ವಿಮಾನ ಕಾರ್ಯಾಚರಣೆ; ಸುರಕ್ಷತಾ ಕ್ರಮ ಪರಿಶೀಲನೆ


Team Udayavani, Nov 10, 2018, 11:09 AM IST

gul-8.jpg

ಕಲಬುರಗಿ: ನೂತನ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಆರಂಭಿಸುವ ಸಂಬಂಧ ಸುರಕ್ಷತಾ ಕ್ರಮ ಪರಿಶೀಲಿಸಲು ನಾಗರಿಕ ವಿಮಾನಯಾನ ಸಚಿವಾಲಯದ ಬ್ಯೂರೋ ಆಫ್‌ ಸಿವಿಲ್‌ ಏವಿಯೇಷನ್‌ ಸೊಸೈಟಿಯ ಹೈದ್ರಾಬಾದ್‌ನ ಪ್ರಾದೇಶಿಕ ನಿರ್ದೇಶಕ ಎಂ.ಟಿ. ಬೇಗ್‌ ನೇತೃತ್ವದ ಭದ್ರತಾ ಸಮಿತಿ ನಗರಕ್ಕೆ ಆಗಮಿಸಿದೆ.

ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಸಮಿತಿ ಸದಸ್ಯರು ಭದ್ರತೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯೂರೋ ಆಫ್‌ ಸಿವಿಲ್‌ ಏವಿಯೇಷನ್‌ ಸೊಸೈಟಿಯ ಹೈದ್ರಾಬಾದ್‌ನ ಪ್ರಾದೇಶಿಕ ನಿರ್ದೇಶಕ ಎಂ.ಟಿ. ಬೇಗ್‌ ಅವರು, ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭದ್ರತಾ ಸಮಿತಿಯಿಂದ ನಿರಾಕ್ಷೇಪಣಾ ಪತ್ರ ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ಸಲ್ಲಿಸಿದ ನಂತರವೇ ವಾಣಿಜ್ಯ ಕಾರ್ಯಾಚರಣೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ದಳ, ಶ್ವಾನ ದಳ, ಅಗ್ನಿಶಾಮಕ ದಳ, ಸ್ಫೋಟಕ ವಸ್ತುಗಳ ಪತ್ತೆ ಘಟಕ, ವಿಮಾನ ನಿಲ್ದಾಣದ ಸಮಗ್ರ ಭದ್ರತೆ ಸೇರಿದಂತೆ ಡಿ.ಜಿ.ಸಿ.ಎ. ಚೆಕ್‌ಲಿಸ್ಟ್‌ನಲ್ಲಿ ನಿಗದಿಪಡಿಸಿರುವ ಇನ್ನಿತರ ಎಲ್ಲ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲೇಬೇಕು. ವಿಮಾನ ನಿಲ್ದಾಣಕ್ಕೆ ಭದ್ರತೆ ಕಲ್ಪಿಸುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಮಾತನಾಡಿ ವಿಮಾನ ಕಾರ್ಯಾಚರಣೆಗೆ ದಿನಾಂಕ ನಿಗದಿಪಡಿಸಿದಲ್ಲಿ ಭದ್ರತೆಯಲ್ಲದೆ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವುದು ಎಂದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಜಯಪ್ರಕಾಶ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಅಮೀನ ಮುಕ್ತಾರ, ಕಲಬುರಗಿ ತಹಶೀಲ್ದಾರ ಅಶೋಕ ಹೀರೊಳ್ಳಿ ಸೇರಿದಂತೆ ಭದ್ರತಾ ಸಮಿತಿಯ ಸದಸ್ಯರು, ಇನ್ನಿತರ ಅಧಿಕಾರಿಗಳು ಹಾಜರಿದ್ದರು. ನಂತರ ಸಮಿತಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಟಾಪ್ ನ್ಯೂಸ್

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

CM, ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳಬಾರದು: ಡಾ.ಜಿ. ಪರಮೇಶ್ವರ್‌

CM, ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳಬಾರದು: ಡಾ.ಜಿ. ಪರಮೇಶ್ವರ್‌

18

Puttur: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kalburgi

Kalaburagi: ಹಣ ಡಬಲ್ ಮಾಡಿ ಬಹುಕೋಟಿ‌ ವಂಚನೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.