ದುರಸ್ತಿ ಕಾಣದ ರಸ್ತೆಯಲ್ಲಿ ಗ್ರಾಮಸ್ಥರ ಶ್ರಮದಾನ 


Team Udayavani, Nov 10, 2018, 11:30 AM IST

10-november-5.gif

ಅಜ್ಜಾವರ : ಸುಳ್ಯ – ಮಂಡೆಕೋಲು ಸಂಪರ್ಕ ಮಾರ್ಗವಾದ ಅಜ್ಜಾವರ ರಸ್ತೆ ಶಿಥಿಲಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಗುಂಡಿ ಬಿದ್ದ ರಸ್ತೆಗಳಲ್ಲಿ ಪ್ರಯಾಣಿಕರು ಅಂಗೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶ್ರಮದಾನದ ಮೂಲಕವೇ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅಜ್ಜಾವರ ರಸ್ತೆ 6.5 ಕಿ.ಮೀ. ದೂರವಿದೆ. ಡಾಮರು ಹಾಕಿ ಐದು ವರ್ಷ ಕಳೆದಿದ್ದು, ಆ ಬಳಿಕ ದುರಸ್ತಿ ಕಂಡಿಲ್ಲ. ಅತಿಯಾಗಿ ಮಳೆ ಬೀಳುವ ಪ್ರದೇಶವಾದ್ದರಿಂದ ಹಾಗೂ ಈ ಬಾರಿ ಅತಿವೃಷ್ಟಿಯೂ ಕಾಡಿದ್ದರಿಂದ ಸಹಜವಾಗಿ ರಸ್ತೆಯುದ್ದಕ್ಕೂ ದೊಡ್ಡ ಗಾತ್ರದ ಗುಂಡಿಗಳು ನಿರ್ಮಾಣವಾಗಿವೆ. ನಿರ್ವಹಣೆಯ ಅವ್ಯವಸ್ಥೆಯೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ಜಾಣ ಮೌನಕ್ಕೆ ಬೇಸರ
ರಸ್ತೆಗಳು ಜನರ ಪ್ರಯಾಣಕ್ಕೆ ಅಡ್ಡಿಯಾಗುತ್ತಿದ್ದರೂ ಅಧಿಕಾರಿಗಳು ಜಾಣ ಮೌನ ತಾಳಿರುವುದಕ್ಕೆ ಬೇಸತ್ತ ಅಜ್ಜಾವರ ಗ್ರಾಮಸ್ಥರು ರಸ್ತೆಯಲ್ಲಿರುವ ಹೊಂಡ – ಗುಂಡಿಗಳನ್ನು ಒಂದು ದಿನದ ಶ್ರಮದಾನದ ಮೂಲಕ ಮುಚ್ಚಿದ್ದಾರೆ. ದೊಡ್ಡ ಗಾತ್ರದ ಹೊಂಡಗಳಿದ್ದಲ್ಲಿ ಕೆಂಪು ಕಲ್ಲು, ಜೆಸಿಬಿ ಸಹಾಯದಿಂದ ಮಣ್ಣು ಹಾಕಿ ಮುಚ್ಚಲಾಗಿದೆ. ತೀವ್ರ ನಿರ್ಲಕ್ಷ್ಯಕ್ಕೆ ಒಳಗಾದ ಸುಳ್ಯ- ಅಜ್ಜಾವರ- ಮಂಡೆಕೋಲು ಜಿ.ಪಂ. ರಸ್ತೆಯನ್ನು ಶ್ರಮದಾನದ ಮೂಲಕ ಸರಿಪಡಿಸುವ ಮೊದಲು ಗ್ರಾಮಸ್ಥರು ಕರಪತ್ರ ಹಂಚಿ, ಜಾಗೃತಿ ಮೂಡಿಸಿದ್ದರು. ‘ನಮ್ಮ ರಸ್ತೆಯನ್ನು ನಿರ್ಲಕ್ಷಿಸಿದ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸಿ, ಎಲ್ಲರೂ ಒಂದಾಗಿ ಶ್ರಮದಾನದಲ್ಲಿ ಭಾಗವಹಿಸಿ, ನಮ್ಮ ರಸ್ತೆ- ನಮ್ಮ ಶ್ರಮ’ ಎಂದು ಕರಪತ್ರದಲ್ಲಿ ಮುದ್ರಿಸಲಾಗಿತ್ತು.

ಏಕಕಾಲಕ್ಕೆ 3 ಕಡೆ ಶ್ರಮದಾನ
ಒಂದು ದಿನದ ಶ್ರಮದಾನದಲ್ಲಿ ಗುಂಡಿ ಮುಚ್ಚುವ ಕೆಲಸ ಬೆಳಗ್ಗೆ 9.30ಕ್ಕೆ ಅಜ್ಜಾವರ ಗ್ರಾಮದ ಕಾಂತಮಂಗಲ, ಅಜ್ಜಾವರ ಹಾಗೂ ಅಡ್ಪಂಗಾಯದಲ್ಲಿ ಆರಂಭವಾಯಿತು. ಶ್ರಮದಾನದ ಮೂಲಕ ಪ್ರತಿಭಟಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ರಸ್ತೆ ದುರಸ್ತಿಗೆ ಗ್ರಾಮಸ್ಥರ ಮನವಿಯ ಹಿನ್ನೆಲೆಯಲ್ಲಿ ಕೇಂದ್ರದ ಸಿಆರ್‌ಎಫ್ ಯೋಜನೆಯಲ್ಲಿ 6 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ರಾಜ್ಯ ಸರಕಾರದ ಟೆಂಡರ್‌ ಪ್ರಕ್ರಿಯೆಯಲ್ಲಿ ಆದ ವಿಳಂದಿಂದ ರಸ್ತೆ ದುರಸ್ತಿ ಕಾಮಗಾರಿ ಇನ್ನೂ ನಡೆದಿಲ್ಲ. ಮುಂಬರುವ ಮಳೆಗಾಲಕ್ಕೆ ಮೊದಲಾದರೂ ರಸ್ತೆ ದುರಸ್ತಿಯಾಗಲಿ ಎಂದು ಆಗ್ರಹಿಸಿದ್ದಾರೆ.

ಗುಂಡಿ ಮುಚ್ಚಿದೆವು
ಅಜ್ಜಾವರ ರಸ್ತೆ ದುರಸ್ತಿಯ ಕುರಿತು ಹಲವು ಬಾರಿ ಮನವಿ ಮಾಡಲಾಗಿದೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಗ್ರಾಮಸ್ಥರು ಸೇರಿ ಶಿಥಿಲಗೊಂಡಿರುವ ರಸ್ತೆಯ ಹೊಂಡ ಗುಂಡಿಗಳನ್ನು ಶ್ರಮದಾನದ ಮೂಲಕ ಮುಚ್ಚಿದ್ದೇವೆ. 
– ಮಿಥುನ್‌ ಕರ್ಲಪ್ಪಾಡಿ, ಸ್ಥಳೀಯರು

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.