ಉಪ್ಪು ತಿಂದವ ನೀರು ಕುಡಿಯಲೇ ಬೇಕು
Team Udayavani, Nov 12, 2018, 6:10 AM IST
ಚಿಕ್ಕಮಗಳೂರು: ಉಪ್ಪು ತಿಂದವ ನೀರು ಕುಡಿಯಲೇ ಬೇಕು. ತಪ್ಪು ಮಾಡಿದವನಿಗೆ ಕಾನೂನು ಶಿಕ್ಷೆ ಕೊಟ್ಟೇ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕುರಿತು ಪ್ರತಿಕ್ರಿಯಿಸಿ, ತಪ್ಪು ಮಾಡಿದವನಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ನ್ಯಾಯಾಲಯ ತನ್ನ ಕೆಲಸ ಮಾಡಿದೆ ಎಂದರು.
ಜನಾರ್ದನ ರೆಡ್ಡಿಗೂ, ಬಿಜೆಪಿಗೂ ಸಂಬಂಧವಿಲ್ಲ. ಜನಾರ್ದನ ರೆಡ್ಡಿ ಜೈಲಿಗೆ ಹೋಗಿದ್ದರಿಂದ ಮತ್ತೆ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಬಿಜೆಪಿ ವರ್ಚಸ್ಸು ಕುಗ್ಗಿಸಲು ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ ಎಂಬ ಆರೋಪದಲ್ಲಿ ಅರ್ಥವೇ ಇಲ್ಲ ಎಂದರು.