ಕೊಡಗು ಬೆಳೆಗಾರರಿಗೆ ಕೇಂದ್ರದ ನೆರವು
Team Udayavani, Nov 2, 2018, 6:00 AM IST
ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಸುರೇಶ್ ಪ್ರಭು ಭರವಸೆ ನೀಡಿದರು.
ನಗರದಲ್ಲಿ ಗುರುವಾರ ಕರ್ನಾಟಕ ಪ್ಲ್ರಾಂಟರ್ ಅಸೋಸಿಯೇಷನ್ (ಕೆಪಿಎ) ಹಮ್ಮಿಕೊಂಡಿದ್ದ 60ನೇ ವಾರ್ಷಿಕ ಸಮ್ಮೇಳನ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿದ ಅವರು, ಪ್ರವಾಹದಿಂದ ಕೊಡುಗು ಭಾಗದಲ್ಲಿ ಉಂಟಾಗಿ ವಾಣಿಜ್ಯ ಬೆಳೆ ತೋಟಗಳು ಹಾಳಾಗಿವೆ. ಅದರಿಂದ ಆಗಿರುವ ನಷ್ಟ ಹಾಗೂ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅವುಗಳ ಪರಿಹಾರ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು. ಕೊಡಗು ಭಾಗದಲ್ಲಿ ಕಾಫಿ, ಟೀ, ಮೆಣಸು ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತಂತೆ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿದ್ದು, ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಸೋಸಿಯೇಷನ್ ಪ್ರಸ್ತಾವನೆ ಸಲ್ಲಿಸಿದರೆ ಕೂಡಲೇ ಅಗತ್ಯ ಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಮಾತನಾಡಿ, ವಿಶ್ವದಾದ್ಯಂತ ನೈಸರ್ಗಿಕ ಕಾಫಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದರ ನಡುವೆಯ ಕಾಫಿ ಹಾಗೂ ಇತರೆ ತೋಟಗಾರಿಕಾ ಬೆಳೆಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕೆ ಸರ್ಕಾರಗಳು ಮುಂದಾಗಬೇಕಿದೆ ಎಂದರು. ಅಸೋಸಿಯೇಷನ್ ಅಧ್ಯಕ್ಷ ಎಚ್ .ಟಿ.ಪ್ರಮೋದ್ ಕಾಫಿ, ಟೀ, ಮೆಣಸು ಸೇರಿದಂತೆ ವಿವಿಧ ವಾಣಿಜ್ಯ ಬೆಳ ಸ್ಥಿತಿಗತಿ ಹಾಗೂ ಅವುಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ