ಅರ್ಜುನ್‌ ಸರ್ಜಾಗೆ ತಾತ್ಕಾಲಿಕ ರಿಲೀಫ್


Team Udayavani, Nov 3, 2018, 6:00 AM IST

v-13.jpg

ಬೆಂಗಳೂರು: ನಟಿ ಶೃತಿ ಹರಿಹರನ್‌ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್‌ ಸರ್ಜಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜುನ್‌ ಸರ್ಜಾ ಅವರನ್ನು ಬಂಧಿಸದಂತೆ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಅರ್ಜುನ್‌ ಸರ್ಜಾ ಸದ್ಯ ನಿರಾಳರಾಗಿದ್ದಾರೆ. 

ತಮ್ಮ ವಿರುದ್ಧ ಶೃತಿ ಹರಿಹರನ್‌ ದಾಖಲಿಸಿರುವ ದೂರು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜುನ್‌ ಸರ್ಜಾ ಅವರನ್ನು ಬಂಧಿಸುವಂತಿಲ್ಲ ಎಂದು ನಿರ್ದೇಶನ ನೀಡಿತು. ಆದರೆ, ಕಾನೂನು ರೀತಿ ತನಿಖೆ ನಡೆಸಲು ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ಅನುಮತಿ ನೀಡಿ ವಿಚಾರಣೆಯನ್ನು ನ.14ಕ್ಕೆ ಮುಂದೂಡಿತು. 

ಶುಕ್ರವಾರ ಅರ್ಜಿ ವಿಚಾರಣೆ ವೇಳೆ ಅರ್ಜುನ್‌ ಸರ್ಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ.ವಿ. ಆಚಾರ್ಯ, ತಮ್ಮ ಕಕ್ಷಿದಾರರ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಇದೊಂದು ಚಾರಿತ್ರ್ಯ ಹರಣ ಮತ್ತು ಘನತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ. ಶೃತಿ ಹರಿಹರನ್‌ ಸುಳ್ಳು ಆರೋಪ ಮಾಡುವ ಮೂಲಕ ಸರ್ಜಾ ಅವರ ಗೌರವ-ಘನತೆಗೆ ಚ್ಯುತಿ ತಂದಿದ್ದಾರೆ. “ಮೀ ಟೂ’ ಅಭಿಯಾನ ಹೆಸರಲ್ಲಿ 2015ರಲ್ಲಿ ಚಿತ್ರವೊಂದರ ಚಿತ್ರೀಕರಣದ ಸಂದರ್ಭದ ಸನ್ನಿವೇಶವನ್ನು ಪ್ರಸ್ತಾಪಿಸಿ ಆರೋಪ ಮಾಡಿದ್ದಾರೆ. ಚಿತ್ರಕಥೆಗೆ ಅನುಗುಣವಾಗಿ ಸರ್ಜಾ ನಟನೆ ಮಾಡಿದ್ದಾರೆ.

ಚಿತ್ರತಂಡ ಹಾಗೂ ನಿರ್ದೇಶಕರ ಉಪಸ್ಥಿತಿಯಲ್ಲಿ ನಡೆದಿದೆ. ಪ್ರಚಾರ ಗಿಟ್ಟಿಸಿಕೊಳ್ಳಲು ಈ ಸುಳ್ಳು ಆರೋಪ ಮಾಡಲಾಗಿದೆ. ಒಂದೊಮ್ಮೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದರೆ, ದೂರು ಸಲ್ಲಿಸುವ ಮುನ್ನ ಸಮಿತಿ ರಚಿಸಬೇಕು. ಸಮಿತಿಯ ವಿಚಾರಣೆಯಲ್ಲಿ ಆರೋಪ ದೃಢಪಟ್ಟರೆ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ಅದನ್ನು ಪಾಲಿಸಿಲ್ಲ. ಹಾಗಾಗಿ ಪ್ರಕರಣವನ್ನು ಮುಂದುವರಿಸದಂತೆ ಮತ್ತು ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಆಚಾರ್ಯ ಕೋರಿದರು. ಈ ವೇಳೆ ಮಧ್ಯಪ್ರವೇಶಿಸಿದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌, ಅರ್ಜಿಯು ಪ್ರಾಥಮಿಕ ವಿಚಾರಣೆ ಹಂತದಲ್ಲಿದೆ. ಈ ವೇಳೆ ಮಧ್ಯಂತರ ಆದೇಶ ನೀಡುವುದು ಸಮಂಜಸವಲ್ಲ ಎಂದು ತಿಳಿಸಿದರು.

ವಾದ-ಪ್ರತಿ ವಾದ ಆಲಿಸಿದ ನ್ಯಾಯಪೀಠ, ಇದೊಂದು, ವರ್ಷಗಳ ಹಳೆಯ ಪ್ರಕರಣವಾಗಿದ್ದು, ನ್ಯಾಯಸಮ್ಮತವಾಗಿ ನಡೆದುಕೊಳ್ಳಲಿದೆ ಎಂದು ತಿಳಿಸಿದರು. ತನಿಖೆ ಮುಂದುವರಿಯಲಿದ್ದು, ಅರ್ಜಿದಾರವನ್ನು ವಿಚಾರಣೆಗೆ ಕರೆಯುವುದಿಲ್ಲ
ಎಂದು ಭರವಸೆ ನೀಡಲಾಗುವುದು ಎಂದು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ನ್ಯಾಯಪೀಠಕ್ಕೆ ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.