ಪ್ರೇಯಸಿ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ

Team Udayavani, Oct 28, 2018, 11:35 AM IST

highcourt3.jpg

ಬೆಂಗಳೂರು: ಎಂಟು ವರ್ಷಗಳ ಹಿಂದೆ ಹೈಕೋರ್ಟ್‌ ಆವರಣದಲ್ಲೇ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಆರೋಪಿಗೆ 62ನೇ ಸಿಸಿಎಚ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಢ ವಿಧಿಸಿ ಆದೇಶಿಸಿದೆ.

ವಕೀಲ ರಾಜಪ್ಪ ಶಿಕ್ಷೆಗೆ ಒಳಗಾದವ ಆರೋಪಿ. ತಾನು ಪ್ರೀತಿಸಿದ ಯುವತಿ ಬೇರೆ ಯಾರಿಗೂ ಸಿಗಬಾರದು ಎಂಬ ಉದ್ದೇಶದಿಂದ ಆಯೋಪಿಯು, 2010ರ ಜುಲೈ 8ರಂದು ಮಧ್ಯಾಹ್ನ ಹೈಕೋರ್ಟ್‌ ಆವರಣದಲ್ಲೇ ನ್ಯಾಯವಾದಿ ನವೀನಾ ಎಂಬುವವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಜಪ್ಪನನ್ನು ಬಂಧಿಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ 62ನೇ ಸಿಸಿಎಚ್‌ ನ್ಯಾಯಾಲಯ, ಆರೋಪಿಗೆ ಕೊಲೆ ಪ್ರಕರಣದಲ್ಲಿ ಅಜೀವ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಸೆರೆವಾಸ ಅನುಭವಿಸಬೇಕು. ಆತ್ಮಹತ್ಯೆಗೆ ಯತ್ನಿಸಿದ ಆರೋಪದಲ್ಲಿ 500 ರೂ. ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸಲು ವಿಫ‌ಲನಾದಲ್ಲಿ 10 ದಿನಗಳ ಸಾಮಾನ್ಯ ಕಾರಾಗೃಹ ವಾಸ ಅನುಭವಿಸಬೇಕೆಂದು ಆದೇಶಿಸಿದೆ. ಇದೇ ವೇಳೆ 5 ಸಾವಿರ ರೂ. ದಂಡ ಮೊತ್ತವನ್ನು ಹತ್ಯೆಗೀಡಾದ ನವೀನಾರ ಪೋಷಕರಿಗೆ ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿದೆ.

ಘಟನೆ ಏನು?: ಆರೋಪಿ ರಾಜಪ್ಪ ಹಾಗೂ ನವೀನಾ ಇಬ್ಬರು ವಕೀಲರಾಗಿದ್ದು, ಹಿರಿಯ ನ್ಯಾಯವಾದಿ ಒಬ್ಬರ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಮದುವೆಗೂ ನಿರ್ಧರಿಸಿದ್ದರು. ಈ ಮಧ್ಯೆ ನವೀನಾ, ಆಕೆಯ ಹಿರಿಯ ವಕೀಲರ ಜತೆ ಸಂಬಂಧ ಹೊಂದಿದ್ದಾರೆ ಎಂದು ಸಂದೇಹ ಪಟ್ಟು, ಆಕೆಯ ಜತೆ ರಾಜಪ್ಪ ಮನಸ್ತಾಪ ಮಾಡಿಕೊಂಡಿದ್ದ.

ಈ ಹಿನ್ನೆಲೆಯಲ್ಲಿ 2010 ಜುಲೈ 8ರಂದು ಮಧ್ಯಾಹ್ನ 1.45ರ ಸುಮಾರಿಗೆ ಹೈಕೋರ್ಟ್‌ನ 1ನೇ ಮಹಡಿಯ ಹಾಲ್‌ ಬಳಿ ಬಂದ ಆರೋಪಿ, ಹಿರಿಯ ವಕೀಲರ ಜತೆ ಆಕೆ ಅತಿ ಸಲುಗೆಯಿಂದ ಮಾತನಾಡುತ್ತಿದ್ದುದನ್ನು ತಪ್ಪಾಗಿ ಅರ್ಥೈಸಿಕೊಂಡು, ಆಕೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದ. ಬಳಿಕ ಕೋರ್ಟ್‌ ಆವರಣದಲ್ಲಿರುವ ಶೌಚಾಲಯಕ್ಕೆ ಹೋಗಿ ವಿಷ ವಿಶ್ರಿತ ಮದ್ಯ ಸೇವಿಸಿದ್ದ. ಅಲ್ಲದೆ, ಚಾಕುವಿನಿಂದ ತನ್ನ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.