ ಚಾಲಕ – ಮಾಲಕರು, ಸಂಘಟನೆಗಳ ಸದಸ್ಯರು ದೇವಸ್ಥಾನದ ಆದಿಶೇಷ ವಸತಿಗೃಹದ ಬಳಿ ಜಮಾಯಿಸಿ, ರಥಬೀದಿ ಮೂಲಕ ಕುಮಾರಧಾರಾ ತನಕ ಪ್ರತಿಭಟನ ಮೆರವಣಿಗೆ ಮಾಡಿದರು. ಆದಿಶೇಷ ವಸತಿಗೃಹದ ಬಳಿ ಪ್ರತಿಭಟನ ಸಭೆ ನಡೆಯಿತು.

ಮುಖಂಡರಾದ ರಾಜೇಶ್‌ ಎನ್‌.ಎಸ್‌, ಶಿವರಾಮ ರೈ ಮಾತನಾಡಿ ಕೃತ್ಯವನ್ನು ಖಂಡಿಸಿದರು. ಕಡಬ, ಗುತ್ತಿಗಾರು, ಹರಿಹರ, ಕೊಲ್ಲಮೊಗ್ರು, ಐನಕಿದು, ಪಂಜ, ಬಳ್ಪ ಗ್ರಾಮಸ್ಥರೂ ಪಾಲ್ಗೊಂಡಿದ್ದರು.

ಗುರುವಾರ ಪೂರ್ವಾಹ್ನ 10 ಗಂಟೆಗೆ ವರ್ತಕರು ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ, ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಭಕ್ತರಿಗೆ ಬೆಳಗ್ಗಿನ ಉಪಾಹಾರಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಹೊಟೇಲ್‌ಗ‌ಳನ್ನು ಕೊಂಚ ತಡವಾಗಿ ಬಂದ್‌ ಮಾಡಲಾಯಿತು. ದೇವಸ್ಥಾನದಿಂದಲೂ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನದ ಭೋಜನ ವ್ಯವಸ್ಥೆಯಲ್ಲೂ ವ್ಯತ್ಯಾಸವಾಗಲಿಲ್ಲ. ಶಿಕ್ಷಣ ಸಂಸ್ಥೆಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯಾಚರಿಸಿದವು.

ಖಂಡನೆ-ಅಭಿನಂದನ ಸಭೆ
ಗುರುಪ್ರಸಾದ್‌ ಮೇಲಿನ ಹಲ್ಲೆ ಖಂಡಿಸಿ ಕುಕ್ಕೆ ಸುಬ್ರಹ್ಮಣ್ಯದ ವರ್ತಕರು ಗುರುವಾರ ಕರೆ ನೀಡಿದ್ದ ಬಂದ್‌ ಯಶಸ್ವಿ ಗೊಳಿಸಿರುವುದಕ್ಕೆ ಸಂಜೆ ರಥಬೀದಿಯಲ್ಲಿ ಅಭಿನಂದನ ಸಭೆ ನಡೆಯಿತು. ಸಭೆಯಲ್ಲಿ ಧರ್ಮಪ್ರಚಾರಕ ಲಕ್ಷ್ಮೀಶ ಗಬ್ಲಿಡ್ಕ, ಹಿಂದೂ ಮುಖಂಡರಾದ ಕಿಶೋರ್‌ ಶಿರಾಡಿ, ಸತೀಶ್‌ ಕೂಜುಗೋಡು, ತಾ.ಪಂ. ಸದಸ್ಯ ಅಶೋಕ್‌ ನೆಕ್ರಾಜೆ, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯೆ ವಿಮಲಾ ರಂಗಯ್ಯ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಜುನಾಥ ರಾವ್‌, ವರ್ತಕರ ಸಂಘದ ಶಿವಕುಮಾರ್‌ ಕಾಮತ್‌, ಶಿವರಾಮ ರೈ, ರಾಜೇಶ್‌ ಎಂ.ಎಸ್‌., ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ಮಾಜಿ ಸದಸ್ಯೆ ಲಕ್ಷ್ಮೀ ಎಸ್‌. ಮಾತನಾಡಿದರು. ಬಳಿಕ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.