17ನೇ ಕಲ್ಯಾಣ ಪರ್ವಕ್ಕೆ ಸಿದ್ಧತೆ ಪೂರ್ಣ


Team Udayavani, Oct 27, 2018, 11:53 AM IST

bid-2.jpg

ಬಸವಕಲ್ಯಾಣ: ನರಗದ ಬಸವ ಮಹಾಮನೆ ಆವರಣದಲ್ಲಿ ಅ.27, 28 ಹಾಗೂ 29ರಂದು ಮೂರು ದಿನಗಳ ಕಾಲ ನಡೆಯಲಿರುವ 17ನೇ ಕಲ್ಯಾಣ ಪರ್ವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭವ್ಯ ಮಂಟಪ ಹಾಗೂ ವೇದಿಕೆ ಸಿದ್ಧಗೊಂಡಿದೆ.  ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ವಿವಿಧ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಬಸವ ಅನುಯಾಯಿಗಳು ಮತ್ತು ಭಕ್ತರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬರುವ ಭಕ್ತಾದಿಗಳಿಗೆ ವಸತಿ, ಮೂರು ದಿನ ಪ್ರಸಾದ ವಿತರಣೆ ಹಾಗೂ ಪುಸ್ತಕ, ಲಿಂಗ, ರುದ್ರಾಕ್ಷಿ ಮಾರಾಟ ಮಳಿಗಳನ್ನು ಕೂಡ ನಿರ್ಮಿಸಲಾಗಿದೆ. 

ಅ.27ರಂದು ಬೆಳಗ್ಗೆ 10:30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ ಪಾಟೀಲ ಧ್ವಜಾರೋಹಣ ನೆರವೇರಿಸುವರು. ಶಾಸಕ, ಕಲ್ಯಾಣ ಪರ್ವದ ಕಾರ್ಯಾಧ್ಯಕ್ಷ ಬಿ.ನಾರಾಯಣರಾವ್‌ ಅಧ್ಯಕ್ಷತೆ ವಹಿಸುವರು. 

ಕೂಡಲಸಂಗಮ ಬಸವ ಧರ್ಮ ಪೀಠದ ಶ್ರೀ ಮಹಾಜಗದ್ಗುರು ಡಾ| ಮಾತೆ ಮಹಾದೇವಿ ಸಾನ್ನಿಧ್ಯ, ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ಪೀಠಾಧ್ಯಕ್ಷೆ ಶ್ರೀ ಜಗದ್ಗುರು ಮಾತೆ ಗಂಗಾದೇವಿ ನೇತೃತ್ವ ವಹಿಸುವರು. ಬಸವಕಲ್ಯಾಣ ಅಲ್ಲಮ ಪ್ರಭು ಸೊನ್ನ ಪೀಠದ ಪೀಠಾಧ್ಯಕ್ಷ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಮಹಾರಾಷ್ಟ್ರ ಅಲ್ಲಮಗಿ ಅಲ್ಲಪ್ರಭು ಯೋಗ ಪೀಠದ ಅಧ್ಯಕ್ಷರಾದ ಶ್ರೀ ಬಸವಕುಮಾರ ಸ್ವಾಮೀಜಿ, ಬೆಂಗಳೂರು ಚನ್ನಬಸವೇಶ್ವರ ಜ್ಞಾನ ಪೀಠಾಧ್ಯಕ್ಷ ಶ್ರೀ ಚನ್ನಬಸವಾನಂದ ಸ್ವಾಮೀಜಿ ಸಮ್ಮುಖ ವಹಿಸುವರು. ಶ್ರೀ ಮಾತೆ ಜ್ಞಾನೇಶ್ವರಿ ಹಾಗೂ ಶ್ರೀ ದಾನೇಶ್ವರಿ ಧರ್ಮಗುರು ಪೂಜೆ ನೆರವೇರಿಸುವರು. 

ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಎಚ್‌. ಆಂಜನೇಯ ಮತ್ತು ಶಾಸಕರಾದ ರಹೀಮ್‌ಖಾನ್‌, ಎಂ.ವೈ.ಪಾಟೀಲ, ಶರಣಬಸಪ್ಪಾ ದರ್ಶನಾಪೂರ, ಬಸವರಾಜ ಮತ್ತಿಮೂಡ, ಅಲ್ಲಮಪ್ರಭು ಪಾಟೀಲ, ವಿಜಯಸಿಮಗ್‌, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು.

ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ಇಂದು ಕಲ್ಯಾಣ ಪರ್ವ ಉತ್ಸವ ಸಮಿತಿ, ಬಸವ ಮಹಾಮನೆ ಬಸವಕಲ್ಯಾಣ ಮತ್ತು ಅಗಸ್ತ್ಯ ಆಯುರ್ವೇದ ಚಿಕಿತ್ಸಾ ಹಾಗೂ ಸಂಶೋಧನಾ ಕೇಂದ್ರ ಮುಂಡರಗಿ ಸಂಯುಕ್ತಾಶ್ರಯದಲ್ಲಿ ಅ,27ರಂದು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಲಿದೆ. ಡಾ|ಲೋಕೇಶ ಟೇಕಲ್‌, ಡಾ| ಪಿ.ಸಿ.ಚಪ್ಪನಮಠ, ಡಾ| ಬೂದೇಶ, ಡಾ| ರಾಜೇಂದ್ರ ಸಿ ಮಠದ, ಡಾ|ವಿಶ್ವೇಶ್ವರಯ್ನಾ ಸೇರಿದಂತೆ ನುರಿತ ತಜ್ಞರ ತಂಡದಿಂದ ಚಿಕಿತ್ಸೆ ನಡೆಯುವುದು. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಬಸವ ದಳದ ಯುವ ಸಮಾವೇಶ ನಡೆಯುವುದು. ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಚನ್ನಬಸವಾನಂದ ಸ್ವಾಮೀಜಿ ಸಾನ್ನಿಧ್ಯ, ರಾಷ್ಟ್ರೀಯ ಬಸವ ದಳ ಅಧ್ಯಕ್ಷ ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿ ನೇತೃತ್ವ ವಹಿಸುವರು. ಸಚಿವ ರಾಜಶೇಖರ ಪಾಟೀಲ್‌ ಧ್ವಜಾರೋಹಣ ಮತ್ತು ಜಹೀರಾಬಾದ್‌ ರಾ.ಬ.ದ.ಳ. ಅಧ್ಯಕ್ಷ ಶಂಕರೆಪ್ಪಾ ಪಾಟೀಲ ಉದ್ಘಾಟನೆ ನೆರವೇರಿಸುವರು. ಬೀದರ ರಾ.ಬ.ದ. ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅಧ್ಯಕ್ಷತೆ ವಹಿಸುವರು. ಸಂಜೆ 6ಕ್ಕೆ ಶರಣೆಯರ ಸಂಗಮ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.